Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
    ಊರ್ಮನೆ ಸಮಾಚಾರ

    ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ
    : “ಆಧುನಿಕ ಜಗತ್ತಿನ ಒತ್ತಡದ ಜೀವನದಲ್ಲಿ ದೈಹಿಕ ಮತ್ತು ಮಾನಸಿಕ ಸಮತೋಲನ ಕಾಯ್ದುಕೊಳ್ಳಲು ಯೋಗ ಅತ್ಯಗತ್ಯ. ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನದಲ್ಲಿ ಮತ್ತು ಏಕಾಗ್ರತೆ ಹೆಚ್ಚಿಸುವಲ್ಲಿ ಯೋಗ ಪ್ರಮುಖ ಪಾತ್ರ ವಹಿಸುತ್ತದೆ” ಎಂದು ಪ್ರಖ್ಯಾತ ವೈದ್ಯರಾದ ಡಾ. ದೀಕ್ಷಾ ಶೆಣೈ ಅವರು ನುಡಿದರು.

    Click Here

    Call us

    Click Here

    ಅವರು ಇಲ್ಲಿನ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ವಿದ್ಯಾರಣ್ಯ ಗ್ಲೋಬಲ್ ಸ್ಕೂಲ್ ಹಾಗೂ ಸುಜ್ಞಾನ ಪದವಿ ಪೂರ್ವ ಕಾಲೇಜು, ಕುಂದಾಪುರ ಇವುಗಳ ಜಂಟಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಪ್ರೇರಣಾದಾಯಕ ಸಂದೇಶ ನೀಡಿದರು.

    “ಇಂದಿನ ಯೋಗಾಭ್ಯಾಸ, ನಾಳಿನ ಉಜ್ವಲ ಭವಿಷ್ಯ” ಎಂಬ ಧ್ಯೇಯದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ನೂರಾರು ವಿದ್ಯಾರ್ಥಿಗಳು ಆರೋಗ್ಯ, ಸಾಮರಸ್ಯ ಮತ್ತು ಮನಃಶಾಂತಿಯ ಸಂದೇಶವನ್ನು ಸಾರುವ ಯೋಗಾಭ್ಯಾಸದಲ್ಲಿ ಅತ್ಯಂತ ಉತ್ಸಾಹದಿಂದ ಸಕ್ರಿಯವಾಗಿ ಭಾಗವಹಿಸಿದರು. ಸಂಸ್ಥೆಯ ಪ್ರಮುಖರು ಹಾಗೂ ಶಿಕ್ಷಕ ವೃಂದದ ಮಾರ್ಗದರ್ಶನದಲ್ಲಿ ವಿವಿಧ ಯೋಗಾಸನಗಳು ಮತ್ತು ಪ್ರಾಣಾಯಾಮಗಳನ್ನು ಶಿಸ್ತುಬದ್ಧವಾಗಿ ಪ್ರದರ್ಶಿಸುವ ಮೂಲಕ ವಿದ್ಯಾರ್ಥಿಗಳು ದೈಹಿಕ ಮತ್ತು ಮಾನಸಿಕ ಆರೋಗ್ಯದತ್ತ ತಮ್ಮ ಬದ್ಧತೆಯನ್ನು ತೋರ್ಪಡಿಸಿದರು.

    ಕಾರ್ಯಕ್ರಮದ ಕುರಿತು ಮಾತನಾಡಿದ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಅವರು, “ಯೋಗದಿಂದ ಮನಸ್ಸು ಮತ್ತು ದೇಹ ಎರಡೂ ಚುರುಕುಗೊಳ್ಳುತ್ತವೆ. ಯೋಗವು ನಮ್ಮ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ನೆಮ್ಮದಿಯನ್ನೂ ಹೆಚ್ಚಿಸುತ್ತದೆ. ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ಏಕಾಗ್ರತೆ, ಆತ್ಮವಿಶ್ವಾಸ ಮತ್ತು ಕಾರ್ಯಕ್ಷಮತೆ ವೃದ್ಧಿಯಾಗುತ್ತದೆ” ಎಂದರು.

    “ಅಂತರರಾಷ್ಟ್ರೀಯ ಯೋಗ ದಿನವನ್ನು ಜೂನ್ 21ರಂದು ಆಚರಿಸಲಾಗುತ್ತದೆ. ಏಕೆಂದರೆ ಈ ದಿನವು ವರ್ಷದ ಅತ್ಯಂತ ದೀರ್ಘ ಹಗಲಿನ ದಿನವಾಗಿದ್ದು, ಹಗಲು ಹೆಚ್ಚು ಮತ್ತು ರಾತ್ರಿ ಕಡಿಮೆ ಇರುತ್ತದೆ. ಈ ವಿಶೇಷ ದಿನವು ಪ್ರಕೃತಿ ಮತ್ತು ಮಾನವನ ನಡುವಿನ ಸಮತೋಲನವನ್ನು ಪ್ರತಿಬಿಂಬಿಸುತ್ತದೆ. ಆದ್ದರಿಂದ ಯೋಗದ ಮಹತ್ವವನ್ನು ಸಾರುವ ಉದ್ದೇಶದಿಂದ ಈ ದಿನವನ್ನು ಯೋಗ ದಿನವಾಗಿ ಆಚರಿಸಲಾಗುತ್ತದೆ. ಆರೋಗ್ಯಕರ ಜೀವನಕ್ಕಾಗಿ ಯೋಗ ಅತ್ಯಗತ್ಯ. ‘ಯೋಗ ಮಾಡಿ – ಆರೋಗ್ಯವಾಗಿರಿ’ ಎಂಬ ಸಂದೇಶವನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು” ಎಂದು ಕರೆ ನೀಡಿದರು.

    Click here

    Click here

    Click here

    Click Here

    Call us

    Call us

     ಕಾರ್ಯಕ್ರಮದ ಮುಖ್ಯ ಆಕರ್ಷಣೆಯಾಗಿ ಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿನಿ, ರಾಷ್ಟ್ರೀಯ ಯೋಗ ಪಟು ಲಾಸ್ಯಾ ಮದ್ಯಸ್ಥ ಅವರು ಅದ್ಭುತ ಯೋಗಾಸನಗಳ ಪ್ರದರ್ಶನ ನೀಡಿದರು. ಈ ಅಪೂರ್ವ ಸಾಧನೆಯನ್ನು ಗುರುತಿಸಿ ಸಂಸ್ಥೆಯ ವತಿಯಿಂದ ವಿದ್ಯಾರ್ಥಿನಿಯನ್ನು ಈ ಸಂದರ್ಭದಲ್ಲಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

    ಸಂಸ್ಕೃತ ಶಿಕ್ಷಕ ರಜತ್ ಭಟ್ ಕಾರ್ಯಕ್ರಮ ನಿರೂಪಿಸಿದರು.ವೇದಿಕೆಯಲ್ಲಿ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಖಜಾಂಚಿ ಭರತ್ ಶೆಟ್ಟಿ, ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ಪ್ರದೀಪ್, ವಿದ್ಯಾರಣ್ಯ ಗ್ಲೋಬಲ್ ಸ್ಕೂಲ್‌ನ ಪ್ರಾಂಶುಪಾಲರಾದ ಅನಿತಾ ಕುಮಾರಿ ಹಾಗೂ ಉಪ ಪ್ರಾಂಶುಪಾಲರಾದ ಸ್ಪೂರ್ತಿ ಎ. ಉಪಸ್ಥಿತರಿದ್ದರು. ಸಂಸ್ಥೆಯ ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ ಅವರು ಕಾರ್ಯಕ್ರಮಕ್ಕೆ ಶುಭಹಾರೈಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆ: ʼಯೋಗ ವೈಭವʼ ಕಾರ್ಯಕ್ರಮ

    22/06/2026

    ಯಡ್ತರೆ: ಮೀನು ಹಿಡಿಯಲು ಹೋದ ವ್ಯಕ್ತಿ ಸಾವು

    22/06/2026

    ಕೋಟ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿಯಾಗಿ ಸಾವು

    22/06/2026
    Leave A Reply Cancel Reply

    seventeen − nine =

    Call us

    Click Here

    Call us

    Call us

    Call us
    Highest Viewed Recently
    • ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆ: ʼಯೋಗ ವೈಭವʼ ಕಾರ್ಯಕ್ರಮ
    • ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
    • ಯಡ್ತರೆ: ಮೀನು ಹಿಡಿಯಲು ಹೋದ ವ್ಯಕ್ತಿ ಸಾವು
    • ಕೋಟ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿಯಾಗಿ ಸಾವು
    • ಕೊಲ್ಲೂರು ಮೂಕಾಂಬಿಕಾ ದೇವಿಗೆ 106 ಕೆಜಿಯ ಬೆಳ್ಳಿ ರಥ ಸಮರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.