ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ನಾಗೂರು ಕೊಡೇರಿಯ ಕುಳ್ಳಿ ಗೋವಿಂದ ಖಾರ್ವಿ (72 ವರ್ಷ) ಅವರು ಗುರುವಾರ ಬೆಳಗಿನ ಜಾವ ನಿಧನರಾದರು.
ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಸೇವೆ ಮತ್ತು ಜನಪರ ಕಾಳಜಿಯ ಮೂಲಕ ಜನಮನದಲ್ಲಿ ವಿಶೇಷ ಸ್ಥಾನ ಪಡೆದಿದ್ದ ಅವರು, ತಮ್ಮ ಸರಳತೆ ಮತ್ತು ಸೇವಾಭಾವದಿಂದ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.











