Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮತದಾರರ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ಭಾಗವಹಿಸಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಮತದಾರರ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ಭಾಗವಹಿಸಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣಾ ಪ್ರಕ್ರಿಯೆಯಲ್ಲಿ ಹೊಸ ಮತದಾರರ ಪಟ್ಟಿಯನ್ನು ತಯಾರಿಸಲಾಗುತ್ತಿದ್ದು, ಈ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ಭಾಗವಹಿಸಿ, ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ   ಸ್ವರೂಪ ಟಿ. ಕೆ ಕರೆ ನೀಡಿದರು.

    Click Here

    Call us

    Click Here

    ಅವರು ಮಂಗಳವಾರ ಕುಂದಾಪುರದ ಭಂಡಾರ್‌ಕಾರ್ಸ್‌ ಕಾಲೇಜಿನಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2026 ರ ಸಂಬಂಧ ಕುಂದಾಪುರ ವಿಧಾನಸಭಾ ಕ್ಷೇತ್ರದ ಚುನಾಯಿತ ಜನಪ್ರತಿನಿಧಿಗಳು, ಮೇಲ್ವಿಚಾರಕರು, ಮತಗಟ್ಟೆ ಅಧಿಕಾರಿಗಳು ಹಾಗೂ ಮತಗಟ್ಟೆ ಏಜೆಂಟ್ ಅವರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಪ್ರಜಾ ಪ್ರಾತಿನಿದ್ಯ ಕಾಯ್ದೆ ಅಡಿಯಲ್ಲಿ ಮತದಾರರ ಪಟ್ಟಿ ತಯಾರಿಸುವುದು ಸಂವಿಧಾನಾತ್ಮಕ ಕರ್ತವ್ಯ. ಈ ನಿಟ್ಟಿನಲ್ಲಿ ದೇಶದಾದ್ಯಂತ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮವು ನಡೆಯುತ್ತಿದೆ. 2025 ರ ಮತದಾರರ ಪಟ್ಟಿಯಲ್ಲಿರುವ ಹೆಸರುಗಳಿಗೆ ಸಂಬಂಧಿಸಿದಂತೆ 2002 ರಲ್ಲಿರುವ ಮತದಾರರ ಪಟ್ಟಿಯ ಮತದಾರರ ಕುಟುಂಬದ ಸಂತತಿಗಳಿಗೆ ಮ್ಯಾಪಿಂಗ್ ಮಾಡಿ ಲಿಂಕ್ ಮಾಡಲಾಗುತ್ತಿರುವುದರಿಂದ ಯಾವ ಅರ್ಹ ಮತದಾರರು ಮತದಾನದಿಂದ ವಂಚಿತರಾಗದಂತೆ ಗಮನಹರಿಸಬೇಕು ಎಂದರು.

    ಮತಗಟ್ಟೆ ಅಧಿಕಾರಿಗಳು ಜೂ.30 ರಿಂದ ಜುಲೈ 29 ರ ವರೆಗೆ 10 ದಿನಗಳ ಕಾಲ ಮನೆ ಮನೆಗೆ ಭೇಟಿ ನೀಡಿ ಪೂರ್ವದಲ್ಲಿ ಮುದ್ರಣ ಗೊಂಡಿರುವ ನಮೂನೆಯನ್ನು ದ್ವಿ ಪ್ರತಿಯಲ್ಲಿ ನೀಡುತ್ತಾರೆ. ಮತದಾರರು ಅದನ್ನು ಸಂಪೂರ್ಣವಾಗಿ ಭರ್ತಿ ಮಾಡಿ ಪ್ರಸ್ತುತ ಭಾವಚಿತ್ರ ಅಂಟಿಸಿ ಕಡ್ಡಾಯವಾಗಿ ಸಹಿ ಮಾಡಿ ಒಂದು ಪ್ರತಿಯನ್ನು ಮತಗಟ್ಟೆ ಅಧಿಕಾರಿಗೆ ಹಿಂದಿರುಗಿಸಬೇಕು. ಒಂದೊಮ್ಮೆ ನೀಡದೇ ಇದ್ದಲ್ಲಿ ಮತಗಟ್ಟೆ ಅಧಿಕಾರಿಗಳು ಮೂರು ಬಾರಿ ಮನೆ ಬಾಗಿಲಿಗಿ ಭೇಟಿ ನೀಡಲಿದ್ದಾರೆ ಎಂದರು.

    ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಕುರಿತು ಗಂಭೀರವಾಗಿ ಪರಿಗಣಿಸಿ ಬೂತ್ ಮಟ್ಟದ ಅಧಿಕಾರಿಗಳು  ತಮ್ಮ ಕರ್ತವ್ಯ ನಿರ್ವಹಿಸುವುದರೊಂದಿಗೆ ಮತದಾರರ ಪಟ್ಟಿಯಿಂದ ಅರ್ಹ ಮತದಾರರು ಹೊರಗುಳಿಯದಂತೆ ನಿಗಾವಹಿಸಬೇಕು. ಏನುಮರೇಷನ್ ಫಾರ್ಮ್ ಭರ್ತಿ ಮಾಡಿ ನೀಡದೆ ಇರುವವರು ಅಥವಾ ಫಾರಂ ಅಪ್ಲೋಡ್ ಆಗದೆ ಇರುವವರ ಹೆಸರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗುವ ಸಾಧ್ಯಗಳಿದ್ದು, ಈ ಬಗ್ಗೆ ಗಮನಹರಿಸುವಂತೆ ತಿಳಿಸಿದರು.

    Click here

    Click here

    Click here

    Call us

    Call us

    ವರ್ಷದಲ್ಲಿ ನಾಲ್ಕು ಬಾರಿ ಜನವರಿ, ಏಪ್ರಿಲ್, ಜುಲೈ ಮತ್ತು ಅಕ್ಟೋಬರ್ 1 ರಂದು ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯನಡೆಯಲಿದೆ. ಈ ಸಂದರ್ಭದಲ್ಲಿ 18 ವರ್ಷ ಪೂರೈಸಿದವರು ಹೊಸ ಅರ್ಜಿ ಸಲ್ಲಿಸಬಹುದಾಗಿದೆ. ಪ್ರಸ್ತುತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯಾಗಿ ಹೊಸ ಮತದಾರರ ಪಟ್ಟಿ ತಯಾರಿಸಲಾಗುತ್ತದೆ ಎಂದರು.

    ಉಪನ್ಯಾಸಕರು ಹಾಗೂ ಜಿಲ್ಲಾ ಮಾಸ್ಟರ್ ಟ್ರೆöÊನರ್ ಗಂಗಾಧರ್ ಮಾಹಿತಿ ನೀಡಿ ಮಾತನಾಡಿ, ಜೂನ್ 20 ರಿಂದ ಜೂನ್ 29 ವರೆಗೆ ಪೂರ್ವಸಿದ್ಧತಾ ಕಾರ್ಯಗಳು ಮತ್ತು ತರಬೇತಿ ಪ್ರಕ್ರಿಯೆಗಳು ನಡೆಯಲಿವೆ. ಜೂನ್ 30 ರಿಂದ ಜುಲೈ 29 ಬಿಎಲ್‌ಒ (BLO)ಗಳ ಮೂಲಕ ಮನೆ ಮನೆ ಸಮೀಕ್ಷೆ ನಡೆಸಿ, ನಮೂನೆಗಳನ್ನು ಪಡೆದು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗುವುದು. ಜುಲೈ 29 ಮತಗಟ್ಟೆಗಳ ತರ್ಕಬದ್ಧಗೊಳಿಸುವಿಕೆ (Rationalization) ಪ್ರಕ್ರಿಯೆ ನಡೆಯಲಿದೆ. ಆಗಸ್ಟ್ 5 ಕರಡು ಮತದಾರರ ಪಟ್ಟಿಯ (Draft Roll) ಪ್ರಕಟಣೆ. ಆಗಸ್ಟ್ 5 ರಿಂದ ಸೆಪ್ಟೆಂಬರ್ 4 ಆಕ್ಷೇಪಣೆಗಳನ್ನು ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಅಕ್ಟೋಬರ್ 3 ರವರೆಗೆ ಸ್ವೀಕೃತವಾದ ಆಕ್ಷೇಪಣೆಗಳ ಇತ್ಯರ್ಥಗೊಳಿಸಬೇಕು, ಅಕ್ಟೋಬರ್ 7 ಕ್ಕೆ ಅಂತಿಮ ಮತದಾರರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಣೆ ಮಾಡಬೇಕು ಎಂದರು.

    ಇದೇ ಸಂದರ್ಭದಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಹಾಗೂ ಬಿ.ಎಲ್.ಎ ಗಳು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣಾ ಪ್ರಕ್ರಿಯೆ ಕುರಿತ ಸಂದೇಹಗಳನ್ನು ಪ್ರಶ್ನಿಸಿ, ಉತ್ತರ ಪಡೆದುಕೊಂಡರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಸಹಾಯಕ ಕಮಿಷನರ್ ರಶ್ಮಿ, ಕುಂದಾಪುರ ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್, ಶಿಕ್ಷಣ ಇಲಾಖೆಯ ಸಂತೋಷ್ ಕುಮಾರ್, ಸದಾನಂದ್, ಬಿ.ಎಲ್.ಓ, ಬಿ.ಎಲ್.ಎ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡೇವಿಡ್ ಕೊಲೆ ಪ್ರಕರಣ – ಬೈಂದೂರು, ಭಟ್ಕಳದಲ್ಲಿ  ಮೂವರು ಆರೋಪಿಗಳ ಬಂಧನ

    08/08/2026

    ಪ್ರಕೃತಿ ವಿಕೋಪದಿಂದ ಜನಸಾಮಾನ್ಯರಿಗೆ ತೊಂದರೆ ಉಂಟಾದಲ್ಲಿ ಕೂಡಲೇ ಸ್ಪಂದಿಸಿ: ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್

    08/08/2026

    ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ

    08/08/2026
    Leave A Reply Cancel Reply

    6 + 19 =

    Call us

    Click Here

    Call us

    Call us

    Call us
    Highest Viewed Recently
    • ಹಂಗಾರಕಟ್ಟೆ ದೂಳಂಗಡಿ ಶಾಲೆಯಲ್ಲಿ ಸಾಹಿತ್ಯ ಪ್ರೇರಣೆ ಕಾರ್ಯಕ್ರಮ
    • ಹೊಸಬೆಂಗ್ರೆ ಅಂಗನವಾಡಿಯಲ್ಲಿ ಕೇಂದ್ರ ಸರ್ಕಾರದ ಪೋಷಣ್ ಅಭಿಯಾನ
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಫ್ರೆಶರ್ಸ್ ಡೇ
    • ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ
    • ಬೈಂದೂರು ಸ.ಪ್ರ.ದ ಕಾಲೇಜಿನ ಪ್ರಾಂಶುಪಾಲರಾಗಿ ಡಾ. ಉಮೇಶ ಮಯ್ಯ ಅಧಿಕಾರ ಸ್ವೀಕಾರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.