ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್) 1 ರಿಂದ 8 ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯ ಸೌಲಭ್ಯ ಪಡೆಯಲು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ – ಎಸ್.ಎಸ್.ಪಿ ತಂತ್ರಾಂಶ https://ssp.postmatric.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ನೆಲ ಮಹಡಿ, ಮೌಲಾನಾ ಅಜಾದ್ ಭವನ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ದೂ.ಸಂಖ್ಯೆ: 0820-2574596 ಅಥವಾ ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.











