ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರ ಎಜ್ಯುಕೇಶನ್ ಸೊಸೈಟಿ ರಿ. ಪ್ರವರ್ತಿತ ಎಚ್.ಎಮ್.ಎಮ್., ವಿ.ಕೆ.ಆರ್.ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಅನ್ವಿತಾ ಎಸ್. ನಾಯಕ್ ಇ೦ಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್‌ನ ನೂತನ ವಿಶ್ವದಾಖಲೆ ಪಡೆದಿದ್ದಾರೆ.
ಕೇವಲ 7.22 ಸೆಕೆಂಡ್ಸ್‌ಗಳಲ್ಲಿ 200 ಬಲೂನ್‌ಗಳನ್ನು ಕಬ್ಬಿಣದ ಮೊಳೆಯಿ೦ದ ಒಡೆಯುವುದರ ಮೂಲಕ ಈ ಸಾಧನೆಗೈದು ವಿಶ್ವದಾಖಲೆ ಮಾಡಿದ್ದಾರೆ.
ವಿಶ್ವದಾಖಲೆ ಮಾಡಿದ ವಿದ್ಯಾರ್ಥಿನಿಯನ್ನು ಶಾಲಾ ಸಂಚಾಲಕರಾದ ಬಿ.ಎಮ್. ಸುಕುಮಾರ ಶೆಟ್ಟಿ ಅವರು ಸಾಧಕರ ಸನ್ಮಾನ ಸಮಾರಂಭದಲ್ಲಿ ಅಭಿನಂದಿಸಿ ಶುಭ ಹಾರೈಸಿದರು.
ಕಾರ್ಯದರ್ಶಿಗಳಾದ ಕೆ. ಸೀತಾರಾಮ ನಕ್ಕತ್ತಾಯ, ಸಂಸ್ಥೆಯ ಉಪಪ್ರಾಂಶುಪಾಲೆ ಸುಭಾ ಕೆ. ಎನ್., ಎಲ್ಲಾ ವಿಭಾಗದ ಮುಖ್ಯಸ್ಥರು, ಪ್ರೌಢ ಶಾಲಾ ಶಿಕ್ಷಕರು ಹಾಗೂ ಪೋಷಕರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

















