Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಾದಕ ವ್ಯಸನದಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ರವಿಪ್ರಸಾದ ಹೆಗ್ಡೆ
    alvas nudisiri

    ಮಾದಕ ವ್ಯಸನದಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ರವಿಪ್ರಸಾದ ಹೆಗ್ಡೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ: ಯುವಜನರು ಮಾದಕ ವ್ಯಸನದಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿತ್ವ ಮತ್ತು ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದು ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕ ಡಾ. ರವಿಪ್ರಸಾದ ಹೆಗ್ಡೆ ಹೇಳಿದರು.

    Click Here

    Call us

    Click Here

    ಅವರು ಕೇಂದ್ರ ಸರ್ಕಾರದ ‘ನಶಾಮುಕ್ತ ಭಾರತ್ ಅಭಿಯಾನ’ ಅಂಗವಾಗಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ಮಾದಕ ವಸ್ತು ನಿಯಂತ್ರಣ ಸಮಿತಿ ವತಿಯಿಂದ ಬುಧವಾರ ಕಾಲೇಜಿನ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ‘ಮಾದಕ ವಸ್ತುಗಳ ದುಷ್ಪರಿಣಾಮಗಳು ಮತ್ತು ವ್ಯಸನಮುಕ್ತ ಜೀವನ’ ಕುರಿತ ಅರಿವು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

    ಮಾದಕ ವ್ಯಸನವು ಹೊಸ ಸಮಸ್ಯೆಯಲ್ಲ. ಪ್ರಾಚೀನ ಕಾಲದಿಂದಲೂ ವಿವಿಧ ರೂಪಗಳಲ್ಲಿ ಸಮಾಜವನ್ನು ಕಾಡುತ್ತಲೇ ಬಂದಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಅದರ ಸ್ವರೂಪ ಮತ್ತಷ್ಟು ಅಪಾಯಕಾರಿಯಾಗಿದ್ದು, ಯುವಜನರನ್ನು ಹೆಚ್ಚು ಸೆಳೆಯುತ್ತಿದೆ ಎಂದರು.

    ಸ್ನೇಹಿತರ ಒತ್ತಡ ಅಥವಾ ಕ್ಷಣಿಕ  ಸುಖಕ್ಕಾಗಿ  ಆರಂಭವಾಗುವ ಅಭ್ಯಾಸ ಕ್ರಮೇಣ ವ್ಯಕ್ತಿಯ ಆರೋಗ್ಯ, ಶಿಕ್ಷಣ, ವೃತ್ತಿ ಹಾಗೂ ಕುಟುಂಬ ಜೀವನವನ್ನೇ ಹಾಳು ಮಾಡುತ್ತದೆ. ವಿಷ ಸೇವಿಸಿದರೆ ಕ್ಷಣಮಾತ್ರದಲ್ಲಿ ಜೀವ ಕಳೆದುಕೊಳ್ಳಬಹುದು; ಆದರೆ ಮದ್ಯ ಮತ್ತು ಮಾದಕ ವಸ್ತುಗಳ ವ್ಯಸನ ವ್ಯಕ್ತಿಯನ್ನು ನಿಧಾನವಾಗಿ ಸಾವಿನತ್ತತಳ್ಳುತ್ತದೆ.

    ಮದ್ಯ ಹಾಗೂ ಮಾದಕ ವಸ್ತುಗಳ ಸೇವನೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯದ ಸಮಸ್ಯೆಗಳು ಮಾತ್ರವಲ್ಲದೆ ಕುಟುಂಬ ಕಲಹ, ರಸ್ತೆ ಅಪಘಾತ, ಹಿಂಸಾಚಾರ ಮತ್ತು ಅಪರಾಧ ಪ್ರಕರಣಗಳ ಸಂಖ್ಯೆಯೂ ಹೆಚ್ಚುತ್ತಿದೆ. ಯಾರೂ ವ್ಯಸನಿಯಾಗಬೇಕೆಂಬ ಉದ್ದೇಶದಿಂದ ಮಾದಕ ವಸ್ತುಗಳನ್ನು ಸೇವಿಸಲು ಆರಂಭಿಸುವುದಿಲ್ಲ. ಆದರೆ ಒಂದು ಬಾರಿ ಅದರ ದಾಸರಾದರೆ ಅದರಿಂದ ಹೊರಬರುವುದು ಬಹಳ ಕಷ್ಟವಾಗುತ್ತದೆ. ಆದ್ದರಿಂದ ವ್ಯಸನದ ಬಗ್ಗೆ ಕುತೂಹಲವೂ ಬೇಡ, ಪ್ರಯೋಗವೂ ಬೇಡ,” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

    Click here

    Click here

    Click here

    Click Here

    Call us

    Call us

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಆಳ್ವಾಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಮೊಹಮ್ಮದ್ ಸದಾಕತ್, ವ್ಯಸನಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬರ ವೈಯಕ್ತಿಕ ಸಂಕಲ್ಪದಿಂದಲೇ  ಸಾಧ್ಯವಾಗಬೇಕು. ಮೊದಲು ನಾವು ಸರಿಯಾದರೆ ಕುಟುಂಬ ಸರಿಯಾಗುತ್ತದೆ. ಕುಟುಂಬ ಸರಿಯಾದರೆ ಸಮಾಜ, ಗ್ರಾಮ, ಜಿಲ್ಲೆ, ರಾಜ್ಯ ಮತ್ತು ದೇಶವೂ ಉತ್ತಮ ದಿಕ್ಕಿನಲ್ಲಿ ಸಾಗುತ್ತದೆ. ಯಾವುದೇ ಮಾದಕ ವಸ್ತುವನ್ನು ಮುಟ್ಟುವುದಿಲ್ಲ ಎಂಬ ದೃಢ ನಿರ್ಧಾರವೇ ವ್ಯಸನಕ್ಕೆ ಶಾಶ್ವತ ಪರಿಹಾರ.  ‘ಬೇಡ’ ಎಂದು ಹೇಳುವುದು ದೌರ್ಬಲ್ಯವಲ್ಲ; ಅದು ವ್ಯಕ್ತಿಯ ಆತ್ಮವಿಶ್ವಾಸ ಮತ್ತು ವ್ಯಕ್ತಿತ್ವದ ಬಲದ ಸಂಕೇತವಾಗಿದೆ ಎಂದು ಹೇಳಿದರು.

    ಇತ್ತೀಚಿನ ವರ್ಷಗಳಲ್ಲಿ 20 ರಿಂದ 21 ವರ್ಷದೊಳಗಿನ ಯುವಕರು ಮಾದಕ ವ್ಯಸನದತ್ತ ಹೆಚ್ಚು ಆಕರ್ಷಿತರಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ವಿದ್ಯಾರ್ಥಿಗಳು ತಮ್ಮ ಗುರಿಯತ್ತ ಗಮನಹರಿಸಿ ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡಿಕೊಂಡು ಯಾವುದೇ ದುಶ್ಚಟಗಳಿಗೆ ಅವಕಾಶ ನೀಡಬಾರದು.

    ಕಾರ್ಯಕ್ರಮದ ಅಂಗವಾಗಿ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ನಶಾಮುಕ್ತ ಭಾರತ್ ಪ್ರತಿಜ್ಞೆ ಬೋಧಿಸಿದರು. ವಿದ್ಯಾರ್ಥಿಗಳು ಯಾವುದೇ ಮಾದಕ ವಸ್ತುಗಳನ್ನು ಸೇವಿಸದಿರುವುದಾಗಿ ಹಾಗೂ ಸಮಾಜದಲ್ಲಿಯೂ ವ್ಯಸನಮುಕ್ತ ಬದುಕಿನ ಬಗ್ಗೆ ಅರಿವು ಮೂಡಿಸುವುದಾಗಿ ಪ್ರತಿಜ್ಞೆ ಸ್ವೀಕರಿಸಿದರು.

    ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲೆ ಝಾನ್ಸಿ ಪಿ.ಎನ್., ಕಾರ್ಯಕ್ರಮ ಸಂಯೋಜಕ ಟಿ.ಎ.ಎನ್. ಖಂಡಿಗೆ, ಇದ್ದರು. ಜೇಸನ್ ಕ್ಯಾಸ್ಟಿಲಿನೋ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ ಆರ್.ಎನ್. ಶೆಟ್ಟಿ ಪ.ಪೂ ಕಾಲೇಜಿನಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ

    24/06/2026

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದಿಂದ ಆಳ್ವಾಸ್ ಪ್ರಕೃತಿ ಚಿಕಿತ್ಸಾ ಕಾಲೇಜಿಗೆ ಎರಡು ಚಿನ್ನದ ಪದಕ

    24/06/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿನಿ ಶ್ರಾವ್ಯ ಶೆಟ್ಟಿ ಸಿ.ಎ. ಫೈನಲ್‌ನಲ್ಲಿ ತೇರ್ಗಡೆ

    22/06/2026
    Leave A Reply Cancel Reply

    18 − 3 =

    Call us

    Click Here

    Call us

    Call us

    Call us
    Highest Viewed Recently
    • ಜುಲೈ 5ರಂದು ಬೆಂಗಳೂರು ಶ್ರೀ ರಾಮಕ್ಷತ್ರಿಯ ಯುವ ಸೇವಾ ಸಂಘದ 22ನೇ ವರ್ಷದ ಸಂಭ್ರಮಾಚರಣೆ
    • ನಾಯಕತ್ವದ ಜವಾಬ್ದಾರಿ ಅರಿಯಲು ಶಾಲಾ ವಿದ್ಯಾರ್ಥಿ ಸಂಘ ಅಡಿಗಲ್ಲು: ಮಹೇಶ್ ಕೆ.
    • ಮಾದಕ ವ್ಯಸನದಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ರವಿಪ್ರಸಾದ ಹೆಗ್ಡೆ
    • ಜಿಲ್ಲೆಯ 0-5 ವರ್ಷದೊಳಗಿನ ಪ್ರತಿಯೊಬ್ಬ ಮಕ್ಕಳಿಗೂ ಪಲ್ಸ್ ಪೋಲಿಯೋ ಲಸಿಕೆ ನೀಡಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ
    • ರಂಗವಲ್ಲಿಯ ಮೂಲಕ ಕಾರಂತರನ್ನು ಪರಿಚಯಿಸುವ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.