ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತೆಕ್ಕಟ್ಟೆ ವಿಶ್ವ ವಿನಾಯಕ ವಿದ್ಯಾಸಂಸ್ಥೆ / ಸಿ.ಬಿ.ಎಸ್.ಇ ಶಾಲೆಯಲ್ಲಿ ಶನಿವಾರ ಅಂತರಾಷ್ಟ್ರೀಯ ವಿಶ್ವಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀಹರಿ ಎಮ್. ಹಾಗೂ ಗೌರವ ಅತಿಥಿಗಳಾಗಿ ಆಗಮಿಸಿದ ಶಾಲಾ ಮ್ಯಾನೇಜಿಂಗ್ ಟ್ರಸ್ಟಿ ಪ್ರೇಮಾ ಕ್ಲಿನಿಕ್ ವೈದ್ಯರಾದ ಡಾ. ಕುಸುಮಾಕರ ಶೆಟ್ಟಿ ಅವರು ವಿವಿಧ ಯೋಗಾಸನಗಳನ್ನು ಮಾಡಿ ಯೋಗ ಪ್ರಾತ್ಯಕ್ಷತೆಯನ್ನು ನೀಡಿದರು. ಆರೋಗ್ಯ ಪೂರ್ಣ ಜೀವನ ನಡೆಸಲು ಮನುಷ್ಯನ ಶರೀರಕ್ಕೆ ಯೋಗ ಬಹಳ ಮುಖ್ಯ ಎಂದು ತಿಳಿಸಿದರು. ವಿವಿಧ ಕಾಯಿಲೆಗಳನ್ನು ತಡೆಗಟ್ಟುವ ವಿವಿಧ ಆಸನಗಳು ಹಾಗೂ ಅದರ ಮಹತ್ವವನ್ನು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ ಅವರು ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಯೋಗಾಭ್ಯಾಸವನ್ನು ಮೈಗೂಡಿಸಿಕೊಂಡಲ್ಲಿ ಆರೋಗ್ಯಪೂರ್ಣ ಜೀವನ ನಡೆಸಲು ಅನುಕೂಲವೆಂದು ತಿಳಿಸಿದರ
ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳು ವಿವಿಧ ಯೋಗಾಸನಗಳನ್ನು ಮಾಡಿ ಯೋ ದಿನದ ಮಹತ್ವವನ್ನು ಅರಿತುಕೊಂಡರು.
ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಸಂದೀಪ ಪುತ್ರನ್, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ವರ್ಷ ಕಾರ್ಯಕ್ರಮ ನಿರೂಪಿಸಿದರು, ಹನಬಾನು ಸ್ವಾಗತಿಸಿದರು, ಸಾನಿಕ ವಂದಿಸಿದರು.

















