ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ತೆಕ್ಕೆಟ್ಟೆಯ ವಿಶ್ವವಿನಾಯಕ ಪಿಯು ಕಾಲೇಜಿನಲ್ಲಿ ಶನಿವಾರದಂದು ವಿದ್ಯಾರ್ಥಿಗಳ ಪ್ರತಿಭಾ ದಿನಾಚಾರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲೆಯ ಮ್ಯಾನೇಜಿಂಗ್ ಡೈರೆಕ್ಟರ್ ಎಂ. ಪ್ರಭಾಕರ್ ಶೆಟ್ಟಿ ಅವರು ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಹೇಗೆ ತೋರ್ಪಡಿಸಿಕೊಳ್ಳಬೇಕು ಮತ್ತು ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಿ ಬೆಳೆಸಿಕೊಳ್ಳುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಗಾಯನ, ನೃತ್ಯ, ಮಿಮಿಕ್ರಿ ಹಾಗೂ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿದರು. ವಿದ್ಯಾರ್ಥಿಗಳಲ್ಲಿರುವ ಸೃಜನಶೀಲತೆ ಆತ್ಮವಿಶ್ವಾಸ ಮತ್ತು ನಾಯಕತ್ವ ಗುಣಗಳನ್ನು ಬೆಳೆಸಲು ಸಹಕಾರಿಯಾಯಿತು.
ಕಾರ್ಯಕ್ರಮದಲ್ಲಿ ಮ್ಯಾನೇಜಿಂಗ್ ಟ್ರಸ್ಟಿಗಳು, ಕಾಲೇಜು ಉಪನ್ಯಾಸಕರು, ಕಾಲೇಜು ಸಿಬ್ಬಂದಿ ವರ್ಗದವರು, ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಆಯಿಷಾ ಸೈಯದ್ ಕಾರ್ಯಕ್ರಮ ನಿರೂಪಿಸಿ, ಸಾಕೇತ್ ಸ್ವಾಗತಿಸಿ ಹಾಗೂ ಆಯಿಷಾ ನುಹಾ ವಂದಿಸಿದರು.

















