Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಿರಿಮಂಜೇಶ್ವರ: ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸೇವೆ ಹಾಗೂ ಮಕ್ಕಳ ಸಂಬಂಧಿ ಕಾಯ್ದೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ
    ಊರ್ಮನೆ ಸಮಾಚಾರ

    ಕಿರಿಮಂಜೇಶ್ವರ: ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸೇವೆ ಹಾಗೂ ಮಕ್ಕಳ ಸಂಬಂಧಿ ಕಾಯ್ದೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಜಿಲ್ಲಾಡಳಿತ-ಜಿಲ್ಲಾ ಪಂಚಾಯತ್, ಉಡುಪಿ ಜಿಲ್ಲೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಜಿಲ್ಲೆ,  ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಉಡುಪಿ ಜಿಲ್ಲೆ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಮಿಷನ್ ವಾತ್ಸಲ್ಯ ಯೋಜನೆಯಡಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸೇವೆ ಹಾಗೂ ಮಕ್ಕಳ ಸಂಬಂಧಿ ಕಾಯ್ದೆಗಳ ಬಗ್ಗೆ ಮಾಹಿತಿ ಕಾರ್ಯಾಗಾರವು ಅತ್ಯಂತ ಅರ್ಥಪೂರ್ಣವಾಗಿ ಸಂಪನ್ನಗೊಂಡಿತು.

    Click Here

    Call us

    Click Here

    ಈ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಉಪಸ್ಥಿತರಿದ್ದ ಉಡುಪಿ ಜಿಲ್ಲಾ ಸಹಾಯಕ ಕಾನೂನು ಅಭಿರಕ್ಷಕರು ಹಾಗೂ ವಕೀಲರಾದ ಭಾನುಮತಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, “ಇಂದಿನ ಮಕ್ಕಳು ಬಾಲ್ಯವಿವಾಹ, ಲೈಂಗಿಕ ದೌರ್ಜನ್ಯ, ಮಾದಕ ವಸ್ತುಗಳ ಸೇವನೆಯಂತಹ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರ ಸಂರಕ್ಷಣೆಗಾಗಿ ಇರುವ ಕಾಯ್ದೆಗಳ ಬಗ್ಗೆಯಾಗಲಿ, ಅವರಿಗಿರುವ ಕಾನೂನು ಸೇವೆಗಳ ಕುರಿತಾಗಲಿ ಅವರಿಗೆ ಅರಿವಿಲ್ಲ. ವಿಭಿನ್ನ ಬಗೆಯ ಮಾಹಿತಿ ಕಾರ್ಯಾಗಾರಗಳ ಮುಖೇನ ಅವರಲ್ಲಿ ಜಾಗೃತಿಯನ್ನು ಮೂಡಿಸಿದಾಗ ಮಕ್ಕಳ ಹಿತ ರಕ್ಷಣೆಯ ಕಾರ್ಯ ಸಾಧಿತವಾಗುತ್ತದೆ. ಆ ನಿಟ್ಟಿನಲ್ಲಿ ಸಮಾಜ ಮತ್ತು ಸರಕಾರದ ವಿವಿಧ ಇಲಾಖೆಗಳು ಕಾರ್ಯಪ್ರವೃತ್ತರಾಗಬೇಕಾಗಿದೆ” ಎಂದು ಕರೆ ನೀಡಿದರು.

    ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಜಿಲ್ಲೆ ಇದರ ರಕ್ಷಣಾಧಿಕಾರಿಗಳಾದ ಮಹೇಶ್ ದೇವಾಡಿಗ ಅವರು ಮಾತನಾಡಿ ” ಮಾದಕ ದ್ರವ್ಯಗಳ ಸೇವನೆ ಇಂದು ವ್ಯಾಪಕವಾಗಿ ಹೆಚ್ಚುತ್ತಿದ್ದು, ಅನೇಕ ಕಾನೂನು ಬಾಹಿರ ಕೃತ್ಯಗಳಿಗೆ ಕಾರಣವಾಗುತ್ತಿದೆ. ಮಾದಕ ವಸ್ತುಗಳ ಸೇವನೆಯಿಂದ ನಮ್ಮ ದೇಹದ ಅಂಗಾಂಗಗಳು ದುರ್ಬಲ ಗೊಳ್ಳುತ್ತವೆ. ಮಕ್ಕಳು ಈ ಮಾದಕ ವಸ್ತುಗಳ ಸೇವನೆಗೆ ಬಲಿಯಾಗದಂತೆ ಎಚ್ಚರ ವಹಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಮಕ್ಕಳ ಸಂರಕ್ಷಣೆಗಾಗಿ ಬಾಲ ನ್ಯಾಯ ಮಂಡಳಿಗಳು, ಮಕ್ಕಳ ಕಲ್ಯಾಣ ಸಮಿತಿಗಳು ರಚನೆಯಾಗಿದ್ದು, ಮಕ್ಕಳ ಸಂರಕ್ಷಣೆಯೇ ನಮ್ಮ ಪ್ರಥಮ ಆದ್ಯತೆಯಾಗಿದೆ” ಎಂದರು.

    ಕುಂದಾಪುರ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಭಾಗ್ಯಲಕ್ಷ್ಮಿ ಅವರು ” ನಮ್ಮ ಜಿಲ್ಲೆ ವಿದ್ಯಾವಂತರು ಮತ್ತು ಬುದ್ಧಿವಂತರ ನಾಡಾಗಿದೆ. ಇಲ್ಲಿನ ಸಂಸ್ಕಾರ – ಸಂಸ್ಕೃತಿಗೆ ವಿಶೇಷ ಪ್ರಾಮುಖ್ಯತೆಯಿದೆ. ಇಂದಿನ ಜೆನ್ -ಜಿ ಗಳು ಈ ನಾಡಿನ ಪರಂಪರೆಯನ್ನು ಅರಿತುಕೊಂಡು, ಅದನ್ನು ಮುನ್ನೆಡೆಸಿಕೊಂಡು ಹೋಗುವ ಸಂಕಲ್ಪ ಕೈಗೊಳ್ಳಬೇಕು. ಬಾಹ್ಯ ಆಕರ್ಷಣೆಗಳಗೆ ಒಳಗಾಗದೆ, ದುಶ್ಚಟಗಳಿಗೆ ಬಲಿಯಾಗದೆ ಸಮಾಜದ ಹಿತಕ್ಕಾಗಿ ದುಡಿಯಬೇಕು ” ಎಂದು ಕರೆಕೊಟ್ಟರು.

    ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿಗಳಾದ ವಿಜಯ್ ಕುಮಾರ್, ಬೈಂದೂರು ಆರಕ್ಷಕ ಠಾಣೆಯ ಸಿಬ್ಬಂದಿ ಮಂಜುನಾಥ್ ಪಿ. ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ಮುಖ್ಯೋಪಾಧ್ಯಾಯಿನಿ ದೀಪಿಕಾ ಆಚಾರ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ಸಂಯೋಜಕರಾದ ಸುಬ್ರಮಣ್ಯ ಮರಾಟಿ ಸ್ವಾಗತಿಸಿದರು. ಸಹಶಿಕ್ಷಕ ಮಹಾದೇವ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕಿ ಯೋಗಿತಾ ವಂದಿಸಿದರು.

    Click here

    Click here

    Click here

    Click Here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಬಿಎಲ್‌ಎಗಳಿಗೆ ವಿಶೇಷ ತರಬೇತಿ ಶಿಬಿರ

    18/06/2026

    ಭಾರತೀಯರ ಜೀವನಾಡಿ ಅಂಚೆ ಇಲಾಖೆ: ಪ್ರಕಾಶ ಕಾರಂತ

    17/06/2026

    ಕೋಟ: ಸರಕಾರಿ ಉದ್ಯೋಗ ಕೊಡಿಸುವುದಾಗಿ ಯುವತಿಗೆ 10.83 ಲಕ್ಷ ರೂ. ವಂಚನೆ

    17/06/2026
    Leave A Reply Cancel Reply

    four × one =

    Call us

    Click Here

    Call us

    Call us

    Call us
    Highest Viewed Recently
    • ಉಡುಪಿ: ಹಿಂದುಳಿದ ವರ್ಗಗಳ ಇಲಾಖೆಯ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    • ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ
    • ಕೋಟ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಬಿಎಲ್‌ಎಗಳಿಗೆ ವಿಶೇಷ ತರಬೇತಿ ಶಿಬಿರ
    • ಕಿರಿಮಂಜೇಶ್ವರ: ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸೇವೆ ಹಾಗೂ ಮಕ್ಕಳ ಸಂಬಂಧಿ ಕಾಯ್ದೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ
    • ಭಾರತೀಯರ ಜೀವನಾಡಿ ಅಂಚೆ ಇಲಾಖೆ: ಪ್ರಕಾಶ ಕಾರಂತ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.