ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಭಾರತ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು, ಸಂಸ್ಥೆಗಳು, ವಿವಿಧ ಸಾಂವಿಧಾನಿಕ ಸಂಸ್ಥೆಗಳು, ಶಾಸನಬದ್ದ ಸಂಸ್ಥೆಗಳು, ನ್ಯಾಯಮಂಡಳಿಗಳು ಇತ್ಯಾದಿಗಳಲ್ಲಿನ ವಿವಿಧ ಗ್ರೂಪ್ ‘ಬಿ’ ಗೆಜೆಟೆಡ್ ಅಲ್ಲದ ಮತ್ತು ಗ್ರೂಪ್ ‘ಸಿ’ ಹುದ್ದೆಗಳ ನೇಮಕಾತಿಗಾಗಿ ಸಿಬ್ಬಂದಿ ಆಯ್ಕೆ ಆಯೋಗವು ಉದ್ಯೋಗಾಕಾಂಕ್ಷಿಗಳಿAದ ವೆಬ್‌ಸೈಟ್ https://ssc.gov.in ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಸಂಸ್ಥೆಯಿAದ ಪದವಿ ಅಥವಾ ತತ್ಸಮಾನ ಪದವಿ ಪಡೆದಿರುವ 18 ರಿಂದ 32 ವರ್ಷ ವಯೋಮಿತಿ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಆಯ್ಕೆಯನ್ನು ಮುಕ್ತ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಮಾಡಲಾಗುತ್ತದೆ. ಅರ್ಜಿಗಳನ್ನು ಆನ್‌ಲೈನ್ ವಿಧಾನದ ಮೂಲಕ ಮಾತ್ರ ಸ್ವೀಕರಿಸಲಾಗುತ್ತದೆ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ಜೂನ್ 22 ಆನ್‌ಲೈನ್ ನೊಂದಣಿಗೆ ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 080-25502520, 25527342 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.











