Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಂದಟ್ಟು ಪರಿಸರದಲ್ಲಿ ಪಂಚವರ್ಣ ಸಂಘಟನೆ 305ನೇ ಭಾನುವಾರದ ಪರಿಸರಸ್ನೇಹಿ ಹಸಿರು ಹೆಜ್ಜೆ ಅಭಿಯಾನ
    ಊರ್ಮನೆ ಸಮಾಚಾರ

    ಹಂದಟ್ಟು ಪರಿಸರದಲ್ಲಿ ಪಂಚವರ್ಣ ಸಂಘಟನೆ 305ನೇ ಭಾನುವಾರದ ಪರಿಸರಸ್ನೇಹಿ ಹಸಿರು ಹೆಜ್ಜೆ ಅಭಿಯಾನ

    No Comments
    Facebook Twitter Pinterest LinkedIn WhatsApp Reddit Tumblr Email
    ?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಮಕ್ಕಳಲ್ಲಿ ಪರಿಸರ ಪ್ರಜ್ಞೆ ಜಾಗೃತಗೊಳಿಸುವ ಕಾರ್ಯ ನಿಜಕ್ಕೂ ಅರ್ಥಪೂರ್ಣ ಕಾರ್ಯ ಎಂದು ಪಂಚವರ್ಣ ನಿರಂತರ ಪರಿಸರಸ್ನೇಹಿ ಅಭಿಯಾನವನ್ನು ಶಿಕ್ಷಣ ತಜ್ಞ ಕೋಟ ವಿವೇಕ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಕೆ. ಜಗದೀಶ ನಾವಡರು ಮುಕ್ತ ಕಂಠದಿಂದ ಶ್ಲಾಘಿಸಿದರು.

    Click Here

    Call us

    Click Here

    ಅವರು ಭಾನುವಾರ ಕೋಟದ ಹಂದಟ್ಟು ಪರಿಸರದಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇವರ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಪೇತ್ರಿ ಅನ್ನಪೂರ್ಣ ನರ್ಸರಿ ಇವರ ಸಹಯೋಗದೊಂದಿಗೆ 305ನೇ ವಾರದ ಪರಿಸರಸ್ನೇಹಿ ಹಸಿರು ಹೆಜ್ಜೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಗಿಡ ಮರಗಳ ಬಗ್ಗೆ ಮಕ್ಕಳಿಗೆ ನಮ್ಮ ಹಿಂದಿನ ಹಿರಿಯರು ತಿಳಿ ಹೇಳುವ ಕಾರ್ಯ ಮಾಡಿದ್ದರು ಆದರೆ ಇದೀಗ ಅದರ ಬಗ್ಗೆ ಅರಿವು ಕ್ಷೀಣಿಸಿದೆ ಈ ದಿಸೆಯಲ್ಲಿ ಪೋಷಕರು ಅದರ ಬಗ್ಗೆ ಜಾಗೃತಗೊಳಿಸುವ ಕಾರ್ಯ ಮಾಡಲಿ ಪರಿಸರ ಸಮತೋಲನದಿಂದ ಇದ್ದರೆ ವಾತಾವರಣದಲ್ಲಿ ವೈಪರೀತ್ಯಗಳು ಇನ್ನಿಲ್ಲದಂತ್ತಾಗುತ್ತದೆ.ಪಂಚವರ್ಣ ಸಂಘಟನೆ ನಿತ್ಯ ನಿರಂತರವಾಗಿ ಪರಿಸರದ ಬಗೆಗಿನ ಕಾಳಜಿ ಕಾರ್ಯಕ್ರಮಗಳು ಇತರ ಎಲ್ಲಾ ಸಂಘಗಳಿಗೂ ಮಾದರಿಯಾಗಲಿ ಎಂದರು.

    ಅಭಿಯಾನದಲ್ಲಿ ಉಪಸ್ಥಿತರಿದ್ದ ಮಕ್ಕಳಿಗೆ ಪೋಷಕರಿಗೆ ಪಂಚವರ್ಣದ ಸದಸ್ಯ ಮಹೇಶ್ ಬೆಳಗಾವಿ ಪ್ರತಿಜ್ಞಾ ವಿಧಿ ಭೋದಿಸಿದರು. ಹಲವಾರು ಮನೆಗಳಿಗೆ ಮುಂಜಾನೆ ತೆರಳಿದ ಪಾರಿಜಾತ, ಇತರ ಗಿಡ ನೆಟ್ಟು ಅದರ ಮಹತ್ವದ ಬಗ್ಗೆ ಮಾಹಿತಿ ನೀಡಲಾಯಿತು.

    ಈ ಸಂದರ್ಭದಲ್ಲಿ ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ. ಮನೋಹರ್ ಪೂಜಾರಿ, ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಹಂದಟ್ಟು ಮಹಿಳಾ ಬಳಗದ ಅಧ್ಯಕ್ಷೆ ಯಶೋಧ ಹಂದಟ್ಟು, ಕೋಟತಟ್ಟು ಪಂಚಾಯತ್ ಮಾಜಿ ಸದಸ್ಯ ಪ್ರಕಾಶ್ ಹಂದಟ್ಟು, ಗ್ರಾಮದ ಪ್ರಮುಖರಾದ ಆನಂದ್ ಪೂಜಾರಿ ಉಪಸ್ಥಿತರಿದ್ದರು. ಪಂಚವರ್ಣ ಮಹಿಳಾ ಮಂಡಲದ ಜೊತೆಕಾರ್ಯದರ್ಶಿ ಶಕೀಲ ಎನ್ ಪೂಜಾರಿ ಸ್ವಾಗತಿಸಿ, ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ನಿರೂಪಿಸಿ, ಇಂಡಿಕಾ ಕಲಾ ಬಳಗದ ಪ್ರಭಾಕರ್ ಮಣೂರು ವಂದಿಸಿದರು.

    Click here

    Click here

    Click here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಗುರುಪೂರ್ಣಿಮೆಯ ಸಂಭ್ರಮಾಚರಣೆ

    30/07/2026

    ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನ ಜ್ಞಾನದ ಬೆಳಕಿನಿಂದ ಮಾತ್ರ ಸಾಧ್ಯ: ಡಾ. ರಘು ನಾಯ್ಕ್

    30/07/2026

    ಕುಂದಾಪುರ: ಮಲಗಿದ್ದ ವ್ಯಕ್ತಿಯ ತಲೆ ಮೇಲೆ ಕಲ್ಲು ಹಾಕಿ ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

    30/07/2026
    Leave A Reply Cancel Reply

    7 + eighteen =

    Call us

    Click Here

    Call us

    Call us

    Call us
    Highest Viewed Recently
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಗುರುಪೂರ್ಣಿಮೆಯ ಸಂಭ್ರಮಾಚರಣೆ
    • ಡಾ. ಶಾಂತಾರಾಮ ಸಾಹಿತ್ಯ ಪ್ರಶಸ್ತಿಗೆ ಶ್ರೀಧರ ಬಳಗಾರರ ʼಮಾರ ಮಿಂದನುʼಕಥಾ ಸಂಕಲನ ಆಯ್ಕೆ
    • ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನ ಜ್ಞಾನದ ಬೆಳಕಿನಿಂದ ಮಾತ್ರ ಸಾಧ್ಯ: ಡಾ. ರಘು ನಾಯ್ಕ್
    • ಕುಂದಾಪುರ: ಮಲಗಿದ್ದ ವ್ಯಕ್ತಿಯ ತಲೆ ಮೇಲೆ ಕಲ್ಲು ಹಾಕಿ ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ
    • ಯೋಗಾಸನ ಸ್ಪರ್ಧೆ: ವಿದ್ಯಾರಣ್ಯ ಶಾಲೆಯ ಲಾಸ್ಯ ಮಧ್ಯಸ್ಥ ಜಿಲ್ಲಾ ಮಟ್ಟಕ್ಕೆ ಆಯ್ಕೆ 

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.