ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಕುಂದಾಪುರ ವಿಧಾನಸಭಾ ಕ್ಷೇತ್ರದ ಕೋಟ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಕೋಟ ಹಾಗೂ ಮಣೂರು ಶಕ್ತಿ ಕೇಂದ್ರದ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿ ಮತ್ತು ಬೂತ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯ ಮಣೂರು ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಜರಗಿತು.
ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಉಡುಪಿ ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಸಮ್ಮುಖದಲ್ಲಿ ಆಯ್ಕೆ ಪ್ರಕ್ರಿಯೆಗಳು ನಡೆದವು.

ನಂತರ ಸಂಸದರು ಮಾತನಾಡಿ, ಮೋದಿ ಸರ್ಕಾರದ ಯೋಜನೆ ಬಡವರ ಮನೆಗೆ ತಲುಪಬೇಕು. ಅದಕ್ಕೆ ಬೂತ್ ಸಮಿತಿ ಪ್ರತಿದಿನ ಕೆಲಸ ಮಾಡಬೇಕು ಎಂದು ಪ್ರಾಸ್ತಾವಿಕ ಮಾತುಗಳಾಡಿದರು.
ಕ್ಷೇತ್ರಾಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕೋಟದಲ್ಲಿ ಸಂಘಟನೆ ಇನ್ನಷ್ಟು ಚುರುಕಾಗಬೇಕು. ಪ್ರತಿ ಮತಗಟ್ಟೆಗೆ ಒಬ್ಬ ಪ್ರಮುಖ, ಪ್ರತಿ ಪೇಜ್‌ಗೆ ಒಬ್ಬ ಕಾರ್ಯಕರ್ತ ಇದೇ ನಮ್ಮ ಗುರಿ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಶಂಕರ ಅಂಕದಕಟ್ಟೆ, ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ ಎಸ್, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು, ಕೋಟ ನಿಕಟ ಪೂರ್ವ ಶಕ್ತಿ ಕೇಂದ್ರದ ಅಧ್ಯಕ್ಷ ಅಜಿತ್ ದೇವಾಡಿಗ, ಹಾಗೂ ಮಣೂರು ಶಕ್ತಿ ಕೇಂದ್ರದ ಅಧ್ಯಕ್ಷ ಮಹೇಶ್ ಹೊಳ್ಳ ಮತ್ತು ಮಂಡಲ ಕಾರ್ಯದರ್ಶಿ ರಾಜೇಶ್ ಶೆಟ್ಟಿ, ಹಾಗೂ ಕೋಟ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರು ಪಕ್ಷದ ಪ್ರಮುಖರು ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನ ಕೋಟ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಸುರೇಶ್ ಕುಂದರ್ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಅಜಿತ್ ಶೆಟ್ಟಿ ಕೊತ್ತಾಡಿ ಧನ್ಯವಾದ ಹೇಳಿದರು.

















