Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಳ್ಳಿಹೊಳೆಯಲ್ಲಿ ನಕ್ಸಲ್‌ ಬೆದರಿಕೆ ಪ್ರಕರಣ: ಶಂಕಿತ ನಕ್ಸಲ್ ಪದ್ಮನಾಭ ನೀಲುಗುಳಿ ದೋಷಮುಕ್ತ
    ಊರ್ಮನೆ ಸಮಾಚಾರ

    ಹಳ್ಳಿಹೊಳೆಯಲ್ಲಿ ನಕ್ಸಲ್‌ ಬೆದರಿಕೆ ಪ್ರಕರಣ: ಶಂಕಿತ ನಕ್ಸಲ್ ಪದ್ಮನಾಭ ನೀಲುಗುಳಿ ದೋಷಮುಕ್ತ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಕಾರ್ಮಿಕರಿಗೆ ಕೂಲಿ ನೀಡುವ ವಿಚಾರದಲ್ಲಿ ಮಾತನಾಡಿ, ಪೊಲೀಸರಿಗೆ ಮಾಹಿತಿ ನೀಡದಂತೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ನಕ್ಸಲ್ ಪದ್ಮನಾಭ ನೀಲುಗುಳಿಯನ್ನು ದೋಷಮುಕ್ತ ಗೊಳಿಸಿ ಕುಂದಾಪುರದಲ್ಲಿರುವ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ಆದೇಶ ನೀಡಿದ್ದಾರೆ.

    Click Here

    Call us

    Click Here

    2005ರಲ್ಲಿ ಕುಂದಾಪುರ ತಾಲೂಕಿನ ಹಳ್ಳಿಹೊಳೆಯ ಕೋಟುಗುಳಿ ಎಂಬಲ್ಲಿ ಗುರುದತ್ತ ಚಾತ್ರ ಎನ್ನುವವರ ಮನೆ ಸಮೀಪ ಓರ್ವ ಮಹಿಳೆ ಹಾಗೂ ಏಳು ಮಂದಿ ಪುರುಷರಿದ್ದ ತಂಡ ಬಂದೂಕು ಸಹಿತ ಆಗಮಿಸಿ ದೂರುದಾರ ಗುರುದತ್ತ ಅವರ ಬಳಿ ಕೆಲಸಗಾರರಿಗೆ ಸರಿಯಾದ ಸಂಬಳ ನೀಡದಿರುವ ಬಗ್ಗೆ ವಿಚಾರಿಸಿದ್ದರು.

    ಇದಾದ ಬಳಿಕ ಪೊಲೀಸರಿಗೆ ಯಾವುದೇ ಮಾಹಿತಿ ನೀಡದಂತೆ ಜೀವ ಬೆದರಿಕೆ ಹಾಕಿ ಈ ತಂಡ ಸ್ಥಳದಿಂದ ತೆರ ಳಿತ್ತು. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಗುರುದತ್ತ ಚಾತ್ರ ಪ್ರಕರಣ ದಾಖಲಿಸಿದ್ದರು. ಇದರಲ್ಲಿ ಪದ್ಮನಾಭ ನೀಲುಗುಳಿ ಸಹಿತ ಏಳು ಮಂದಿ ಶಂಕಿತ ನಕ್ಸಲರ ಹೆಸರನ್ನು ಉಲ್ಲೇಖಿಸಲಾಗಿದ್ದು ಅವರೆಲ್ಲಾ ಕಾಡು ಪ್ರದೇಶದಲ್ಲಿ ನಿಷೇಧಿತ ಸಂಘಟನೆಯೊಂದಿಗೆ ಸೇರುಕೊಂಡು ಸರಕಾರದ ವಿರುದ್ಧ ಕಾನೂನು ಬಾಹಿರ ಚಟುವಟಿಕೆ ಯಲ್ಲಿ ತೊಡಗಿಸಿಕೊಂಡವರು ಎಂದು ಕಾನೂನು ಬಾಹಿರ ಚಟುವಟಿಕೆ ತಡೆ ಕಾಯಿದೆ ಮತ್ತು ಕಲಂ.3 ಮತ್ತು 25 ಭಾರತೀಯ ಶಸ್ತ್ರಾಸ್ತ್ರ ಕಾಯಿದೆಯಂತೆ ಶಿಕ್ಷಾರ್ಹ ಅಪರಾಧದಡಿ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು. ಅಂದಿನ ಕುಂದಾಪುರ ಡಿವೈಎಸ್ಪಿ ವಿಶ್ವನಾಥ್ ಅವರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

    ಹಳ್ಳಿಹೊಳೆಯ ಕೋಟುಗುಳಿ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ಈವರೆಗೆ ವಿಚಾರಣೆ ನಡೆಯುತ್ತಿದ್ದು ಆರೋಪಿ ವಿರುದ್ಧ ಮಾಡಲಾದ ದೋಷಾರೋಪಣೆಗಳು ರುಜುವಾತಾಗದ ಹಿನ್ನೆಲೆಯಲ್ಲಿ ಈ ಪ್ರಕರಣದಲ್ಲಿ ಪದ್ಮನಾಭ ನಿರ್ದೋಷಿಯೆಂದು ತೀರ್ಪು ನೀಡಲಾಗಿದೆ.

    2018ರಲ್ಲಿ ನೀಲಗುಳಿ ಪದ್ಮನಾಭ ಅವರನ್ನು ಪೊಲೀಸರು ಬಂಧಿಸಿದ್ದು ಬಳಿಕ ಜಾಮಿನು ಪಡೆದು ಊರಿನಲ್ಲಿ ಸಂಸಾರದ ಜೊತೆಯಿರುವ ಇವರ ಮೇಲೆ ಇನ್ನೂ ಮೂರು ಕೇಸುಗಳು ವಿಚಾರಣಾ ಹಂತದಲ್ಲಿವೆ. ಮಾಜಿ ನಕ್ಸಲ್ ನೀಲಗುಳಿ ಪದ್ಮನಾಭ್ ಪರವಾಗಿ ನ್ಯಾಯವಾದಿ ಬಿ. ಪ್ರಕಾಶ್ಚಂದ್ರ ಹೆಗ್ಡೆ ವಾದ ಮಂಡಿಸಿದ್ದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಗೋವಿಂದ ಖಾರ್ವಿ ನಿಧನ

    25/06/2026

    ಐರೋಡಿ ಬಿಜೆಪಿ ಶಕ್ತಿ ಕೇಂದ್ರಗಳ ಸಭೆ

    25/06/2026

    ಪಾಂಡೇಶ್ವರದಲ್ಲಿ ಬಿಜೆಪಿ ಶಕ್ತಿಕೇಂದ್ರ ಪುನರ್‌ರಚನೆ: ಬೂತ್ ಮಟ್ಟದಿಂದಲೇ ಪಕ್ಷ ಕಟ್ಟಲು ನಾಯಕರ ಕರೆ

    25/06/2026
    Leave A Reply Cancel Reply

    two + nineteen =

    Call us

    Click Here

    Call us

    Call us

    Call us
    Highest Viewed Recently
    • ಹಳ್ಳಿಹೊಳೆಯಲ್ಲಿ ನಕ್ಸಲ್‌ ಬೆದರಿಕೆ ಪ್ರಕರಣ: ಶಂಕಿತ ನಕ್ಸಲ್ ಪದ್ಮನಾಭ ನೀಲುಗುಳಿ ದೋಷಮುಕ್ತ
    • ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಗೋವಿಂದ ಖಾರ್ವಿ ನಿಧನ
    • ಐರೋಡಿ ಬಿಜೆಪಿ ಶಕ್ತಿ ಕೇಂದ್ರಗಳ ಸಭೆ
    • ಪಾಂಡೇಶ್ವರದಲ್ಲಿ ಬಿಜೆಪಿ ಶಕ್ತಿಕೇಂದ್ರ ಪುನರ್‌ರಚನೆ: ಬೂತ್ ಮಟ್ಟದಿಂದಲೇ ಪಕ್ಷ ಕಟ್ಟಲು ನಾಯಕರ ಕರೆ
    • ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ನಿವೃತ್ತ ಉಪನ್ಯಾಸಕರಿಗೆ ಬೀಳ್ಕೊಡುಗೆ ಸಮಾರಂಭ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.