Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಬಿಎಲ್‌ಎಗಳಿಗೆ ವಿಶೇಷ ತರಬೇತಿ ಶಿಬಿರ
    ಊರ್ಮನೆ ಸಮಾಚಾರ

    ಕೋಟ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಬಿಎಲ್‌ಎಗಳಿಗೆ ವಿಶೇಷ ತರಬೇತಿ ಶಿಬಿರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಕೋಟ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಬೂತ್ ಮಟ್ಟದ ಏಜೆಂಟ್‌ಗಳು (BLA), ಬೂತ್ ಅಧ್ಯಕ್ಷರು ಹಾಗೂ ಪಕ್ಷದ ಕಾರ್ಯಕರ್ತರಿಗೆ ವಿಶೇಷ ತರಬೇತಿ ಶಿಬಿರ ಬುಧವಾರ ಕೋಟ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.

    Click Here

    Call us

    Click Here

    ಕಾರ್ಯಕ್ರಮವನ್ನು ಕೋಟ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಶಂಕರ್ ಕುಂದರ್ ಅವರು ಸ್ವಾಗತಿಸಿ ಉದ್ಘಾಟಿಸಿದರು. ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಮತದಾರರ ಪಟ್ಟಿಯ ಶುದ್ಧತೆ ಹಾಗೂ ಪ್ರಜಾಪ್ರಭುತ್ವದ ಬಲವರ್ಧನೆಯಲ್ಲಿ ಬಿಎಲ್‌ಎಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.

    ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ ಶೆಟ್ಟಿ ಅವರು ತರಬೇತಿ ನಡೆಸಿಕೊಟ್ಟು, ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ, ಫಾರಂ 6, 6A, 7 ಮತ್ತು 8ರ ಬಳಕೆ, ಮತದಾರರ ಪಟ್ಟಿಯ ಪರಿಶೀಲನೆ, ಅರ್ಹ ಮತದಾರರ ಹೆಸರು ಸೇರ್ಪಡೆ, ತಪ್ಪು ಅಥವಾ ನಕಲಿ ನೋಂದಣಿಗಳ ವಿರುದ್ಧ ಕಾನೂನುಬದ್ಧ ಆಕ್ಷೇಪಣೆ ಸಲ್ಲಿಸುವ ವಿಧಾನ ಹಾಗೂ ಬೂತ್ ಮಟ್ಟದಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಕುರಿತು ಸವಿವರ ಮಾಹಿತಿ ನೀಡಿದರು.

    ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ ಮೊಳಹಳ್ಳಿ ದಿನೇಶ್ ಹೆಗ್ಡೆ ಅವರು ಬಿಎಲ್‌ಎಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಿ ಶುಭ ಹಾರೈಸಿದರು.

    ಶಿಬಿರದಲ್ಲಿ ಬೂತ್ ಅಧ್ಯಕ್ಷರು, ಬೂತ್ ಸಮಿತಿ ಸದಸ್ಯರು, ಬಿಎಲ್‌ಎಗಳು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿ ತರಬೇತಿಯ ಪ್ರಯೋಜನ ಪಡೆದುಕೊಂಡರು.

    Click here

    Click here

    Click here

    Click Here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕಿರಿಮಂಜೇಶ್ವರ: ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸೇವೆ ಹಾಗೂ ಮಕ್ಕಳ ಸಂಬಂಧಿ ಕಾಯ್ದೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ

    18/06/2026

    ಭಾರತೀಯರ ಜೀವನಾಡಿ ಅಂಚೆ ಇಲಾಖೆ: ಪ್ರಕಾಶ ಕಾರಂತ

    17/06/2026

    ಕೋಟ: ಸರಕಾರಿ ಉದ್ಯೋಗ ಕೊಡಿಸುವುದಾಗಿ ಯುವತಿಗೆ 10.83 ಲಕ್ಷ ರೂ. ವಂಚನೆ

    17/06/2026
    Leave A Reply Cancel Reply

    4 × five =

    Call us

    Click Here

    Call us

    Call us

    Call us
    Highest Viewed Recently
    • ಉಡುಪಿ: ಹಿಂದುಳಿದ ವರ್ಗಗಳ ಇಲಾಖೆಯ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    • ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ
    • ಕೋಟ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಬಿಎಲ್‌ಎಗಳಿಗೆ ವಿಶೇಷ ತರಬೇತಿ ಶಿಬಿರ
    • ಕಿರಿಮಂಜೇಶ್ವರ: ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸೇವೆ ಹಾಗೂ ಮಕ್ಕಳ ಸಂಬಂಧಿ ಕಾಯ್ದೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ
    • ಭಾರತೀಯರ ಜೀವನಾಡಿ ಅಂಚೆ ಇಲಾಖೆ: ಪ್ರಕಾಶ ಕಾರಂತ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.