Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸುಜ್ಞಾನ ನ್ಯಾಷನಲ್ ಪಿಯು ಕಾಲೇಜು ಬಾರ್ಕೂರಿನಲ್ಲಿ ಸಂಸ್ಕೃತ ಭಾಷಾ ಮಾಹಿತಿ ಕಾರ್ಯಾಗಾರ
    ಊರ್ಮನೆ ಸಮಾಚಾರ

    ಸುಜ್ಞಾನ ನ್ಯಾಷನಲ್ ಪಿಯು ಕಾಲೇಜು ಬಾರ್ಕೂರಿನಲ್ಲಿ ಸಂಸ್ಕೃತ ಭಾಷಾ ಮಾಹಿತಿ ಕಾರ್ಯಾಗಾರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಸುಜ್ಞಾನ ನ್ಯಾಷನಲ್ ಪಿಯು ಕಾಲೇಜಿನಲ್ಲಿ ಇತ್ತೀಚೆಗೆ ಸಂಸ್ಕೃತ ಭಾಷಾ ಮಾಹಿತಿ ಕಾರ್ಯಾಗಾರವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲಾಗಿತ್ತು.

    Click Here

    Call us

    Click Here

    ಬಾರಕೂರಿನ ನ್ಯಾಷನಲ್ ಹೈಸ್ಕೂಲಿನ ಮುಖ್ಯ ಶಿಕ್ಷಕಿಯಾದ ಹೇಮಾವತಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

    ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಬಾರಕೂರಿನ ನ್ಯಾಷನಲ್ ಹೈಸ್ಕೂಲು, ಸಂಸ್ಕೃತ ಹಾಗೂ ಇಂಗ್ಲಿಷ್ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ  ಜಿ.ಪಿ. ಪ್ರಭಾಕರ ತುಮರಿ ಅವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಉಪಯುಕ್ತವಾದ ಮಾಹಿತಿಯನ್ನು ನೀಡಿದರು. ಸುಮಾರು ಒಂದು ಗಂಟೆಗಳ ಕಾಲ ನಡೆದ ತಮ್ಮ ಉಪನ್ಯಾಸದಲ್ಲಿ ಸಂಸ್ಕೃತ ಭಾಷೆಯ ಇತಿಹಾಸ, ಅದರ ಬೆಳವಣಿಗೆಯ ಪಥ, ಇತರೆ ಭಾಷೆಗಳ ಮೇಲೆ ಸಂಸ್ಕೃತದ ಪ್ರಭಾವ, ಭಾರತೀಯ ಜ್ಞಾನ ಪರಂಪರೆಯಲ್ಲಿ ಸಂಸ್ಕೃತದ ಸ್ಥಾನಮಾನ, ನಿಸರ್ಗಸ್ನೇಹಿ ಜೀವನಕ್ಕೆ ಪೂರಕವಾದ ಆಯುರ್ವೇದದ ಅಂಶಗಳು ಹಾಗೂ ನಮ್ಮ ದೈನಂದಿನ ಜೀವನದಲ್ಲಿ ಬಳಕೆಯಾಗುವ ಸಂಸ್ಕೃತ ಪದಗಳ ಮಹತ್ವದ ಕುರಿತು ವಿವರವಾಗಿ ತಿಳಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರಕಾಶ್ ಆಚಾರ್ಯ ಅವರು ಸಂಸ್ಕೃತ ಶ್ಲೋಕವನ್ನು ಪಠಿಸುವ ಮೂಲಕ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಾಗಾರದ ರೂಪುರೇಷೆಗಳನ್ನು ವಿವರಿಸಿದ ಅವರು, “ವಿದ್ಯಾರ್ಥಿಗಳು ಸಂಸ್ಕೃತ ಭಾಷೆಯ ಮಹತ್ವ ಮತ್ತು ಆಳವನ್ನು ಅರಿತುಕೊಂಡು, ಅದರ ಅಧ್ಯಯನದಲ್ಲಿ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು” ಎಂದು ಕರೆ ನೀಡಿದರು.

    ಈ ಕಾರ್ಯಾಗಾರವು ವಿದ್ಯಾರ್ಥಿಗಳಲ್ಲಿ ಕೇವಲ ಭಾಷೆಯ ಬಗೆಗಿನ ಅರಿವು ಮೂಡಿಸುವುದಕ್ಕೆ ಮಾತ್ರ ಸೀಮಿತವಾಗದೆ, ಯುವಜನತೆಗೆ ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ಮೌಲ್ಯಗಳನ್ನು ಪರಿಚಯಿಸುವಲ್ಲಿ ಸಂಪೂರ್ಣ ಯಶಸ್ವಿಯಾಯಿತು.

    Click here

    Click here

    Click here

    Click Here

    Call us

    Call us

    ಕಾಲೇಜಿನ ಉಪನ್ಯಾಸಕಿ ಪ್ರಗತಿ ಶೆಟ್ಟಿ ಕಾರ್ಯಕ್ರಮವನ್ನು  ನಿರೂಪಿಸಿದರು. ಕಾರ್ಯಾಗಾರದಲ್ಲಿ ಕಾಲೇಜಿನ ಉಪನ್ಯಾಸಕ ವೃಂದ, ಸಂಸ್ಕೃತ ವಿಭಾಗದ ವಿದ್ಯಾರ್ಥಿಗಳು ಹಾಗೂ ಭಾಷಾಸಕ್ತ ವಿದ್ಯಾರ್ಥಿಗಳು  ಭಾಗವಹಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ ತಾಲೂಕು ಆಸ್ಪತ್ರೆಯ ಹೊಸ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾಪ: ಶಾಸಕ ಕಿರಣ್ ಕುಮಾರ್ ಕೊಡ್ಗಿ

    20/06/2026

    ಕುಂದಾಪುರ: ಪಾದಚಾರಿಗೆ ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

    20/06/2026

    ಕೋಟ: ಕೆರೆಗೆ ಬಿದ್ದು ವ್ಯಕ್ತಿ ಸಾವು

    20/06/2026
    Leave A Reply Cancel Reply

    three × three =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ ತಾಲೂಕು ಆಸ್ಪತ್ರೆಯ ಹೊಸ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾಪ: ಶಾಸಕ ಕಿರಣ್ ಕುಮಾರ್ ಕೊಡ್ಗಿ
    • ಸುಜ್ಞಾನ ನ್ಯಾಷನಲ್ ಪಿಯು ಕಾಲೇಜು ಬಾರ್ಕೂರಿನಲ್ಲಿ ಸಂಸ್ಕೃತ ಭಾಷಾ ಮಾಹಿತಿ ಕಾರ್ಯಾಗಾರ
    • ಹವಾಮಾನಾಧಾರಿತ ಬೆಳೆ ವಿಮೆ ಯೋಜನೆ: ನೋಂದಣಿಗೆ ಜೂ.30 ಕೊನೆ ದಿನ
    • ಕುಂದಾಪುರ: ಪಾದಚಾರಿಗೆ ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು
    • ಕೋಟ: ಕೆರೆಗೆ ಬಿದ್ದು ವ್ಯಕ್ತಿ ಸಾವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.