Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲೆಯ 0-5 ವರ್ಷದೊಳಗಿನ ಪ್ರತಿಯೊಬ್ಬ ಮಕ್ಕಳಿಗೂ ಪಲ್ಸ್ ಪೋಲಿಯೋ ಲಸಿಕೆ ನೀಡಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ
    ಉಡುಪಿ ಜಿಲ್ಲೆ

    ಜಿಲ್ಲೆಯ 0-5 ವರ್ಷದೊಳಗಿನ ಪ್ರತಿಯೊಬ್ಬ ಮಕ್ಕಳಿಗೂ ಪಲ್ಸ್ ಪೋಲಿಯೋ ಲಸಿಕೆ ನೀಡಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯಾದ್ಯಂತ ಜೂನ್ 28 ರ ಭಾನುವಾರದಂದು ನಡೆಯಲಿರುವ  ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಅಭಿಯಾನದಡಿ 0-5 ವರ್ಷದೊಳಗಿನ ಪ್ರತಿಯೊಬ್ಬ ಮಕ್ಕಳಿಗೆ ಪೋಲಿಯೋ ಲಸಿಕೆಯನ್ನು ನೀಡಬೇಕೆಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಕರೆ ನೀಡಿದರು.

    Click Here

    Call us

    Click Here

    ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಜಿಲ್ಲಾ ಲಸಿಕಾ ಕಾರ್ಯಪಡೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜೂನ್ 28 ರ ಭಾನುವಾರ ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು ಜಿಲ್ಲೆ ಎಲ್ಲಾ 0 ಯಿಂದ 5 ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ ಲಸಿಕೆ ಹಾಕಿಸಿದ್ದರೂ ಅಂದು ಪೋಲಿಯೋ ಲಸಿಕೆ ಹಾಕಿಸಬೇಕು ಎಂದರು.

    ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಒಟ್ಟು 65,401 ಮಕ್ಕಳನ್ನು ಗುರುತಿಸಲಾಗಿದೆ. 19 ಟ್ರಾನ್ಸಿಟ್, 3 ಮೊಬೈಲ್ ತಂಡಗಳು ಸೇರಿದಂತೆ ಒಟ್ಟು 665 ಬೂತ್‌ಗಳು ಕಾರ್ಯ ನಿರ್ವಹಿಸಲಿವೆ. 2660 ಲಸಿಕಾ ಕಾರ್ಯಕರ್ತರಿದ್ದು, 155 ಮೇಲ್ವಿಚಾರಕರನ್ನು ಲಸಿಕಾ ಕಾರ್ಯಕ್ಕೆ ನೇಮಿಸಲಾಗಿದೆ ಎಂದರು.

    ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು 1995 ರಿಂದ ಜಾರಿಗೆ ತರಲಾಗುತ್ತಿದೆ. ನಮ್ಮ ದೇಶದಲ್ಲಿ ಯಾವುದೇ ಒಂದು ಪ್ರಕರಣಗಳು ಸಹ ಕಂಡುಬಂದಿಲ್ಲ. ಆದರೆ ನಮ್ಮ ನೆರೆಹೊರೆಯ ದೇಶಗಳಲ್ಲಿ ಪ್ರಕರಣ ಕಂಡುಬಂದ ಹಿನ್ನೆಲೆ, ನಮ್ಮಲ್ಲಿಯೂ ಸಹ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

    ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲಾ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದ ಅವರು, ಆರೋಗ್ಯ ಇಲಾಖೆ ಸಿಬ್ಬಂದಿಗಳೂ, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಸಕ್ರೀಯವಾಗಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರತಿಶತಃ ನೂರರಷ್ಟು ಸಾಧನೆ ಮಾಡಬೇಕೆಂದರು.

    Click here

    Click here

    Click here

    Click Here

    Call us

    Call us

    ಪೋಲಿಯೋ ಬೂತ್‌ಗಳನ್ನು ತೆರೆಯಲು ಶಾಲಾ ಕೊಠಡಿಗಳು, ಅಂಗನವಾಡಿ ಕಟ್ಟಡಗಳು ಸೇರಿದಂತೆ ಅಗತ್ಯವಿರುವ ಇತರ ಸರ್ಕಾರಿ ಮತ್ತು ಅರೆ ಸರ್ಕಾರಿ ಕಟ್ಟಡಗಳ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕು. ಜೂ. 25 ರಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮ ಮುಗಿಯುವವರೆಗೂ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಮೆಸ್ಕಾಂ ಇಲಾಖೆಯ ಅಧಿಕಾರಿಗಳು ಸೂಚಿಸಿದರು.

    ಸಭೆಯಲ್ಲಿ ಪೌರಾಯುಕ್ತ ಮಹಾಂತೇಶ ಹಂಗರಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಜ್ಯೋತ್ಸ್ನಾ ಬಿ.ಕೆ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ನಾಗರತ್ನ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯವನ್ನು ಜಾಗರೂಕತೆಯಿಂದ ನಿರ್ವಹಿಸಿ: ಜಿಲ್ಲಾಧಿಕಾರಿ

    25/06/2026

    ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆಗೆ ಅರ್ಜಿ ಆಹ್ವಾನ

    24/06/2026

    ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ: ನೋಂದಣಿಗೆ ಸೂಚನೆ

    24/06/2026
    Leave A Reply Cancel Reply

    5 × one =

    Call us

    Click Here

    Call us

    Call us

    Call us
    Highest Viewed Recently
    • ನಾಯಕತ್ವದ ಜವಾಬ್ದಾರಿ ಅರಿಯಲು ಶಾಲಾ ವಿದ್ಯಾರ್ಥಿ ಸಂಘ ಅಡಿಗಲ್ಲು: ಮಹೇಶ್ ಕೆ.
    • ಮಾದಕ ವ್ಯಸನದಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ರವಿಪ್ರಸಾದ ಹೆಗ್ಡೆ
    • ಜಿಲ್ಲೆಯ 0-5 ವರ್ಷದೊಳಗಿನ ಪ್ರತಿಯೊಬ್ಬ ಮಕ್ಕಳಿಗೂ ಪಲ್ಸ್ ಪೋಲಿಯೋ ಲಸಿಕೆ ನೀಡಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ
    • ರಂಗವಲ್ಲಿಯ ಮೂಲಕ ಕಾರಂತರನ್ನು ಪರಿಚಯಿಸುವ ಕಾರ್ಯಕ್ರಮ
    • ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯವನ್ನು ಜಾಗರೂಕತೆಯಿಂದ ನಿರ್ವಹಿಸಿ: ಜಿಲ್ಲಾಧಿಕಾರಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.