Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ತೆಂಗಿನ ಎಣ್ಣೆ ಘಟಕ ಉದ್ಘಾಟನೆ
    ಊರ್ಮನೆ ಸಮಾಚಾರ

    ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ತೆಂಗಿನ ಎಣ್ಣೆ ಘಟಕ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘ ನಿ. ಇದರ ಮಹತ್ವಾಕಾಂಕ್ಷಿ ಯೋಜನೆಯಾದ ನೂತನ ತೆಂಗಿನ ಎಣ್ಣೆ ಘಟಕದ ಉದ್ಘಾಟನೆ ಹಾಗೂ ‘ಸಹಕಾರಿ ಬ್ರ್ಯಾಂಡ್’ ತೆಂಗಿನ ಎಣ್ಣೆ ಉತ್ಪನ್ನಗಳ ಮಾರುಕಟ್ಟೆಗೆ ಬಿಡುಗಡೆ ಸಮಾರಂಭವು ಸೋಮವಾರ ಬೆಳ್ವೆ ಸಂಘದ ಪ್ರಧಾನ ಕಚೇರಿ ಆವರಣದಲ್ಲಿ ನೆರವೇರಿತು.

    Click Here

    Call us

    Click Here

    ಕಾರ್ಯಕ್ರಮದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ದೀಪ ಬೆಳಗಿಸಿ, ಯಂತ್ರೋಪಕರಣಗಳಿಗೆ ಚಾಲನೆ ನೀಡಿ, ಮಾತನಾಡಿ, “ತೆಂಗು ಬೆಳೆಗಾರರು ಬೆಲೆ ಏರಿಳಿತ, ರೋಗಬಾಧೆ ಹಾಗೂ ಮಾರುಕಟ್ಟೆ ಸಮಸ್ಯೆಯಿಂದ ಸಂಕಷ್ಟದಲ್ಲಿದ್ದಾರೆ. ಈ ಘಟಕದ ಮೂಲಕ ಸಂಘದ ಸದಸ್ಯರ ತೋಟದಿಂದಲೇ ನೇರವಾಗಿ ಕಾಯಿ ಖರೀದಿಸಿ, ಮಾರುಕಟ್ಟೆ ದರದಲ್ಲೇ ಹಣ ಪಾವತಿಸುವ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಮಧ್ಯವರ್ತಿಗಳ ಹಾವಳಿ ತಪ್ಪಿ ರೈತರಿಗೆ ಪೂರ್ಣ ಲಾಭ ಸಿಗಲಿದೆ” ಎಂದರು.

    ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಬೆಳ್ವೆ ಸಂಘವು ಕೇವಲ ಬ್ಯಾಂಕಿಂಗ್‌ಗೆ ಸೀಮಿತವಾಗದೆ ಉತ್ಪಾದನಾ ಕ್ಷೇತ್ರಕ್ಕೆ ಇಳಿದಿರುವುದು ಶ್ಲಾಘನೀಯ ಎಂದು ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಎಸ್. ಜಯರಾಮ ಶೆಟ್ಟಿ ಮಾತನಾಡಿ, “ದಿನಕ್ಕೆ 50 ಸಾವಿರ ಕಾಯಿ ಸಂಸ್ಕರಣಾ ಸಾಮರ್ಥ್ಯದ ಈ ಘಟಕದಲ್ಲಿ ಶುದ್ಧ, ರಾಸಾಯನಿಕ ಮುಕ್ತ ತೆಂಗಿನ ಎಣ್ಣೆ ತಯಾರಾಗಲಿದೆ. ‘ಬೆಳ್ವೆ ಕೋಕೋನಟ್ ಆಯಿಲ್’ಬ್ರ್ಯಾಂಡ್‌ನಲ್ಲಿ 1 ಲೀಟರ್ ಹಾಗೂ 500 ಮಿ.ಲೀ. ಪ್ಯಾಕ್‌ಗಳು ಇಂದಿನಿಂದ ಮಾರುಕಟ್ಟೆಯಲ್ಲಿ ಲಭ್ಯವಿದೆ” ಎಂದು ತಿಳಿಸಿದರು.

    ಕರ್ನಾಟಕ ವಿಧಾನ ಪರಿಷತ್‌ನ ಮಾಜಿ ಸಭಾಪತಿ ಕೆ. ಪ್ರತಾಪ್ ಚಂದ್ರ ಶೆಟ್ಟಿ ಅವರು ಘಟಕವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಜಯಕರ ಶೆಟ್ಟಿ ಇಂದ್ರಾಳಿ ಅವರು ಉತ್ಪನ್ನವನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು.

    Click here

    Click here

    Click here

    Call us

    Call us

    ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ಹರೀಶ್ ಕಿಣಿ ಬಿ., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೀರ್ತಿ ಕುಮಾರ್ ಶೆಟ್ಟಿ, ನಿರ್ದೇಶಕರು, ವೃತ್ತಿಪರ ನಿರ್ದೇಶಕರು, ವಲಯ ಮೇಲ್ವಿಚಾರಕರು, ಸಿಬ್ಬಂದಿ ವರ್ಗ, ಸರ್ವ ಸದಸ್ಯರು

    ಮಾಜಿ, ಜಿ.ಪಂ. ಸದಸ್ಯರು, ತಾ.ಪಂ. ಸದಸ್ಯರು, ಸಹಕಾರ ಇಲಾಖೆ ಅಧಿಕಾರಿಗಳು ಹಾಗೂ ನೂರಾರು ರೈತರು ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ವಾಗತಿಸಿದರು, ಕಾರ್ಯದರ್ಶಿ ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಏಷ್ಯನ್ ಬೆಂಚ್ ಪ್ರೆಸ್ ಚಾಂಪಿಯನ್‌ಶಿಪ್‌ನಲ್ಲಿ ಕೀರ್ತನಾ ನಾಗೇಂದ್ರಗೆ ಬೆಳ್ಳಿ ಪದಕ

    23/09/2026

    ಡಾ. ಶಿವರಾಮ ಕಾರಂತ ಜನ್ಮದಿನಾಚರಣೆ: ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು

    23/09/2026

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸಾಹಿತ್ಯ ಸಾಂಸ್ಕೃತಿಕ ಸಂಜೆ

    23/09/2026
    Leave A Reply Cancel Reply

    13 + nine =

    Call us

    Click Here

    Call us

    Call us

    Call us
    Highest Viewed Recently
    • ಏಷ್ಯನ್ ಬೆಂಚ್ ಪ್ರೆಸ್ ಚಾಂಪಿಯನ್‌ಶಿಪ್‌ನಲ್ಲಿ ಕೀರ್ತನಾ ನಾಗೇಂದ್ರಗೆ ಬೆಳ್ಳಿ ಪದಕ
    • ಡಾ. ಶಿವರಾಮ ಕಾರಂತ ಜನ್ಮದಿನಾಚರಣೆ: ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸಾಹಿತ್ಯ ಸಾಂಸ್ಕೃತಿಕ ಸಂಜೆ
    • ಹಂಗಾರಕಟ್ಟೆ ದೂಳಂಗಡಿ ಶಾಲಾ ಶಿಕ್ಷಕಿ ವೀಣಾ ಶೆಟ್ಟಿ ಅವರಿಗೆ ರಾಜ್ಯಮಟ್ಟದ ಗುರು ಶ್ರೇಷ್ಠ ಪ್ರಶಸ್ತಿ ಶಿಕ್ಷಣ ಸೇವ ರತ್ನ ಪ್ರದಾನ
    • ಕುಂದಾಪುರ ರೈಲ್ವೆ ನಿಲ್ದಾಣದಲ್ಲಿ ಐಎಂಜೆ ಕಾಲೇಜು ಸ್ಕೌಟ್ಸ್-ಗೈಡ್ಸ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.