Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಿಜೆಪಿ ಅವರಿಂದ ಗ್ಯಾರಂಟಿ ಯೋಜನೆಯ ಬಗ್ಗೆ ಕಾಂಗ್ರೆಸ್‌ ಸರ್ಕಾರಕ್ಕೆ ಸಲಹೆ ಅಗತ್ಯವಿಲ್ಲ: ಕೆ. ವಿಕಾಸ್ ಹೆಗ್ಡೆ
    ಊರ್ಮನೆ ಸಮಾಚಾರ

    ಬಿಜೆಪಿ ಅವರಿಂದ ಗ್ಯಾರಂಟಿ ಯೋಜನೆಯ ಬಗ್ಗೆ ಕಾಂಗ್ರೆಸ್‌ ಸರ್ಕಾರಕ್ಕೆ ಸಲಹೆ ಅಗತ್ಯವಿಲ್ಲ: ಕೆ. ವಿಕಾಸ್ ಹೆಗ್ಡೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ/
    ಕುಂದಾಪುರ:
    2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದಾಗ ಗ್ಯಾರಂಟಿಗೆ ವಾರಂಟಿ ಇಲ್ಲಾ, ವ್ಯಾಲಿಡಿಟಿ ಇಲ್ಲಾ, ಗ್ಯಾರಂಟಿ ಪುಸ್ತಕದ ಹಾಳೆ ಮದ್ಯದಲ್ಲಿ ಇರುವ ನವಿಲುಗರಿ ಎಂದು ಟೀಕಿಸಿದ ಬಿಜೆಪಿ ಅವರಿಂದ ಗ್ಯಾರಂಟಿ ಯೋಜನೆಯ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಸಲಹೆ ಅಗತ್ಯವಿಲ್ಲವೆಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.

    Click Here

    Call us

    Click Here

    ಮಾನ್ಯ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ತಿಂಗಳುಗಳಲ್ಲಿ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಾಗ ಈ ಗ್ಯಾರಂಟಿಯಿಂದ ಜನ ಸೋಮಾರಿಗಳಾಗುತ್ತಾರೆ. ಗ್ಯಾರಂಟಿಯಿಂದ ಸರ್ಕಾರ ದಿವಾಳಿಯಾಗಿದೆ ಎಂದು ಟೀಕಿಸಿದ ಬಿಜೆಪಿ ನಾಯಕರು ಇಂದು ಸರ್ಕಾರ ಮೂರು ವರ್ಷಗಳ ನಂತರ ಗ್ಯಾರಂಟಿ ಫಲಾನುಭವಿಗಳ ಪುನರ್ ಪರಿಶೀಲನೆಗೆ ಮರು ಅರ್ಜಿ ಸಲ್ಲಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಹೇಳಿಕೆ ಬಗ್ಗೆ ರಾಜಕಾರಣ ಮಾಡುವ ಬಿಜೆಪಿಯವರಿಗೆ ಈ ಗ್ಯಾರಂಟಿ ಯೋಜನೆ ನಿದ್ದೆಗೆಡಿಸಿದ್ದು ಗ್ಯಾರಂಟಿ.

    ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ಉದ್ದೇಶ ಸರ್ಕಾರದ ಎಲ್ಲಾ ಯೋಜನೆಗಳು ಅದರ ಜೊತೆ ಪಂಚ ಗ್ಯಾರಂಟಿಗಳೂ ಕೂಡ ಅರ್ಹ ಹಾಗೂ ನೈಜ ಫಲಾನುಭವಿಗಳಿಗೆ ದೊರೆಯಬೇಕು ಎನ್ನುವ ಉದ್ದೇಶ. ಗ್ಯಾರಂಟಿ ಯೋಜನೆ ಪ್ರಾರಂಭವಾಗಿ ಮೂರು ವರ್ಷ ಸಂದಿರುವಾಗ ಒಂದಷ್ಟು ಫಲಾನುಭವಿಗಳು ನಿಧನರಾಗಿದ್ದಾರೆ, ಗೃಹ ಜ್ಯೋತಿಗೆ ಅರ್ಹರಾದವರ ವಿದ್ಯುತ್ ಬಳಕೆ ಮಿತಿಯನ್ನು ತಿಳಿಯಲು ಇತ್ಯಾದಿಗಳ ಬಗ್ಗೆ ಮರು ಪರಿಶೀಲನೆಗೆ ಸರ್ಕಾರ ಮುಂದಾಗಿದೆ ಬಿಟ್ಟರೆ ಬೇರೆ ಯಾವುದೇ ದುರುದ್ದೇಶ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲಾ.

    ಇನ್ನು ಗ್ಯಾರಂಟಿ ಅನುಷ್ಠಾನ ಸಮಿತಿ ಕಾಂಗ್ರೆಸ್ ಸರ್ಕಾರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರುಗಳಿಗೆ ಜನಸೇವೆ ಮಾಡಲು ನೀಡಿದ ಅಧಿಕಾರ. ಇಂದು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರು, ಸದಸ್ಯರು ಎಲ್ಲರೂ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ, ಇದರ ಬಗ್ಗೆ ಎಲ್ಲರಿಗೂ ಹೆಮ್ಮೆಯಿದೆ. ಬಿಜೆಪಿ ನಾಯಕರು ಈ ಸಮಿತಿ ಬಗ್ಗೆ ಮಾತನಾಡುವ ಮೊದಲು ತಮ್ಮ ಸರ್ಕಾರ ಇದ್ದಾಗ ತಮ್ಮನ್ನು ಅಧಿಕಾರದ ಗದ್ದುಗೆಗೆ ಏರಿಸಲು ಶ್ರಮಪಟ್ಟ ಕಾರ್ಯಕರ್ತರುಗಳಿಗೆ ನಂತರ ಏನು ಅಧಿಕಾರ ನೀಡಿದ್ದೀರಿ ಎನ್ನುವ ಬಗ್ಗೆ ಒಮ್ಮೆ ಆಲೋಚನೆ ಮಾಡುವುದು ಉತ್ತಮ ಎಂದು ಅವರು ಪತ್ರಿಕಾ ಹೇಳಿಕೆ ಮೂಲಕ ಪ್ರಶ್ನಿಸಿದ್ದಾರೆ.

    Click here

    Click here

    Click here

    Click Here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಮನೆಗಳ್ಳತನ, ಬೈಕ್‌ ಕಳವು ಪ್ರಕರಣ – ಆರೋಪಿ ಬಂಧನ

    15/06/2026

    ಎಸ್‌. ಜನಾರ್ದನ ಮರವಂತೆ ಅವರು ರಾಷ್ಟ್ರಕ್ಕೆ ಮಾದರಿ ಗ್ರಾಪಂ ರೂಪಿಸಿದರು: ಕೋಟ ಶ್ರೀನಿವಾಸ ಪೂಜಾರಿ

    15/06/2026

    ಹಂದಟ್ಟು ಪರಿಸರದಲ್ಲಿ ಪಂಚವರ್ಣ ಸಂಘಟನೆ 305ನೇ ಭಾನುವಾರದ ಪರಿಸರಸ್ನೇಹಿ ಹಸಿರು ಹೆಜ್ಜೆ ಅಭಿಯಾನ

    15/06/2026
    Leave A Reply Cancel Reply

    4 + thirteen =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಮನೆಗಳ್ಳತನ, ಬೈಕ್‌ ಕಳವು ಪ್ರಕರಣ – ಆರೋಪಿ ಬಂಧನ
    • ಎಸ್‌. ಜನಾರ್ದನ ಮರವಂತೆ ಅವರು ರಾಷ್ಟ್ರಕ್ಕೆ ಮಾದರಿ ಗ್ರಾಪಂ ರೂಪಿಸಿದರು: ಕೋಟ ಶ್ರೀನಿವಾಸ ಪೂಜಾರಿ
    • ಬಿಜೆಪಿ ಅವರಿಂದ ಗ್ಯಾರಂಟಿ ಯೋಜನೆಯ ಬಗ್ಗೆ ಕಾಂಗ್ರೆಸ್‌ ಸರ್ಕಾರಕ್ಕೆ ಸಲಹೆ ಅಗತ್ಯವಿಲ್ಲ: ಕೆ. ವಿಕಾಸ್ ಹೆಗ್ಡೆ
    • ಹಂದಟ್ಟು ಪರಿಸರದಲ್ಲಿ ಪಂಚವರ್ಣ ಸಂಘಟನೆ 305ನೇ ಭಾನುವಾರದ ಪರಿಸರಸ್ನೇಹಿ ಹಸಿರು ಹೆಜ್ಜೆ ಅಭಿಯಾನ
    • ಗಾಣಿಗ ಪ್ರತಿಷ್ಠಾನ ಬೈಂದೂರು: ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಪ್ರತಿಭಾ ಪುರಸ್ಕಾರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.