ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಜೀವನದ ಬಹುಮುಖ್ಯವಾದ ಘಟ್ಟ. ಈ ಸಂದರ್ಭದಲ್ಲಿ ತೆಗೆದುಕೊಳ್ಳುವ ನಿರ್ಧಾರವು ಜೀವನದ ಮುಂದಿನ ಹಾದಿಯನ್ನು ನಿರ್ಧರಿಸುತ್ತದೆ. ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಬೇಕಾದರೂ ಕಷ್ಟಪಟ್ಟು ತೆಗೆದುಕೊಳ್ಳದೆ ಇಷ್ಟಪಟ್ಟು ತೆಗೆದುಕೊಳ್ಳಬೇಕು. ಇಷ್ಟವಾದ ಕ್ಷೇತ್ರವನ್ನು, ಕೋರ್ಸ್‌ನ್ನು ಆಯ್ಕೆ ಮಾಡಿಕೊಂಡರೆ ಅದರಲ್ಲಿ ಯಶಸ್ಸು ಸಿಗುತ್ತದೆ. ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡರೆ ಮುಂದಿನ ಜೀವನದಲ್ಲಿ ಅಭಿವೃದ್ಧಿ ಹೊಂದಲು ಸಾಧ್ಯವಿದೆ. ಮಾಡಿದ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಕ್ಕೆ ಸಿಗುತ್ತದೆ ಎಂದು ಗಂಗೊಳ್ಳಿಯ ಉದ್ಯಮಿ ಜಿ. ವೆಂಕಟೇಶ ಶೆಣೈ ಹೇಳಿದರು.

ಅವರು ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಗಂಗೊಳ್ಳಿ ಇದರ ವತಿಯಿಂದ ಗಂಗೊಳ್ಳಿಯ ಎಸ್.ವಿ. ಪದವಿಪೂರ್ವ ಕಾಲೇಜು, ಎಸ್.ವಿ. ಕನ್ನಡ ಮಾಧ್ಯಮ ಪ್ರೌಢಶಾಲೆ, ಎಸ್.ವಿ. ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಇಲ್ಲಿನ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಕಾಲೇಜಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಒಳಾಂಗಣದಲ್ಲಿ ಶನಿವಾರ ಜರಗಿದ ಸಮ್ಮಾನ ಸಮಾರಂಭದಲ್ಲಿ ಅತಿಥಿಯಾಗಿ ಅವರು ಮಾತನಾಡಿದರು.
ಎಸ್.ವಿ. ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ರ‍್ಯಾಂಕ್ ಪಡೆಯುವ ಮತ್ತು ಸಾಧನೆ ಮಾಡುವ ಮೂಲಕ ಸರಸ್ವತಿ ವಿದ್ಯಾಸಂಸ್ಥೆಯನ್ನು ರಾಜ್ಯ ಮಟ್ಟದಲ್ಲಿ ಗುರುತಿಸಿವಂತೆ ಮಾಡಿದ್ದಾರೆ. ಸಾಧನೆ ಮಾಡಲು ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆ ಅತ್ಯುತ್ತಮ ಎಂದು ಅವರು ಶ್ಲಾಘಿಸಿದರು.
ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ರ‍್ಯಾಂಕ್ ಪಡೆದ ಗೌತಮಿ ಜಿ. ನಾಯಕ್, ಧನ್ಯ ಪೂಜಾರಿ, ಸಿಂಧು ಖಾರ್ವಿ, ನವ್ಯಶ್ರೀ ಕೆ., ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರ‍್ಯಾಂಕ್ ಪಡೆದ ಶ್ರೀನಿವಾಸ ವಿ.ಪೈ, ಅತ್ಯುತ್ತಮ ಸಾಧನೆ ಮಾಡಿದ ಶ್ರೇಜಸ್ ಪೂಜಾರಿ ಅವರನ್ನು ಸಮ್ಮಾನಿಸಲಾಯಿತು. ದ್ವಿ
ತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತೀಕ ಕೊಠಾರಿ ಮತ್ತು ನವ್ಯಶ್ರೀ ಕೆ. ಅವರಿಗೆ ಕುಂದಾಪುರದ ಡಾ. ಉಮೇಶ ಪುತ್ರನ್ ಅವರು ನೀಡಿದ ತಲಾ 25 ಸಾವಿರ ರೂ.ಗಳನ್ನು ಮತ್ತು ವಾಣಿಜ್ಯ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಗೌತಮಿ ಜಿ.ನಾಯಕ್, ಸಿಂಚನ, ಮಾನ್ಯ ಖಾರ್ವಿ ಅವರಿಗೆ ನಗರ ಕೃಷ್ಣಾನಂದ ನಾಯಕ್ ಅವರು ನೀಡಿದ ತಲಾ ೫ ಸಾವಿರ ರೂ.ಗಳನ್ನು ನೀಡಿ ಗೌರವಿಸಲಾಯಿತು. ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಮತ್ತು ವಿಷಯವಾರು ಶೇ.100 ಅಂಕ ಪಡೆದ ವಿಷಯ ಶಿಕ್ಷಕರನ್ನು ಗೌರವಿಸಲಾಯಿತು.
ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಕಾರ್ಯದರ್ಶಿ ಎಚ್. ಗಣೇಶ ಕಾಮತ್, ಖಜಾಂಚಿ ಎನ್. ಅಶ್ವಿನ್ ನಾಯಕ್ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಸ್ವಾಗತಿಸಿದರು. ಸಂಚಾಲಕ ಎನ್. ಸದಾಶಿವ ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಗೋಪಾಲ ದೇವಾಡಿಗ ಅತಿಥಿಗಳನ್ನು ಗೌರವಿಸಿದರು. ಉಪನ್ಯಾಸಕರಾದ ಪವಿತ್ರಾ ಮತ್ತು ಪ್ರಫುಲ್ಲಾ ಹಾಗೂ ಶಿಕ್ಷಕರಾದ ಸುಜಾತಾ ಮತ್ತು ಆದಿನಾಥ ಕಿಣಿ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಉಪನ್ಯಾಸಕ ನರೇಂದ್ರ ಎಸ್.ಗಂಗೊಳ್ಳಿ ಕಾರ್ಯಕ್ರಮ ನಿರ್ವಹಿಸಿ, ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ರಾಘವೇಂದ್ರ ಶೇರುಗಾರ್ ವಂದಿಸಿದರು.

















