ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ 2025-26ನೇ ಸಾಲಿನಲ್ಲಿ ನಡೆದ ಹತ್ತನೇ ತರಗತಿ ಪರೀಕ್ಷೆಯಲ್ಲಿ ಕುಂದಾಪುರದ ವಿ.ಕೆ.ಆರ್ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಪ್ರಾಪ್ತಿ ಮಡಪ್ಪಾಡಿ ಅವರು 625ರಲ್ಲಿ 617 (ಶೇ.98.72) ಅಂಕಗಳಿಸಿ ರಾಜ್ಯಕ್ಕೆ 9ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ.
ಬಹುಮುಖ ಪ್ರತಿಭೆಯಾಗಿರುವ ಪ್ರಾಪ್ತಿ ಮಡಪ್ಪಾಡಿ ಅವರು ಭರತನಾಟ್ಯದಲ್ಲಿ ಸೀನಿಯರ್ ಪದವೀಧರೆಯಾಗಿದ್ದಾರೆ. ಅಂತರ್ರಾಷ್ಟ್ರೀಯ ಮಟ್ಟದ ಭರತನಾಟ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಪಡೆದುಕೊಂಡಿದ್ದಾರೆ. ಕರ್ನಾಟಕ ಸಂಗೀತವನ್ನು ಅಭ್ಯಾಸ ಮಾಡುತ್ತಿದ್ದಾರೆ.
ಮೂಲತಃ ಅವರು ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ವಾಲ್ತಾಜೆ ನಿವಾಸಿ, ಪ್ರಸ್ತುತ ಕುಂದಾಪುರದ ಹಿರಿಯ ಪತ್ರಕರ್ತರಾಗಿರುವ ಜಯಶೇಖರ್ ಮಡಪ್ಪಾಡಿ ಹಾಗೂ ಮಧುಸ್ಮಿತಾ ಜಯಶೇಖರ್ ಅವರ ಹಿರಿಯ ಪುತ್ರಿ.
ಪ್ರಸ್ತುತ ಕುಂದಾಪುರ ತಾಲೂಕಿನ ಸಿದ್ಧಾಪುರದಲ್ಲಿರುವ ಪ್ರಖ್ಯಾತ ಶಿಕ್ಷಣ ಸಂಸ್ಥೆಯಾಗಿರುವ ಜ್ಞಾನಸರಸ್ವತಿ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ (ಪಿಸಿಎಂಬಿ) ವಿಭಾಗದ ವಿದ್ಯಾರ್ಥಿನಿಯಾಗಿದ್ದಾರೆ.

















