ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಅಂಪಾರು ಗ್ರಾಮದ ಗುಡಿಬೆಟ್ಟು ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಕೋಳಿ ಅಂಕ ಜುಗಾರಿ ನಡೆಯುತ್ತಿದ್ದಲ್ಲಿಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪ ನಿರೀಕ್ಷಕರಾದ ಉಮೇಶ್ ನಾಯ್ಕ ಅವರು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ.
ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ಸಹಾಯಕ ಪೊಲೀಸ್ ಉಪನಿರೀಕ್ಷಕರಾದ ಉಮೇಶ್ ನಾಯ್ಕ ಅವರು ಠಾಣೆಯಲ್ಲಿರುವಾಗ ಅಂಪಾರು ಗ್ರಾಮದ ಗುಡಿಬೆಟ್ಟು ಎಂಬಲ್ಲಿರುವ ಸಾರ್ವಜನಿಕ ಸ್ಥಳದಲ್ಲಿ ಕೆಲವು ವ್ಯಕ್ತಿಗಳು ಸೇರಿ ಕೋಳಿ ಅಂಕ ಜುಗಾರಿ ಆಟ ಆಡುತ್ತಿರುವುದಾಗಿ ದಾಳಿ ನಡೆಸುವಂತೆ ಮೇಲಾಧಿಕಾರಿಗಳು ತಿಳಿಸಿದ ಮೇರೆಗೆ ಕೂಡಲೇ ಹಾಡಿಯ ಬಳಿ ತಲುಪಿ ನೋಡಿದಾಗ ಕೆಲವು ವ್ಯಕ್ತಿಗಳು, ಹಾಡಿ ಜಾಗದಲ್ಲಿ ಸೇರಿದ್ದು ಅದರಲ್ಲಿ ಇಬ್ಬರು ವ್ಯಕ್ತಿಗಳು 2 ಕೋಳಿ ಹುಂಜಗಳ ಕಾಲಿಗೆ ಬಾಳನ್ನು ಕಟ್ಟಿ ಜೂಜಾಟಕ್ಕೆ ಬಿಟ್ಟಿದ್ದು ಉಳಿದವರು ಸುತ್ತುವರೆದು ತಮ್ಮ ತಮ್ಮ ಕೋಳಿಗಳನ್ನು ಕೈ ನಲ್ಲಿ ಹಿಡಿದುಕೊಂಡು ಕಾದಾಟಕ್ಕೆ ಬಿಟ್ಟಿದ್ದ ಕೋಳಿಗಳ ಮೇಲೆ ಹಣವನ್ನು ಪಣವಾಗಿ ಕಟ್ಟಿ ಕೋಳಿ ಅಂಕ ಜುಗಾರಿ ಆಟ ನಡೆಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ .
ಬಂಧಿತ ಆರೋಪಿಗಳಾದ ತ್ರಾಸಿ ನಾರಾಯಣ (48), ನಿಟ್ಟೂರು ಪ್ರಶಾಂತ್ (43), ನಿಟ್ಟೂರು ನವರಾಜ್ (51) ಎಂಬುವರನ್ನು ಬಂಧಿಸಿದ್ದಾರೆ. ಉಳಿದವರು ಹಾಡಿಯಲ್ಲಿ ಓಡಿ ತಪ್ಪಿಸಿಕೊಂಡಿರುತ್ತಾರೆ.
ಆರೋಪಿಗಳಿಂದ ಕೋಳಿ ಅಂಕ ಜುಗಾರಿ ಆಟಕ್ಕೆ ಬಳಸಿದ ಒಟ್ಟು ಹಣ 1,600/- ರೂ. ಸ್ವಾಧೀನಪಡಿಸಿಕೊಂಡಿದ್ದಾರೆ. ಆರೋಪಿತರುಗಳು ತಮ್ಮ ಸ್ವಂತ ಲಾಭಕ್ಕೋಸ್ಕರ ಕೋಳಿಗಳಿಗೆ ಆಹಾರ, ನೀರು ಕೊಡದೇ ಕಾಲಿಗೆ ಕತ್ತಿಕಟ್ಟಿ ಹಿಂಸೆ ನೀಡಿ ಕೋಳಿಗಳ ಮೇಲೆ ಹಣವನ್ನು ಪಣವಾಗಿ ಕಟ್ಟಿ ಸಾರ್ವಜನಿಕ ಸ್ಥಳದಲ್ಲಿ ಕೋಳಿ ಅಂಕ ಜುಗಾರಿ ಆಟ ನಡೆಸುತ್ತಿದ್ದರು ಎಂದು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

















