Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜವಾಬ್ದಾರಿಯುತ ಯುವ ಸಮೂಹವೇ ರಾಷ್ಟ್ರದ ಭವಿಷ್ಯ: ವಿವೇಕ್ ಆಳ್ವ
    alvas nudisiri

    ಜವಾಬ್ದಾರಿಯುತ ಯುವ ಸಮೂಹವೇ ರಾಷ್ಟ್ರದ ಭವಿಷ್ಯ: ವಿವೇಕ್ ಆಳ್ವ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ: ಜವಾಬ್ದಾರಿಯನ್ನು ಸ್ವೀಕರಿಸಿದಾಗ ಮಾತ್ರ ಬದುಕಿನಲ್ಲಿ ಸ್ಥಾನಮಾನ ಮತ್ತು ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ. ಶಿಕ್ಷಣದ ಜೊತೆಗೆ ಉತ್ತಮ ವ್ಯಕ್ತಿತ್ವ ಹಾಗೂ ಉತ್ತಮ ಮನಸ್ಸನ್ನು ರೂಪಿಸಿಕೊಳ್ಳುವುದು ವಿದ್ಯಾರ್ಥಿಗಳ ಪ್ರಮುಖ ಗುರಿಯಾಗಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು.

    Click Here

    Call us

    Click Here

    ಅವರು ಸೋಮವಾರ ನಡೆದ ಆಳ್ವಾಸ್ ಸ್ವಾಯತ್ತಾ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಇಂಡಕ್ಷನ್ ಕಾರ್ಯಕ್ರಮ ‘ಅಂಕುರ’ ಕೃಷಿಸಿರಿ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 1998ರಲ್ಲಿ ಕೇವಲ 25 ವಿದ್ಯಾರ್ಥಿಗಳು, ಎರಡು ವಿಭಾಗ ಹಾಗೂ 11 ಅಧ್ಯಾಪಕರೊಂದಿಗೆ ತನ್ನ ಶೈಕ್ಷಣಿಕ ಪಯಣವನ್ನು ಆರಂಭಿಸಿದ್ದ ಆಳ್ವಾಸ್ ಸಂಸ್ಥೆ, ಇಂದು 54 ಶೈಕ್ಷಣಿಕ ಕಾರ್ಯಕ್ರಮಗಳು, 122 ತರಗತಿ ಕೊಠಡಿಗಳು, 188 ಶಿಕ್ಷಕರು ಹಾಗೂ 3,191 ವಿದ್ಯಾರ್ಥಿಗಳನ್ನು ಒಳಗೊಂಡ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿ ಬೆಳೆದಿದೆ. ಸಂಸ್ಥೆಯ ಈ ಸಾಧನೆಯ ಹಿಂದಿನ ನಿಜವಾದ ಶಕ್ತಿ ಮತ್ತು ಬ್ರ‍್ಯಾಂಡ್ ಇಲ್ಲಿನ ವಿದ್ಯಾರ್ಥಿಗಳು.  ಮಕ್ಕಳು ತಮ್ಮ ಪಾಲಕರ ತ್ಯಾಗ ಮತ್ತು ನಿರೀಕ್ಷೆಗಳನ್ನು ಅರ್ಥಮಾಡಿಕೊಂಡು ಶಿಕ್ಷಣದ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

    ವಿದ್ಯಾರ್ಥಿಗಳು ಕನಸುಗಳ ಜೊತೆಗೆ ಜವಾಬ್ದಾರಿಗಳನ್ನೂ ಹೊತ್ತು ಸಾಗಬೇಕು. ತರಗತಿ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯ ಪಾಲ್ಗೊಳ್ಳುವಿಕೆ ವ್ಯಕ್ತಿತ್ವ ವಿಕಸನಕ್ಕೆ ನೆರವಾಗುತ್ತದೆ. ಈ ಹಂತದಲ್ಲಿ ಗುರಿಯೆಡೆಗೆ ಗಮನ ಕೇಂದ್ರೀಕರಿಸಿ ಅನಗತ್ಯ ಆಕರ್ಷಣೆಗಳಿಂದ ದೂರವಿರಬೇಕು. ಕೃತಕ ಬುದ್ಧಿಮತ್ತೆ ಉದ್ಯೋಗಗಳನ್ನು ಕಸಿದುಕೊಳ್ಳದು,  ಬದಲಾಗಿ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿದೆ.

    ತಂತ್ರಜ್ಞಾನದ ಬದಲಾವಣೆಗೆ ಹೊಂದಿಕೊಳ್ಳುವ ಸಾಮರ್ಥ್ಯವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದರು. ಶ್ರೇಷ್ಠತೆ, ಉತ್ತಮ ಪರಿಸರ ನಿರ್ಮಾಣ ಮತ್ತು ಸಾಮಾಜಿಕ ಅರಿವಿನತ್ತ ಯುವಜನತೆ ಸಾಗಿದಾಗ ಮಾತ್ರ ಅರ್ಥಪೂರ್ಣ ಸಮಾಜ ನಿರ್ಮಾಣ ಸಾಧ್ಯ. ಜವಾಬ್ದಾರಿಯುತ ಯುವ ಸಮೂಹವೇ ರಾಷ್ಟ್ರದ ಭವಿಷ್ಯವನ್ನು ರೂಪಿಸುತ್ತದೆ ಎಂದು ಅಭಿಪ್ರಾಯಪಟ್ಟರು.

    ಕಾಲೇಜಿನ ಪ್ರಾಚರ್ಯ ಡಾ. ಕುರಿಯನ್ ಮಾತನಾಡಿ, ವಿದ್ಯಾರ್ಥಿಗಳ ಬೆಳವಣಿಗೆಗೆ ಸುರಕ್ಷಿತ ಹಾಗೂ ಪ್ರೇರಣಾತ್ಮಕ ವಾತಾವರಣ ಅತ್ಯಗತ್ಯವಾಗಿದ್ದು, ಅಭದ್ರತೆ ಇರುವಲ್ಲಿ ಯಾವುದೇ ಸಾಧನೆ ಸಾಧ್ಯವಿಲ್ಲ ಎಂದರು. ಒಂದು ರಾಷ್ಟ್ರದ ಭವಿಷ್ಯ ರೂಪುಗೊಳ್ಳುವುದು ತರಗತಿ ಕೊಠಡಿಗಳಲ್ಲಿಯೇ. ಆದ್ದರಿಂದ ಶಿಕ್ಷಣ ಸಂಸ್ಥೆಗಳ ಪರಿಸರವು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಸೃಜನಶೀಲತೆ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವಂತಿರಬೇಕು. ಈ ಕಾರಣಕ್ಕಾಗಿಯೇ ತರಗತಿ ಕೊಠಡಿಯನ್ನು ಇಡೀ ಜಗತ್ತಿನ ಅತಿದೊಡ್ಡ ಪವರ್‌ಹೌಸ್ ಎಂದು ಪರಿಗಣಿಸಲಾಗಿದೆ. ವಿದ್ಯಾರ್ಥಿಗಳು ಸದಾ ಸಕಾರಾತ್ಮಕ ಚಿಂತನೆ ಹೊಂದಿದವರೊಂದಿಗೆ ಬೆರೆಯಬೇಕು. ನಕಾರಾತ್ಮಕ ಮನೋಭಾವದ ವ್ಯಕ್ತಿಗಳಿಂದ ದೂರವಿರುವುದು ವೈಯಕ್ತಿಕ ಬೆಳವಣಿಗೆ ಮತ್ತು ಯಶಸ್ಸಿಗೆ ಸಹಕಾರಿಯಾಗುತ್ತದೆ.

    Click here

    Click here

    Click here

    Click Here

    Call us

    Call us

    ಪರೀಕ್ಷಾಂಗ ಕುಲಸಚಿವ ಡಾ. ಎನ್.ಪಿ. ನಾರಾಯಣ ಶೆಟ್ಟಿ, ಕಾಲೇಜಿನ ಪರೀಕ್ಷಾ ವಿಭಾಗದ ಕಾರ್ಯವೈಖರಿ, ಪರೀಕ್ಷಾ ನಿಯಮಗಳು, ಮೌಲ್ಯಮಾಪನ ಪ್ರಕ್ರಿಯೆ ಹಾಗೂ ವಿದ್ಯಾರ್ಥಿಗಳು ಅನುಸರಿಸಬೇಕಾದ ಶೈಕ್ಷಣಿಕ ಮಾರ್ಗಸೂಚಿಗಳ ಕುರಿತು ವಿವರವಾಗಿ ಮಾಹಿತಿ ನೀಡಿದರು. ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಪೋಷಕರ ಪಾತ್ರವೂ ಮಹತ್ವದ್ದಾಗಿದ್ದು, ಕಾಲೇಜು ಮತ್ತು ಪೋಷಕರ ನಡುವಿನ ನಿರಂತರ ಸಂಪರ್ಕ ವಿದ್ಯಾರ್ಥಿಗಳ ಸಾಧನೆಗೆ ಪೂರಕವಾಗುತ್ತದೆ ಎಂದರು.

    ಕಾರ್ಯಮದಲ್ಲಿ ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ಶೈಕ್ಷಣಿಕ ಕುಲಸಚಿವ ಡಾ. ಟಿಕೆ ರವೀಂದ್ರನ್ ಇದ್ದರು. ಡಾ. ಯೋಗಿಶ್ ಕೈರೋಡಿ ಕಾರ್ಯಕ್ರಮ ನಿರ್ವಹಿಸಿದರು.  

    Alvas nudisiri
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವಕೀಲ ವೃತ್ತಿಗೆ ಆಕಾಶವಲ್ಲ, ಬಾಹ್ಯಾಕಾಶವೇ ನಮ್ಮ ಮಿತಿ: ಶರತ್ ಶೆಟ್ಟಿ

    13/06/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಜೀವನ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಾಸ ಕಾರ್ಯಾಗಾರ

    13/06/2026

    ಪ್ರಕೃತಿಗೆ ಮರಳಿ ನೀಡದೆ ಪ್ರತಿಕ್ಷಣ ಬಳಸುತ್ತಿದ್ದೇವೆ: ಆರ್.ಕೆ. ನಾಯರ್

    09/06/2026
    Leave A Reply Cancel Reply

    5 × 5 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರ ನಿಧಿಯಿಂದ ವಿಕಲಚೇತನರಿಗೆ ಕೃತಕ ಕಾಲು ವಿತರಣೆ
    • ದುಡ್ಮಿ ಪರಿಕಲ್ಪನೆಯಡಿ ಮಹಿಳೆಯರಿಗೆ ತರಬೇತಿ ಕಾರ್ಯಾಗಾರ – ಶಾಸಕ ಗಂಟಿಹೊಳೆ ಉದ್ಘಾಟನೆ
    • ಜವಾಬ್ದಾರಿಯುತ ಯುವ ಸಮೂಹವೇ ರಾಷ್ಟ್ರದ ಭವಿಷ್ಯ: ವಿವೇಕ್ ಆಳ್ವ
    • ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ
    • ಬೇಳೂರು ಹಿರೇಹೊಳೆಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಬಿ.ಕಾಂ ವಿದ್ಯಾರ್ಥಿಯ ಶವ ಪತ್ತೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.