ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪನ್ಯಾಸಕ ಚಂದ್ರಶೇಖರ್ ಲಗಳೂರು ಅವರಿಗೆ ಕಾಲೇಜಿನ 2006-07 ಹಳೆ ವಿದ್ಯಾರ್ಥಿಗಳಿಂದ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭ ಇತ್ತೀಚಿಗೆ ನಡೆಯಿತು.


ಇದೇ ವೇಳೆ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಅತ್ಯಧಿಕ ಅಂಕಗಳಿಸಿದ 586(98%) ಕಾಲೇಜಿನ ವಿದ್ಯಾರ್ಥಿನಿ ಪ್ರೀತಿ ಅವರನ್ನು ಸನ್ಮಾನಿಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಸುಜಾತ ಅವರು ಅಧ್ಯಕ್ಷತೆ ವಹಿದ್ದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಶ್ರೀಲಕ್ಷ್ಮಿ ಹಾಗೂ ವೀರೇಶ್ ಮತ್ತು 2006-2007 ಬ್ಯಾಚಿನ ಹಳೆ ವಿದ್ಯಾರ್ಥಿಗಳಾದ ಶ್ರೀಕಾಂತ್, ನಾಗರಾಜ್, ರಾಘವೇಂದ್ರ, ವಿಘ್ನೇಶ್, ಯೋಗೇಶ್, ಗಿರೀಶ್, ಪ್ರಸನ್ನ, ಸತೀಶ್, ಮನಿಷಾ, ಆಶಾ, ಸುಮಿತ್ರ, ಶರಾವತಿ, ಅಶ್ವಿನಿ, ಪೂರ್ಣಿಮಾ ಉಪಸ್ಥಿತರಿದ್ದರು.
ಉಪನ್ಯಾಸಕ ಗಣೇಶ್ ಅವರು ಕಾರ್ಯಕ್ರಮವನ್ನು ನಿರೂಸಿ, ಉಪನ್ಯಾಕಿ ಸಾವಿತ್ರಿ ಸ್ವಾಗತಿಸಿ, ಉಪನ್ಯಾಸಕ ನಾಗೇಶ್ ಧನ್ಯವಾದ ಗೈದರು.











