ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲದ ಯುವ ಮೋರ್ಚಾದ ನೇತೃತ್ವದಲ್ಲಿ ವಿಶ್ವಯೋಗ ದಿನಾಚರಣೆಯನ್ನು ತ್ರಾಸಿ ಅಣ್ಣಪ್ಪಯ್ಯ ಸಭಾಭವನದಲ್ಲಿ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಮಾನ್ಯ ಶಾಸಕರಾದ ಗುರುರಾಜ್ ಗಂಟಿಹೊಳೆ, ಮಂಡಲ ಅಧ್ಯಕ್ಷರಾದ ಅನಿತಾ ಆರ್.ಕೆ, ಯುವಮೋರ್ಚಾ ಅಧ್ಯಕ್ಷರಾದ ವೇಣುಗೋಪಾಲ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ, ಮಂಡಲ ಪ್ರಧಾನ ಕಾರ್ಯದರ್ಶಿಗಳು, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳು,ಪದಾಧಿಕಾರಿಗಳು ಹಾಗೂ ಮಂಡಲದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯಮಟ್ಟದ ಯೋಗ ಪಟು ಕಲಾಶ್ರಿ ತನ್ವಿ ಯೋಗ ತರಬೇತಿ ನೀಡಿದರು.
ಈ ಸಂದರ್ಭದಲ್ಲಿ ಯುವ ಮೋರ್ಚಾದ ವತಿಯಿಂದ ಯೋಗ ತರಬೇತುದಾರರಿಗೆ ಸನ್ಮಾನಿಸಿ ಗೌರವಿಸಲಾಯಿತು.

















