ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಪ್ರಸಕ್ತ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯ ವತಿಯಿಂದ ಜಿಲ್ಲಾ ವಲಯ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಮೀನುಗಾರರಿಗೆ ಉಚಿತವಾಗಿ ಮೀನುಗಾರಿಕಾ ಸಲಕರಣೆ ಕಿಟ್ಟು ವಿತರಣೆ ಯೋಜನೆ, ಮತ್ಸ್ಯವಾಹಿನಿ ಯೋಜನೆಯಡಿ ಮೀನು ಮಾರಾಟಕ್ಕೆ ದ್ವಿಚಕ್ರ, ತ್ರಿಚಕ್ರ ಮತ್ತು ನಾಲ್ಕು ಚಕ್ರದ ವಾಹನ ಖರೀದಿಗೆ ಸಹಾಯ ಹಾಗೂ ಕರಾವಳಿ ತಾಲೂಕುಗಳ ಅರ್ಹ ಫಲಾನುಭವಿಗಳಿಗೆ ಜೀವರಕ್ಷಕ ಸಾಧನಗಳನ್ನು ಉಚಿತವಾಗಿ ವಿತರಿಸುವ ಯೋಜನೆಗಳನ್ನು ಪಾರದರ್ಶಕವಾಗಿ ಹಾಗೂ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ. ಆಸಕ್ತ ಮೀನುಗಾರರು ಅರ್ಜಿಯನ್ನು ಸೇವಾಸಿಂಧು ಪೋರ್ಟಲ್ ನಲ್ಲಿ ಸಲ್ಲಿಸಬೇಕು. ಮೂಲ ಅರ್ಜಿಯನ್ನು ದಾಖಲಾತಿಗಳೊಂದಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಕಛೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಛೇರಿಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.











