ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ಕಾಲೋಡು ಗ್ರಾಮದ ಹೊಸಮನೆ ನಿವಾಸಿ ಶೇಖರ ಶೆಟ್ಟಿ (57) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಗಳವಾರ ಮಧ್ಯಾಹ್ನ ಮನೆಯಲ್ಲಿ ಯಾವುದೋ ವಿಷಯಕ್ಕೆ ಜಿಗುಪ್ಸೆಗೊಂಡು ವಿಷ ಸೇವಿಸಿದ್ದು ಅಸ್ವಸ್ಥಗೊಂಡಿದ್ದರು. ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಪರೀಕ್ಷಿಸಿದ ವೈದ್ಯರು ವ್ಯಕ್ತಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











