Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯವನ್ನು ಜಾಗರೂಕತೆಯಿಂದ ನಿರ್ವಹಿಸಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯವನ್ನು ಜಾಗರೂಕತೆಯಿಂದ ನಿರ್ವಹಿಸಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯವನ್ನು ಬಿ.ಎಲ್.ಓ ಹಾಗೂ ಬಿ.ಎಲ್.ಎ ಗಳು ಅತ್ಯಂತ ಪ್ರಾಮಾಣಿಕತೆ, ಪಾರದರ್ಶಕತೆ ಹಾಗೂ ಜಾಗರೂಕತೆಯಿಂದ ನಿರ್ವಹಿಸಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮತ್ತಷ್ಟು ಬಲಪಡಿಸುವಲ್ಲಿ ಸಕ್ರಿಯ ಪಾತ್ರ ವಹಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು.

    Click Here

    Call us

    Click Here

    ಅವರು ಬುಧವಾರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಭಾಂಗಣದಲ್ಲಿ, ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ – 2026 ಕ್ಕೆ ಸಂಬಂಧಿಸಿದಂತೆ, ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಬಿ.ಎಲ್.ಓ ಮತ್ತು ಬಿ.ಎಲ್.ಎ ಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಪ್ರಜಾಪ್ರಭುತ್ವದ ಯಶಸ್ಸು ಪಾರದರ್ಶಕ ಮತದಾರರ ಪಟ್ಟಿಯ ಮೇಲೆ ಅವಲಂಬಿತವಾಗಿರುತ್ತದೆ. ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯದಲ್ಲಿ ಬಿ.ಎಲ್.ಓ ಹಾಗೂ ಬಿ.ಎಲ್.ಎ ಗಳು ಪ್ರತಿಯೊಬ್ಬ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಹಾಗೂ ನೈಜ ಮತದಾರರು ಯಾವುದೇ ಕಾರಣಕ್ಕೂ ಮತದಾನ ಪ್ರಕ್ರಿಯೆಯಿಂದ ವಂಚಿತರಾಗದಂತೆ ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದರು.

    ಸಂಪೂರ್ಣ ಪರಿಷ್ಕೃತವಾದ ಹೊಸ ಮತದಾರರ ಪಟ್ಟಿಯನ್ನು ತಯಾರಿಸುವುದರೊಂದಿಗೆ ನ್ಯೂನ್ಯತೆಗಳನ್ನು ಸರಿಪಡಿಸಿ, ಯಾವುದೇ ಅರ್ಹ ಮತದಾರ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದು ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಉದ್ದೇಶವಾಗಿದೆ ಎಂದ ಅವರು, ತರಬೇತಿಯಲ್ಲಿನ ಎಲ್ಲಾ ಅಂಶಗಳನ್ನು ಸಮಗ್ರವಾಗಿ ಅರ್ಥೈಸಿಕೊಂಡು ಬಿ.ಎಲ್.ಓ ಹಾಗೂ ಬಿ.ಎಲ್.ಎ ಗಳು ಕರ್ತವ್ಯ ನಿರ್ವಹಿಸುವಂತೆ ತಿಳಿಸಿದರು.

    ಭಾರತ ಚುನಾವಣಾ ಆಯೋಗವು ವಿಶೇಷ ಸಮಗ್ರ ಪರಿಷ್ಕರಣೆಗೆ ಅರ್ಹತಾ ದಿನಾಂಕ ಅಕ್ಟೋಬರ್ 1 ನ್ನು ಘೋಷಿಸಿದೆ. ಜೂನ್ 20 ರಿಂದ 29 ರ ವರೆಗೆ ಪೂರ್ವತಯಾರಿ, ತರಬೇತಿ ಮತ್ತು ಮುದ್ರಣಕ್ಕೆ ಅವಕಾಶ ಕಲ್ಪಿಸಿದೆ. ಜೂನ್ 30 ರಿಂದ ಜುಲೈ 29 ರ ವರೆಗೆ ಮತಗಟ್ಟೆ ಅಧಿಕಾರಿಯಿಂದ ಮನೆಮನೆ ಭೇಟಿ ಹಾಗೂ ಮತಗಟ್ಟೆಗಳ ಪುನರ್ ವಿಂಗಡಣೆ ಕಾರ್ಯ ನಡೆಯಲಿದ್ದು, ಆಗಸ್ಟ್ 5 ರಂದು ಕರಡು ಮತದಾರರ ಪಟ್ಟಿ ಪ್ರಕಟಗೊಳ್ಳಲಿದೆ ಎಂದರು.

    Click here

    Click here

    Click here

    Click Here

    Call us

    Call us

    ಎಸ್.ಐ.ಆರ್ ಪ್ರಕ್ರಿಯೆಯಲ್ಲಿ ಬಿ.ಎಲ್.ಒ.ಗಳು ಜೂ. 30 ರಿಂದ ಜು. 29 ರ ವರೆಗೆ ಪೂರ್ವ ಮುದ್ರಿತ ನಮೂನೆಗಳನ್ನು ಪ್ರತಿ ಮನೆಗೆ ಭೇಟಿ ನೀಡಿ, ಪೂರ್ವ ಮಾಹಿತಿಯುಳ್ಳ ಗಣತಿ ನಮೂನೆಯನ್ನು ದ್ವಿಪ್ರತಿಯಲ್ಲಿ ವಿತರಿಸಿ, ಅವುಗಳನ್ನು ಭರ್ತಿ ಮಾಡಲು ಮಾರ್ಗದರ್ಶನ ನೀಡಲಿದ್ದಾರೆ. ಒಂದೊಮ್ಮೆ ಗಣತಿ ಸಮಯದಲ್ಲಿ ಮತದಾರರ ಮನೆಗೆ ಬೀಗ ಹಾಕಿದ್ದರೆ, ಅಧಿಕಾರಿಗಳು ಕನಿಷ್ಠ ಮೂರು ಬಾರಿ ಆ ಮನೆಗೆ ಭೇಟಿ ನೀಡಿ, ಮಾಹಿತಿ ಕಲೆ ಹಾಕಲು ಪ್ರಯತ್ನಿಸಬೇಕು. ಎರಡನೇ ಭೇಟಿಯಲ್ಲಿ ಬಿ.ಎಲ್.ಒಗಳು ಮತದಾರರು ಭರ್ತಿ ಮಾಡಿದ ಫಾರಂ ಅನ್ನು ಸಂಗ್ರಹಿಸಿ ಸ್ವೀಕೃತಿ ನೀಡುತ್ತಾರೆ. ನಮೂನೆಯಲ್ಲಿ ಮತದಾರರ ಇತ್ತೀಚಿನ ಭಾವಚಿತ್ರವನ್ನು ಅಂಟಿಸಿರಬೇಕು ಜೊತೆಗೆ ಭರ್ತಿ ಮಾಡಿದ ಫಾರಂಗಳ ಮೇಲೆ ಮತದಾರರ ಸಹಿ ಅಥವಾ ಹೆಬ್ಬೆರಳ ಗುರುತು ಕಡ್ಡಾಯವಾಗಿರಬೇಕು ಎಂದರು.

    ಆ.5 ರಿಂದ ಸೆ.4 ರ ವರೆಗೆ ಹಕ್ಕು ಮತ್ತು ಆಕ್ಷೇಪಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಿದೆ. ಜೊತೆಗೆ ಆ.5 ರಿಂದ ಅ.3 ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳ ನೈಜತೆಯನ್ನು ಪರಿಶೀಲಿಸುವ ಕಾರ್ಯ ನಡೆಯಲಿದೆ. ಅಕ್ಟೋಬರ್ 7 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಗೊಳ್ಳಲಿದೆ ಎಂದ ಅವರು, ಮನೆ ಭೇಟಿ ಸಂದರ್ಭ ಮತದಾರರು ಯಾವುದೇ ಪ್ರತಿಕ್ರಿಯೆ ನೀಡದಿದ್ದಲ್ಲಿ ಅಥವಾ ಫಾರಂಗಳನ್ನು ಸ್ವೀಕರಿಸದೇ ಇದ್ದಲ್ಲಿ ಕರಡು ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರು ಇರುವುದಿಲ್ಲ ಎಂದರು.

    ಎನುಮರೇಷನ್ ಫಾಮ್‌ಗಳನ್ನು ಬಿ.ಎಲ್.ಓ ಗಳೇ ವಿತರಿಸಬೇಕು. ಬಿ.ಎಲ್.ಎ ಗಳು ವಿತರಿಸಲು ಅವಕಾಶವಿರುವುದಿಲ್ಲ. ಭರ್ತಿ ಮಾಡಿದ ನಮೂನೆಯನ್ನು ಮತದಾರರು ಕಡ್ಡಾಯವಾಗಿ ಬೂತ್ ಮಟ್ಟದ ಅಧಿಕಾರಿಗಳಿಗೆ ಸಲ್ಲಿಸಬೇಕು. ಅಧಿಕಾರಿಗಳು ಭರ್ತಿ ಮಾಡಿದ ನಮೂನೆ ಮತ್ತು ಅಗತ್ಯ ದಾಖಲೆಗಳನ್ನು ಪಡೆದು, ಒಂದು ಪ್ರತಿಗೆ ಸ್ವೀಕೃತಿ ನೀಡಬೇಕು. ಮತದಾರರು ದಾಖಲೆಗಳೊಂದಿಗೆ ಭರ್ತಿ ಮಾಡಿದ ನಮೂನೆಯನ್ನು ಆನ್‌ಲೈನ್ ಮೂಲಕವೂ ಅಪ್‌ಲೋಡ್ ಮಾಡಬಹುದು ಎಂದು ತಿಳಿಸಿದರು.

    ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಹಿರಿಯ ಉಪನ್ಯಾಸಕರು ಹಾಗೂ ಜಿಲ್ಲಾ ಮಾಸ್ಟರ್ ಟ್ರೈನರ್ ಆದ ಗಂಗಾಧರ್ ವಿ.ಎ, ಎಸ್.ಐ.ಆರ್ ಪ್ರಕ್ರಿಯೆಯ ವಿವಿಧ ಹಂತಗಳಾದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ತರಬೇತಿ ನೀಡುವುದು, ಅಗತ್ಯ ನಮೂನೆಗಳು ಹಾಗೂ ದಾಖಲೆಗಳ ಮುದ್ರಣ, ಮತಗಟ್ಟೆಗಳ ಮರುಹೊಂದಿಕೆ, ಮನೆಮನೆಗೆ ಭೇಟಿ ನೀಡಿ ಮತದಾರರ ಮಾಹಿತಿಯ ಸಂಗ್ರಹ ಮತ್ತು ಪರಿಶೀಲನೆ, ಕರಡು ಮತದಾರರ ಪಟ್ಟಿಯ ಪ್ರಕಟಣೆ, ಹಕ್ಕು ಮತ್ತು ಆಕ್ಷೇಪಣೆಗಳ ಸ್ವೀಕಾರ, ಅರ್ಜಿಗಳ ಪರಿಶೀಲನೆ ಹಾಗೂ ಅಂತಿಮ ಮತದಾರರ ಪಟ್ಟಿಯ ಪ್ರಕಟಣೆ ಸೇರಿದಂತೆ ಎಸ್‌ಐಆರ್ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ನೀಡಿದರು.

    ಇದೇ ಸಂದರ್ಭದಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಹಾಗೂ ಬಿ.ಎಲ್.ಎ ಗಳು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣಾ ಪ್ರಕ್ರಿಯೆ ಕುರಿತ ಸಂದೇಹಗಳನ್ನು ಜಿಲ್ಲಾಧಿಕಾರಿಗಳೊಂದಿಗೆ ಪ್ರಶ್ನಿಸಿ, ತಮ್ಮ ಸಂದೇಹಗಳಿಗೆ ಉತ್ತರ ಪಡೆದುಕೊಂಡರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಕಾಪು ತಹಶೀಲ್ದಾರ್ ಅನಂತ ಶಂಕರ ಬಿ, ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿ.ಎಲ್.ಓ, ಬಿ.ಎಲ್.ಎ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜಿಲ್ಲೆಯ 0-5 ವರ್ಷದೊಳಗಿನ ಪ್ರತಿಯೊಬ್ಬ ಮಕ್ಕಳಿಗೂ ಪಲ್ಸ್ ಪೋಲಿಯೋ ಲಸಿಕೆ ನೀಡಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

    25/06/2026

    ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆಗೆ ಅರ್ಜಿ ಆಹ್ವಾನ

    24/06/2026

    ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ: ನೋಂದಣಿಗೆ ಸೂಚನೆ

    24/06/2026
    Leave A Reply Cancel Reply

    19 + 20 =

    Call us

    Click Here

    Call us

    Call us

    Call us
    Highest Viewed Recently
    • ನಾಯಕತ್ವದ ಜವಾಬ್ದಾರಿ ಅರಿಯಲು ಶಾಲಾ ವಿದ್ಯಾರ್ಥಿ ಸಂಘ ಅಡಿಗಲ್ಲು: ಮಹೇಶ್ ಕೆ.
    • ಮಾದಕ ವ್ಯಸನದಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ರವಿಪ್ರಸಾದ ಹೆಗ್ಡೆ
    • ಜಿಲ್ಲೆಯ 0-5 ವರ್ಷದೊಳಗಿನ ಪ್ರತಿಯೊಬ್ಬ ಮಕ್ಕಳಿಗೂ ಪಲ್ಸ್ ಪೋಲಿಯೋ ಲಸಿಕೆ ನೀಡಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ
    • ರಂಗವಲ್ಲಿಯ ಮೂಲಕ ಕಾರಂತರನ್ನು ಪರಿಚಯಿಸುವ ಕಾರ್ಯಕ್ರಮ
    • ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯವನ್ನು ಜಾಗರೂಕತೆಯಿಂದ ನಿರ್ವಹಿಸಿ: ಜಿಲ್ಲಾಧಿಕಾರಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.