ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಹೊಳೆಯಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಯಡ್ತರೆಯಲ್ಲಿ ನಡೆದಿದೆ.
ಮೃತರನ್ನು ಉಪ್ಪುಂದ ಗ್ರಾಮದ ನಾರಾಯಣ ಖಾರ್ವಿ (64) ಎಂದು ಗುರುತಿಸಲಾಗಿದೆ.
ಮೀನುಗಾರಿಕೆ ಮಾಡಿಕೊಂಡಿದ್ದ ಅವರು ಯಡ್ತರೆ ಗ್ರಾಮದ ಅಂಕಣಹೊಳೆಯಲ್ಲಿ ಮೀನು ಹಿಡಿಯಲು ಹೋದವರು ಮನೆಗೆ ವಾಪಸ್ ಬಂದಿರಲಿಲ್ಲ. ಜೂನ್.20 ರಂದು ನಾರಾಯಣ ಖಾರ್ವಿ ಅವರ ಮೃತದೇಹವು ಅಂಕಣಹೊಳೆಯಲ್ಲಿ ನೀರಿನಲ್ಲಿ ಪತ್ತೆಯಾಗಿತ್ತು.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

















