ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರಸ್ತೆಯಲ್ಲಿ ನಡೆದುಕೊಂಡು ಹೋಗುತಿದ್ದ ಮಹಿಳೆಯೊಬ್ಬರಿಗೆ ಓಮ್ನಿ ಕಾರು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ ಘಟನೆ ಗುರುವಾರ ಬೆಳಗ್ಗೆ ತಾಲೂಕಿನ ಬೀಜಾಡಿ ಗ್ರಾಮದ ಅರಸರಬೆಟ್ಟು ಕ್ರಾಸ್ ಬಳಿ ನಡೆದಿದೆ.
ಮೃತರನ್ನು ಗೋಪಾಡಿ ಗ್ರಾಮದ ಚಂದ್ರಮತಿ (78) ಎಂದು ಗುರುತಿಸಲಾಗಿದೆ.
ಅವರು ಬೀಜಾಡಿ ಕಡೆಯಿಂದ ಕೊಟೇಶ್ವರ ರಥಬೀದಿ ಕಡೆಗೆ ನಡೆದುಕೊಂಡು ಹೋಗುತಿದ್ದಾಗ ಅದೇ ದಾರಿಯಲ್ಲಿ ಅತಿ ವೇಗವಾಗಿ ಅಜಾಗರೂಕತೆಯಿಂದ ರಾಘವೇಂದ್ರ ಅವರು ಚಲಾಯಿಸುತ್ತಿದ್ದ ಓಮ್ನಿ ಕಾರು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ, ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯಗೊಂಡು ಪ್ರಜ್ಞೆ ಕಳೆದುಕೊಂಡ ಚಂದ್ರಮತಿ ಅವರನ್ನು ಕೂಡಲೇ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಪರಿಕ್ಷೀಸಿದ ವೈದ್ಯರು ಅದಾಗಲೇ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

















