ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಸೈಂಟ್ ಥಾಮಸ್ ಶಾಲೆಯಲ್ಲಿ 2026–27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಚಿವ ಸಂಪುಟದ ಪದಗ್ರಹಣ ಸಮಾರಂಭವು ಶಾಲಾ ಸಭಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಬೈಂದೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅಜಯ ಭಂಡಾರ್ಕರ್ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ , ವಿದ್ಯಾರ್ಥಿಗಳಿಗೆ ನಾಯಕತ್ವ, ಶಿಸ್ತು ಹಾಗೂ ಸೇವಾ ಮನೋಭಾವದ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾದರ್ ಫಿಲಿಪ್ ನೆಲ್ಲಿವಿಳಾ ವಹಿಸಿದ್ದರು. ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ವಿದ್ಯಾರ್ಥಿಗಳು ಜವಾಬ್ದಾರಿಯುತ ನಾಯಕರಾಗಿ ಬೆಳೆಯಬೇಕೆಂದು ಕರೆ ನೀಡಿದರು. ಬಳಿಕ ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ಸಚಿವ ಸಂಪುಟದ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಲಾಯಿತು.
ಈ ಸಂದರ್ಭದಲ್ಲಿ ಉಪಪ್ರಾಂಶುಪಾಲೆ ಸಿಸ್ಟರ್ ಕಾರ್ಮೆಲ್ ಅವರು ವಿದ್ಯಾರ್ಥಿಗಳನ್ನು ವೇದಿಕೆಗೆ ಆಹ್ವಾನಿಸುವ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ. ಶಾಲಾ ನಾಯಕನಾಗಿ ಅಮನ್ ಹಾಗೂ ಶಾಲಾ ನಾಯಕಿಯಾಗಿ ವೀಕ್ಷಾ , ಹಾಗೂ ವಿವಿಧ ಕ್ಲಬ್ ನ ನಾಯಕರುಗಳು ಅಧಿಕಾರ ಸ್ವೀಕರಿಸಿದರು. ನೂತನ ನಾಯಕರು ಶಾಲೆಯ ಗೌರವವನ್ನು ಹೆಚ್ಚಿಸಲು ಹಾಗೂ ವಿದ್ಯಾರ್ಥಿಗಳ ಹಿತಕ್ಕಾಗಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದಾಗಿ ಪ್ರತಿಜ್ಞೆ ಮಾಡಿದರು. ಸಚಿವ ಸಂಪುಟದ ಸದಸ್ಯರಿಗೆ ಬ್ಯಾಡ್ಜ್ ಹಾಗೂ ಅಧಿಕಾರದ ಚಿಹ್ನೆಗಳನ್ನು ಅತಿಥಿಗಳು ಪ್ರದಾನಿಸಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲರು ಉಪಪ್ರಾಂಶುಪಲರು, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಪಾಲಕರು, ಉಪಸ್ಥಿತರಿದ್ದು ನೂತನ ನಾಯಕತ್ವ ತಂಡಕ್ಕೆ ಶುಭ ಹಾರೈಸಿದರು. ಸಮಾರಂಭವು ಶಿಸ್ತುಬದ್ಧವಾಗಿ ಹಾಗೂ ಯಶಸ್ವಿಯಾಗಿ ನೆರವೇರಿತು. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.
ಕಾರ್ಯಕ್ರಮದ ನಿರೂಪಣೆಯನ್ನು ವಿದ್ಯಾರ್ಥಿಗಳಾದ ಶ್ಯಾಮಲಾ, ತೇಜಸ್ವಿನಿ ಪ್ರತೀಕ್ಷಾ, ಕ್ಷಿತಿಜ ವಂದಿಸಿದರು.

















