Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಂಚವರ್ಣದ 55ನೇ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಪಂಚವರ್ಣದ 55ನೇ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಪಂಚವರ್ಣ ಸಂಘಟನೆಯಿಂದ ರೈತ ಪರಿಸರಸ್ನೇಹಿ ಕಾರ್ಯಕ್ರಮಗಳು ಜನಮನ್ನಣೆ ಗಳಿಸಿದೆ ಎಂದು ಕೋಟ ಸಹಕಾರಿ ವ್ಯವಸಾಯಕ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ ಅಭಿಪ್ರಾಯಪಟ್ಟರು.

    Click Here

    Call us

    Click Here

    ಅವರು ಶುಕ್ರವಾರ ಕೋಟದ ಪಂಚವರ್ಣ ಯುವಕ‌ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತಧ್ವನಿ ಸಂಘ ಕೋಟ,ಗೆಳೆಯರ ಬಳಗ ಕಾರ್ಕಡ, ಸ್ನೇಹಕೂಟ ಮಣೂರು, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಇವರ ಸಹಯೋಗದೊಂದಿಗೆ 55ನೇ ರೈತರೆಡೆಗೆ ನಮ್ಮ ನಡಿಗೆ ಸರಣಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 

    ಇಡೀ ದೇಶಕ್ಕೆ ಮಾದರಿ ಕಾರ್ಯಕ್ರಮಗಳನ್ನು ಈ ಪಂಚವರ್ಣ ಸಂಘಟನೆ ನೀಡುತ್ತಿದೆ.ಇಂತಹ ಸಂಘಟನೆ ರೈತಪರ ಅಥವಾ ತಳಮಟ್ಟದ ರೈತಸಮುದಾಯವನ್ನು ಗುರುತಿ ಗೌರವಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದರಲ್ಲದೆ ಆನಂದ್ ಪೂಜಾರಿ ಕೃಷಿ ಕ್ಷೇತ್ರಕ್ಕೆ ಹೊಸ ಆವಿಷ್ಕಾರವನ್ನು ಧಾರೆ ಎರೆದಿದ್ದಾರೆ ಎಂದರು.

    ಇದೇ ವೇಳೆ  55ನೇ ರೈತ ಪುರಸ್ಕಾರವನ್ನು ಕೋಟತಟ್ಟು ನಿವಾಸಿ ಗುಳ್ಳಾಡಿ ಆನಂದ್ ಪೂಜಾರಿ ಇವರನ್ನು ಕೃಷಿ ಪರಿಕರವನ್ನಿತ್ತು ಗೌರವಿಸಲಾಯಿತು.

    ಪ್ರಾರಂಭದಲ್ಲಿ ಪರಿಸರಸ್ನೇಹಿ ಹಸಿರು ಗಿಡವನ್ನು ನೆಟ್ಟು,ಗೋ ಪೂಜೆ ನೆರವೆರಿಸಿ ಕಾರ್ಯಕ್ರಮಕ್ಕೆ ಕೋಟತಟ್ಟು ಗ್ರಾಮಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಸತೀಶ್ ಕುಂದರ್ ಚಾಲನೆ ನೀಡಿದರು.

    Click here

    Click here

    Click here

    Click Here

    Call us

    Call us

    ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ ವಹಿಸಿದ್ದರು. ರೈತ ಪುರಸ್ಕಾರವನ್ನು ಸಕಡ್ ಫೌಂಡೇಶನ್ ಮುಖ್ಯಸ್ಥ ಕೋಟ ಶ್ರೀಕಾಂತ್ ಶೆಣೈ ನೆರವೆರಿಸಿದರು.

    ಮುಖ್ಯ ಅಭ್ಯಾಗತರಾಗಿ ಕೋಟ ಸಹಕಾರಿ ವ್ಯವಸಾಯಕ ಸಂಘದ ನಿರ್ದೇಶಕ ರಂಜಿತ್ ಕುಮಾರ್, ಸಾಮಾಜಿಕ ಕಾರ್ಯಕರ್ತ ದಿನೇಶ್ ಗಾಣಿಗ,ಗೆ ಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.‌ತಾರಾನಾಥ ಹೊಳ್ಳ, ರೈತಧ್ವನಿ ಸಂಘದ ಅಧ್ಯಕ್ಷ ಎಂ. ಜಯರಾಮ ಶೆಟ್ಟಿ, ಪಂಚವರ್ಣ ಸಂಘಟನೆಯ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಉಪಸ್ಥಿತರಿದ್ದರು.

    ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಂಘದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್ ಸನ್ಮಾನಪತ್ರವಾಚಿಸಿದರು.ಕಾರ್ಯಕ್ರಮವನ್ನು ಸದಸ್ಯರಾದ ಪ್ರಭಾಕರ್ ಮಣೂರು ನಿರೂಪಿಸಿದರು.ರವೀಂದ್ರ ಕೋಟ ವಂದಿಸಿ ಸಂಯೋಜಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಫ್ರೆಶರ್ಸ್ ಡೇ ಹಾಗೂ ವಿದ್ಯಾರ್ಥಿ ಸಂಸತ್ ಉದ್ಘಾಟನೆ

    27/06/2026

    ಆರ್ಥಿಕ ಭದ್ರತೆ ಆತ್ಮವಿಶ್ವಾಸದ ಕೊಂಡಿಯಾಗಲಿದೆ: ದಯಾನಂದ ಕೋಟ್ಯಾನ್

    27/06/2026

    ನಾವುಂದ: ದೈಹಿಕ ಶಿಕ್ಷಣ ಶಿಕ್ಷಕ ಜೀವನ್ ಕುಮಾರ್ ಶೆಟ್ಟಿ ಅವರಿಗೆ ಬೀಳ್ಕೊಡುಗೆ

    27/06/2026
    Leave A Reply Cancel Reply

    twelve − eight =

    Call us

    Click Here

    Call us

    Call us

    Call us
    Highest Viewed Recently
    • ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಫ್ರೆಶರ್ಸ್ ಡೇ ಹಾಗೂ ವಿದ್ಯಾರ್ಥಿ ಸಂಸತ್ ಉದ್ಘಾಟನೆ
    • ಪಂಚವರ್ಣದ 55ನೇ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ
    • ಆರ್ಥಿಕ ಭದ್ರತೆ ಆತ್ಮವಿಶ್ವಾಸದ ಕೊಂಡಿಯಾಗಲಿದೆ: ದಯಾನಂದ ಕೋಟ್ಯಾನ್
    • ನಾವುಂದ: ದೈಹಿಕ ಶಿಕ್ಷಣ ಶಿಕ್ಷಕ ಜೀವನ್ ಕುಮಾರ್ ಶೆಟ್ಟಿ ಅವರಿಗೆ ಬೀಳ್ಕೊಡುಗೆ
    • ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಜೀವನದ ಬಹುಮುಖ್ಯವಾದ ಘಟ್ಟ: ಜಿ. ವೆಂಕಟೇಶ ಶೆಣೈ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.