ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಹಿಂದಿನ ನಮ್ಮ ಹಿರಿಯರು ನೀಡಿದ ಆಹಾರ ಕ್ರಮಗಳನ್ನು ಬಿಟ್ಟು ಆಧುನಿಕ ಆಹಾರ ಪದ್ಧತಿಗೆ ಒಗ್ಗಿಕೊಳ್ಳುತ್ತಿರುವುದು ಬೇಸರದ ಸಂಗತಿ ಅದರಲ್ಲೂ ಇಂದಿನ ಮಕ್ಕಳು ಜಂಕ್ ಪುಡ್ ಸೇವನೆಯಿಂದ ಹಲವಾರು ಖಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ ಎಂದು ಕೋಟ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಮಾಧವ ಪೈ ಹೇಳಿದರು.

ಅವರು ಶನಿವಾರ ತೆಕ್ಕಟ್ಟೆ ಕುವೆಂಪು ಮಾದರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋಟದ ಪಂಚವರ್ಣ ಮಹಿಳಾ ಮಂಡದ ನೇತೃತ್ವದಲ್ಲಿ ಮಾತೃ ಸಂಸ್ಥೆ ಪಂಚವರ್ಣ ಯುವಕ ಮಂಡಲದ ಮಾರ್ಗದರ್ಶನದಲ್ಲಿ ಅರಿವು ನಿಮ್ಮಗಿರಲಿ ನೆರವು ಆರೋಗ್ಯ ಮಾಹಿತಿ 14ನೇ ಸರಣಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಸೊಪ್ಪು ತರಕಾರಿಗಳನ್ನು ಹೆಚ್ಚು ಸೇವಿಸುವುದರ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಿ ಆರೋಗ್ಯದ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮವನ್ನು ಸಮಾಜಸೇವಕ ಮಲ್ಯಾಡಿ ಶಿವರಾಮ ಶೆಟ್ಟಿ ಉದ್ಘಾಟಿಸಿ ಪಂಚವರ್ಣ ಸಂಘಟನೆಯ ಸಾಮಾಜಿಕ ಕಾರ್ಯವನ್ನು ಪ್ರಶಂಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ವಹಿಸಿದ್ದರು.
ಮುಖ್ಯ ಅಭ್ಯಾಗತರಾಗಿ ತೆಕ್ಕಟ್ಟೆ ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ್ ಕುಮಾರ್, ಪಂಚವರ್ಣ ಯುವಕ ಮಂಡದ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಅಧ್ಯಕ್ಷ ಮನೋಹರ್ ಪೂಜಾರಿ, ತೆಕ್ಕಟ್ಟೆ ಗ್ರಾ.ಪಂ ಎಸ್ ಎಲ್ ಆರ್ ಎಂ ಘಟಕದ ಮುಖ್ಯಸ್ಥೆ ರೇವತಿ ತೆಕ್ಕಟ್ಟೆ ಉಪಸ್ಥಿತರಿದ್ದರು.
ಪಂಚವರ್ಣ ಮಹಿಳಾ ಮಂಡಲದ ವೀಣಾ ಪ್ರಕಾಶ್ ಸ್ವಾಗತಿಸಿ, ಕಾರ್ಯದರ್ಶಿ ವಸಂತಿ ಹಂದಟ್ಟು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮವನ್ನು ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ನಿರೂಪಿದರು. ಶಾಲಾ ಮುಖ್ಯ ಶಿಕ್ಷಕಿ ವಿದ್ಯಾವತಿ ಉಪ್ಪೂರು ವಂದಿಸಿದರು.

















