Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಕೀಲ ವೃತ್ತಿಗೆ ಆಕಾಶವಲ್ಲ, ಬಾಹ್ಯಾಕಾಶವೇ ನಮ್ಮ ಮಿತಿ: ಶರತ್ ಶೆಟ್ಟಿ
    alvas nudisiri

    ವಕೀಲ ವೃತ್ತಿಗೆ ಆಕಾಶವಲ್ಲ, ಬಾಹ್ಯಾಕಾಶವೇ ನಮ್ಮ ಮಿತಿ: ಶರತ್ ಶೆಟ್ಟಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ: ಆಳ್ವಾಸ್ ಕಾನೂನು ಕಾಲೇಜಿನ ವತಿಯಿಂದ ಮಂಗಳೂರು ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಆಯ್ಕೆಯಾದ ಜಗದೀಶ್ ಶೇಣವ ಹಾಗೂ ಮೂಡುಬಿದಿರೆ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಆಯ್ಕೆಯಾದ ಶರತ್ ಶೆಟ್ಟಿ ಅವರಿಗೆ ಸನ್ಮಾನ ಕಾರ್ಯಕ್ರಮ ಶನಿವಾರ ವಿದ್ಯಾಗಿರಿಯ ಕುವೆಂಪು ಸಭಾಂಗಣದಲ್ಲಿ ನಡೆಯಿತು.

    Click Here

    Call us

    Click Here

    ಇಲ್ಲಿ ಬಾಹ್ಯಕಾಶವೇ ಮಿತಿ:
    ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಮಂಗಳೂರು ಬಾರ್ ಅಸೋಸಿಯೇಷನ್ ಅಧ್ಯಕ್ಷ ಜಗದೀಶ್ ಶೇಣವ ವಕೀಲ ವೃತ್ತಿಯಲ್ಲಿ ದೊರೆಯುವ ಹೆಸರು, ಗೌರವ ಮತ್ತು ಆರ್ಥಿಕ ಯಶಸ್ಸು ಬೇರೆ ಯಾವ ಕ್ಷೇತ್ರಗಳಲ್ಲೂ ಸಿಗಲಾರದು. ಇಲ್ಲಿ ಆಕಾಶವಲ್ಲ, ಬಾಹ್ಯಾಕಾಶವೇ ನಮ್ಮ ಮಿತಿ ಎಂದರು.

    ಮೂರನೇ ಚುನಾವಣೆಯಲ್ಲಿ ಗೆಲುವು:
    ವಿದ್ಯಾರ್ಥಿ ಜೀವನದಲ್ಲಿ ಕಾಲೇಜು ನಾಯಕತ್ವ ಚುನಾವಣೆಯಲ್ಲಿ ಸ್ಪರ್ಧಿಸಿದ್ದೆ. ಬಳಿಕ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆಯನ್ನು ಎದುರಿಸಿದ್ದೆ. ಇದೀಗ ಮಂಗಳೂರು ಬಾರ್ ಅಸೋಸಿಯೇಷನ್ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗುವ ಮೂಲಕ ಮೂರನೇ ಪ್ರಮುಖ ಚುನಾವಣೆಯಲ್ಲಿ ಯಶಸ್ಸು ಕಂಡಿದ್ದೇನೆ.  ತಾನು ಮೂಲತಃ ವೈದ್ಯನಾಗುವ ಕನಸು ಕಂಡಿದ್ದೆ. ಆದರೆ ಪಿಸಿಎಂಬಿ ವಿಭಾಗದಲ್ಲಿ ಅನುತ್ತೀರ್ಣನಾದ ಬಳಿಕ ಕಲಾ ವಿಭಾಗಕ್ಕೆ ಸೇರ್ಪಡೆಗೊಂಡೆ. ಜೀವನದ ಸೋಲುಗಳೇ ನನ್ನ ಯಶಸ್ಸಿನ ದಾರಿಯನ್ನು ರೂಪಿಸಿದವು ಎಂದು ಹೇಳಿದರು.

    ಕಾನೂನು ಹಿನ್ನಲೆಯಿಂದ ಸಾಧನೆ:
    ಸ್ವಾತಂತ್ರ್ಯ ಹೋರಾಟಗಾರರು, ರಾಷ್ಟ್ರನಾಯಕರು ಹಾಗೂ ಸಮಾಜ ಪರಿವರ್ತಕರು ವಕೀಲ ವೃತ್ತಿಯಿಂದಲೇ ಬಂದವರು. ಮಹಾತ್ಮ ಗಾಂಧಿ, ಸರ್ದಾರ್ ವಲ್ಲಭಭಾಯಿ ಪಟೇಲ್ ಸೇರಿದಂತೆ ಅನೇಕ ರಾಷ್ಟ್ರೀಯ ನಾಯಕರು ವಕೀಲರಾಗಿದ್ದರು. ಇಂದಿನ ರಾಜಕೀಯ ಮತ್ತು ಸಾರ್ವಜನಿಕ ಜೀವನದಲ್ಲೂ ಹಲವಾರು ಪ್ರಮುಖ ನಾಯಕರು ಕಾನೂನು ಹಿನ್ನೆಲೆಯಿಂದ ಬಂದವರು ಎಂದು ತಿಳಿಸಿದರು.

    ವಕೀಲರು ಕೇವಲ ನ್ಯಾಯಾಲಯದೊಳಗೆ ಮಾತ್ರ ಸೀಮಿತರಾಗಿರಬೇಕಿಲ್ಲ:
    ಉತ್ತಮ ನಾಯಕರು, ನೀತಿ ರೂಪಿಸುವವರು ಹಾಗೂ ಕಾರ್ಪೊರೇಟ್ ವಲಯದ ತಜ್ಞರಾಗಿಯೂ ಬೆಳೆಯಬಹುದು. ಇತರ ಕ್ಷೇತ್ರಗಳಲ್ಲಿ ನಿವೃತ್ತಿಯ ವಯಸ್ಸು ಇದ್ದರೂ, ವಕೀಲ ವೃತ್ತಿಯಲ್ಲಿ ಜೀವಿತಾವಧಿಯವರೆಗೆ ಸಕ್ರಿಯವಾಗಿ ಕಾರ್ಯನಿರ್ವಹಿಸಲು ಅವಕಾಶವಿದೆ ಎಂದು ಹೇಳಿದರು.

    Click here

    Click here

    Click here

    Click Here

    Call us

    Call us

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಕೀಲ ವೃತ್ತಿಗೆ ವಿಶೇಷ ಗೌರವ:
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಕೀಲ ವೃತ್ತಿಗೆ ವಿಶೇಷ ಗೌರವವಿದೆ. ವೃತ್ತಿಯ ಘನತೆ ಮತ್ತು ನೈತಿಕತೆಯನ್ನು ಕಾಪಾಡಿಕೊಂಡರೆ ಹಣ ಹಾಗೂ ಯಶಸ್ಸು ಸಹಜವಾಗಿಯೇ ಬರುತ್ತದೆ. ವೃತ್ತಿಪರರಾಗುವುದರ ಜೊತೆಗೆ ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು.

    ಸಾಮಾಜಿಕ ಪ್ರಜ್ಞೆ ಜಾಗೃತವಾಗಿರಬೇಕು
    ಇಂದು ಸಮಾಜದಲ್ಲಿ ಹಕ್ಕುಗಳ ಬಗ್ಗೆ ಹೆಚ್ಚು ಮಾತನಾಡಲಾಗುತ್ತಿದೆ. ಆದರೆ ಕರ್ತವ್ಯಗಳ ಬಗ್ಗೆಯೂ ಸಮಾನ ಗಮನ ನೀಡಬೇಕು. ಪ್ರತಿಯೊಬ್ಬರೂ ಸಾಮಾಜಿಕ ಪ್ರಜ್ಞೆಯನ್ನು ಬೆಳೆಸಿಕೊಂಡರೆ ಭಾರತವನ್ನು ವಿಶ್ವದ ಅಗ್ರ ರಾಷ್ಟ್ರವನ್ನಾಗಿ ರೂಪಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
    ಮೂಡುಬಿದಿರೆ ವಕೀಲರ ಸಂಘದ ಅಧ್ಯಕ್ಷ ಶರತ್ ಶೆಟ್ಟಿ ಮಾತನಾಡಿ,  ಸಮಾಜದಲ್ಲಿ ನ್ಯಾಯ, ಸಮಾನತೆ ಮತ್ತು ಕಾನೂನಿನ ಅನುಷ್ಠಾನದಲ್ಲಿ ಮಹತ್ತರ ಜವಾಬ್ದಾರಿಯನ್ನು ವಕೀಲರು ನಿರ್ವಹಿಸುತ್ತಾರೆ. ಆದ್ದರಿಂದಲೇ ವಕೀಲ ವೃತ್ತಿಯನ್ನು ಅತ್ಯಂತ ಗೌರವಾನ್ವಿತ ಮತ್ತು ಶ್ರೇಷ್ಠ ವೃತ್ತಿಗಳಲ್ಲಿ ಒಂದೆಂದು ಪರಿಗಣಿಸಲಾಗುತ್ತದೆ.

    ಯುದ್ಧಕಾಂಡ ಸಿನಿಮಾದಿಂದ  ವಕೀಲನಾದ ಕಥೆ
    ತಾವು 9ನೇ ತರಗತಿಯಲ್ಲಿ ರವಿಚಂದ್ರನ್ ಅಭಿನಯದ ಯುದ್ಧಕಾಂಡ ಚಲನಚಿತ್ರ ವೀಕ್ಷಿಸಿದ ಬಳಿಕ ವಕೀಲನಾಗುವ ಪ್ರೇರಣೆ ಪಡೆದಿದ್ದಾಗಿ ಸ್ಮರಿಸಿದರು. ಆರಂಭದಲ್ಲಿ ರಾಜಕಾರಣಿಯಾಗಬೇಕೆಂಬ ಕನಸಿದ್ದರೂ, ಬಳಿಕ ಕಾನೂನು ಕ್ಷೇತ್ರದತ್ತ ಹೆಚ್ಚಿನ ಆಸಕ್ತಿ ಬೆಳೆದು ವಕೀಲ ವೃತ್ತಿಯನ್ನು ಆಯ್ಕೆ ಮಾಡಿಕೊಂಡೆ ಎಂದು ಹೇಳಿದರು. ವಿದ್ಯಾರ್ಥಿ ಜೀವನವನ್ನು ಸದುಪಯೋಗಪಡಿಸಿಕೊಂಡರೆ ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದ ಅವರು, ವೃತ್ತಿಜೀವನದ ಆರಂಭದಲ್ಲಿ ಅನೇಕ ಸಂಕಷ್ಟಗಳನ್ನು ಎದುರಿಸಿದ್ದಾಗಿ ಹೇಳಿದರು.

    ಸಾಲದ ಕೋಟ್
    ವಕೀಲನಾಗಿ ವೃತ್ತಿ ಆರಂಭಿಸುವ ಸಂದರ್ಭದಲ್ಲಿ ಕೋಟ್ ಖರೀದಿಸಲು ಸಹ ಗೆಳೆಯನಿಂದ 1,500 ರೂಪಾಯಿ ಸಾಲ ಪಡೆದಿದ್ದೆ. ಆದರೆ ಕಠಿಣ ಪರಿಶ್ರಮ ಮತ್ತು ನಿರಂತರ ಪ್ರಯತ್ನದ ಮೂಲಕ ಇಂದು ಬಾರ್ ಅಸೋಸಿಯೇಷನ್ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗುವ ಅವಕಾಶ ದೊರೆತಿದೆ ಎಂದು ತಮ್ಮ ಜೀವನಾನುಭವ ಹಂಚಿಕೊಂಡರು. ಯುವಕರು ಸವಾಲುಗಳಿಗೆ ಹೆದರದೆ ತಮ್ಮ ಗುರಿಯತ್ತ ನಿರಂತರವಾಗಿ ಶ್ರಮಿಸಿದರೆ ಯಶಸ್ಸು ಖಂಡಿತ ಸಿಗುತ್ತದೆ ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಕಾನೂನು ಚಿಂತನೆ ಎಲ್ಲಾ ಕ್ಷೇತ್ರಗಳಲ್ಲಿಯೂ ಅಗತ್ಯವಾಗಿದೆ. ವಿದ್ಯಾರ್ಥಿಗಳು ಕೇವಲ ಪದವಿ ಪಡೆಯುವುದಕ್ಕೆ ಸೀಮಿತವಾಗದೆ, ಶಿಸ್ತು, ಪ್ರಾಮಾಣಿಕತೆ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳಬೇಕು. ಹಕ್ಕುಗಳ ಬಗ್ಗೆ ನಾವು ಹೆಚ್ಚು ಮಾತನಾಡುತ್ತೇವೆ. ಆದರೆ ಕರ್ತವ್ಯಗಳ ಬಗ್ಗೆ ಅರಿವು ಮೂಡಿಸಿಕೊಳ್ಳುವುದು ಅಗತ್ಯ. ಕಾನೂನು ಶಿಕ್ಷಣದ ಪಾವಿತ್ರ್ಯವನ್ನು ಕಾಪಾಡಿಕೊಂಡು ಸಮಾಜದಲ್ಲಿ ಕಾನೂನು ಜಾಗೃತಿ ಮೂಡಿಸುವ ಕಾರ್ಯದಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕುಎಂದು ಹೇಳಿದರು. ಗುರಿಯತ್ತ ಸ್ಪಷ್ಟವಾದ ಗಮನ, ಶಿಸ್ತು ಮತ್ತು ನೈತಿಕತೆ ಯಶಸ್ಸಿನ ಮೂಲಮಂತ್ರ. ಹೊಂದಾಣಿಕೆ ಮಾಡಿಕೊಳ್ಳಬಹುದು, ಆದರೆ ತತ್ವಗಳಲ್ಲಿ ರಾಜಿ ಮಾಡಿಕೊಳ್ಳಬಾರದು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

    ಕಾರ್ಯಕ್ರಮದಲ್ಲಿ ಸಂಸ್ಥೆಯವತಿಯಿಂದ ನೂತನವಾಗಿ ಅಧಿಕಾರ ಸ್ವೀಕಾರ ಮಾಡಿದ ಜಗದೀಶ್ ಶೇಣವ, ಶರತ್ ಶೆಟ್ಟಿಯನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಮೊಹಮ್ಮದ್ ಸಫ್ವಾನ್ ನಿರೂಪಿಸಿದರು. ಕಾರ್ಯಕ್ರಮದಲ್ಲಿ  ಹಿರಿಯ ವಕೀಲರಾದ ಬಾಹುಬಲಿ ಪ್ರಸಾದ, ಶ್ವೇತಾ ಜೈನ್, ಮನೋಜ್ ಶೆಣೈ, ಜಯಪ್ರಕಾಶ್ ಭಂಡಾರಿ, ಆಳ್ವಾಸ್ ಕಾನೂನು ಕಾಲೇಜಿನ ಪ್ರಾಚರ್ಯ, ಮಹಾಂತೇಶ್ ಜಿ.ಎಸ್. ಇದ್ದರು.

    Alvas nudisiri
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಜೀವನ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಾಸ ಕಾರ್ಯಾಗಾರ

    13/06/2026

    ಪ್ರಕೃತಿಗೆ ಮರಳಿ ನೀಡದೆ ಪ್ರತಿಕ್ಷಣ ಬಳಸುತ್ತಿದ್ದೇವೆ: ಆರ್.ಕೆ. ನಾಯರ್

    09/06/2026

    ಕೆ.ಸಿ.ಇ.ಟಿ ಫಲಿತಾಂಶದಲ್ಲಿ ಹೆಮ್ಮಾಡಿ ಜನತಾ ಪಿಯು ಕಾಲೇಜಿಗೆ ರಾಜ್ಯ ಮಟ್ಟದ 52ನೇ ರ‍್ಯಾಂಕ್‌

    09/06/2026
    Leave A Reply Cancel Reply

    one × 3 =

    Call us

    Click Here

    Call us

    Call us

    Call us
    Highest Viewed Recently
    • ತೆಕ್ಜಟ್ಟೆ: ಪಂಚವರ್ಣ ಮಹಿಳಾ ಮಂಡಲದಿಂದ ಅರಿವು ನಿಮ್ಮಗಿರಲಿ ನೆರವು 14ನೇ ಸರಣಿ ಕಾರ್ಯಕ್ರಮ
    • ಗಂಗೊಳ್ಳಿ ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ವತಿಯಿಂದ ಮಕ್ಕಳಿಗೆ ಉಚಿತ ನೋಟ್ಸ್ ಪುಸ್ತಕ ವಿತರಣೆ
    • ವಕೀಲ ವೃತ್ತಿಗೆ ಆಕಾಶವಲ್ಲ, ಬಾಹ್ಯಾಕಾಶವೇ ನಮ್ಮ ಮಿತಿ: ಶರತ್ ಶೆಟ್ಟಿ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಜೀವನ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಾಸ ಕಾರ್ಯಾಗಾರ
    • ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ – ಕಡತಗಳ ತ್ವರಿತ ವಿಲೇವಾರಿಗೆ ಶಾಸಕ ಗಂಟಿಹೊಳೆ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.