ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಬಿಜೆಪಿ ಕುಂದಾಪುರ ಯುವ ಮೋರ್ಚಾ ವತಿಯಿಂದ ತೆಕ್ಕಟ್ಟೆ ಸುಧೀಂದ್ರ ಸಭಾಭವನದಲ್ಲಿ ಬೃಹತ್ ಯೋಗ ಕಾರ್ಯಕ್ರಮ ಆಯೋಜಿಸಲಾಯಿತು.
ಯೋಗ ಕಾರ್ಯಕ್ರಮವನ್ನ ಉದ್ಘಾಟನೆಯನ್ನು ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ ಶೆಟ್ಟಿ ಗೋಪಾಡಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ವಿಶ್ವದಾದ್ಯಂತ 180ಕ್ಕೂ ಹೆಚ್ಚು ದೇಶಗಳಲ್ಲಿ ಯೋಗ ದಿನಾಚರಣೆ ಆಚರಿಸಲ್ಪಡುತ್ತಿದೆ. ಕುಂದಾಪುರ ಯುವ ಮೋರ್ಚಾ ಕಾರ್ಯಕರ್ತರೇ ಪಕ್ಷದ ನಿಜವಾದ ಶಕ್ತಿ. ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ದೊಡ್ಡದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕುಂದಾಪುರ ಬಿಜೆಪಿ ಮಂಡಲ ನಿಕಟ ಪೂರ್ವಅಧ್ಯಕ್ಷ ಶಂಕರ ಅಂಕದಕಟ್ಟೆ , ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ.ಎಸ್., ಮಂಡಲ ಉಪಾಧ್ಯಕ್ಷ ಸುನೀಲ್ ಶೆಟ್ಟಿ ಹೇರಿಕುದ್ರು, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರಸಾದ ಬಿಲ್ಲವ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ವಿನೋದ್ ದೇವಾಡಿಗ ಹಾಗೂ ಯುವ ಮೋರ್ಚಾ ಅಧ್ಯಕ್ಷ ಕಿರಣ್ ಪೂಜಾರಿ ತೆಕ್ಕಟ್ಟೆ, ಪ್ರಧಾನ ಕಾರ್ಯದರ್ಶಿ ಚೇತನ್ ಖಾರ್ವಿ, ತೆಕ್ಕಟ್ಟೆ ಶಕ್ತಿ ಕೇಂದ್ರದ ಅಧ್ಯಕ್ಷ ಶ್ರೀನಾಥ್ ಶೆಟ್ಟಿ, ಕಾರ್ಯದರ್ಶಿ ಗಣೇಶ ಮೊಗವೀರ, ಅನೇಕ ಪ್ರಮುಖರು ಕುಂದಾಪುರ ಮಂಡಲದ ಪದಾಧಿಕಾರಿಗಳು ವಿವಿಧ ಮೋರ್ಚಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಯೋಗಾಭ್ಯಾಸದ ಗುರುಗಳಾದ ಸಂಜೀವ ಕೋಟ, ವಿನಯ, ಶಂಕರ ಕೋಟ, ರಮೇಶ್ ಪ್ರಭು ನೇತೃತ್ವದಲ್ಲಿ ಯುವ ಕಾರ್ಯಕರ್ತರು, ವಿವಿಧ ಮೋರ್ಚಗಳ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಯೋಗ ಅಭಿಮಾನಿಗಳು ಭಾಗವಹಿಸಿ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡ ಯೋಗಾಭ್ಯಾಸದ ತರಬೇತಿ ಪಡೆದರು.

















