Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮುಂದಿನ ಒಂದು ವಾರ ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ
    ಊರ್ಮನೆ ಸಮಾಚಾರ

    ಮುಂದಿನ ಒಂದು ವಾರ ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ

    Updated:30/06/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಭಾರತೀಯ ಹವಾಮಾನ ಇಲಾಖೆ / ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 1 ವಾರ ಅಂದರೆ ಜೂನ್ 30 ರಿಂದ ಜುಲೈ 6ರ ವರೆಗೆ ಆರೆಂಜ್ ಅಲರ್ಟ್ ಮುನ್ಸೂಚನೆ ನೀಡಿದ್ದು, ಜಿಲ್ಲೆಯಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಯೆಂದು ಸೂಚಿಸಿರುತ್ತಾರೆ. ಈ ಹಿನ್ನಲೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಿದ್ದಾರೆ.

    Click Here

    Call us

    Click Here

    ಸಾರ್ವಜನಿಕರು, ಮಕ್ಕಳು ಹಾಗೂ ಕಾರ್ಮಿಕರು ಮಳೆ, ಗಾಳಿ, ಸಿಡಿಲು ಬೀಳುವ ಸಂದರ್ಭದಲ್ಲಿ ಹೊರಗೆ ತಿರುಗಾಡದೆ, ಸೂಕ್ತ ಕಟ್ಟಡದಲ್ಲಿ ಆಶ್ರಯ ಪಡೆಯಬೇಕು. ಕೃಷಿಕರು ಮಳೆ/ಸಿಡಿಲಿನಂತಹ ಸಂದರ್ಭದಲ್ಲಿ ಹೊರಗಿನ ಕೃಷಿ ಚಟುವಟಿಕೆಯಿಂದ ದೂರವಿರಬೇಕು ಮತ್ತು ಸಾರ್ವಜನಿಕರು, ಪ್ರವಾಸಿಗರು ಹಾಗೂ ಮೀನುಗಾರರು ನದಿ/ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯಬಾರದು.

    ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ಮರ, ವಿದ್ಯುತ್ ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರಬೇಕು. ದುರ್ಬಲವಾದ / ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ / ಮರಗಳ ಕೆಳಗೆ ನಿಲ್ಲಬಾರದು. ಕಟ್ಟಡಗಳ ಮೇಲೆ ಅಪಾಯಕಾರಿ ಗೆಲ್ಲು/ರೆಂಬೆ-ಕೊಂಬೆಗಳಿದ್ದಲ್ಲಿ ಮೊದಲೇ ಕತ್ತರಿಸಿ ವಾಸಿಸುವ ಕಟ್ಟಡಗಳನ್ನು ರಕ್ಷಿಸಿಕೊಳ್ಳಬೇಕು.

    ಹೆಚ್ಚು ಮಳೆಯಾಗುತ್ತಿರುವುದರಿಂದ ಕೆಲವು ಪ್ರದೇಶಗಳಲ್ಲಿ ಭೂಕುಸಿತವಾಗುವ ಸಂಭವ ಹೆಚ್ಚಾಗಿರುತ್ತದೆ ಹಾಗಾಗಿ ಇಂತಹ ಪ್ರದೇಶದಲ್ಲಿ ವಾಸಿಸುವ ಸಾರ್ವಜನಿಕರು ತಹಶೀಲ್ದಾರರ ಕಛೇರಿ ಅಥವಾ ಗ್ರಾಮ ಪಂಚಾಯಿತಿ ಸಿಬ್ಬಂದಿಗಳನ್ನು ಸಂಪರ್ಕಿಸಿ ಹತ್ತಿರದ ಕಾಳಜಿ ಕೇಂದ್ರದಲ್ಲಿ ಸಾಕಷ್ಟು ಮುಂಚಿತವಾಗಿಯ ಉಳಿಯಬಹುದು.

    ಮುಂದಿನ 7 ದಿನಗಳಲ್ಲಿ ಹೆಚ್ಚು ಗಾಳಿಯೊಂದಿಗೆ ಮಳೆ ಬರುವುದರಿಂದ ಸಾರ್ವಜನಿಕರು ಹೊರಗೆ ತಿರುಗಾಡದೆ ಸೂಕ್ತ ಕಟ್ಟಡದಲ್ಲಿ ವಾಸಿಸಬೇಕು. ದುರ್ಬಲ ಕಟ್ಟಡದಲ್ಲಿ ವಾಸವಿದ್ದಲ್ಲಿ ಅಥವಾ ಅಗತ್ಯವಿದ್ದಲ್ಲಿ ಮುಂಜಾಗೃತ ಕ್ರಮವಾಗಿ ಹತ್ತಿರದ ಕಾಳಜಿ ಕೇಂದ್ರದಲ್ಲಿ ಉಳಿಯಬಹುದು.

    Click here

    Click here

    Click here

    Click Here

    Call us

    Call us

    ಹೆಚ್ಚಿನ ಮಾಹಿತಿಗಾಗಿ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಂ ತುರ್ತು ಸೇವೆಗೆ ಶುಲ್ಕ ರಹಿತ 1077 ಅಥವಾ ದೂ.ಸಂಖ್ಯೆ: 0820-2574802 ಅಥವಾ ಆಯಾ ತಾಲೂಕು ತಹಶೀಲ್ದಾರರ ಕಛೇರಿಗಳಾದ ಉಡುಪಿ ದೂ.ಸಂಖ್ಯೆ: 0820-2520417, ಕುಂದಾಪುರ ದೂ.ಸಂಖ್ಯೆ: 08254-230357, ಕಾರ್ಕಳ ದೂ.ಸಂಖ್ಯೆ: 08258-230201, ಕಾಪು ದೂ.ಸಂಖ್ಯೆ: 0820-2551444, ಬ್ರಹ್ಮಾವರ ದೂ.ಸಂಖ್ಯೆ: 0820-2560494, ಬೈಂದೂರು ದೂ.ಸಂಖ್ಯೆ: 08254-251657 ಹಾಗೂ ಹೆಬ್ರಿ ದೂ.ಸಂಖ್ಯೆ: 08253-250201 ಮತ್ತು ಉಡುಪಿ ನಗರಸಭೆ ಸಹಾಯವಾಣಿ ಸಂಖ್ಯೆ: 0820-2520306 ಗೆ ಕರೆಮಾಡಬಹುದಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ ತಾಲೂಕು ಯುವ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಡಾ. ಚೇತನ್ ಶೆಟ್ಟಿ ಕೋವಾಡಿ ಆಯ್ಕೆ

    30/06/2026

    ಸಮೃದ್ಧ ಬೈಂದೂರು ಪರಿಕಲ್ಪನೆಯಡಿಯಲ್ಲಿ ಎಸ್.ಆರ್. ಸದಾನಂದಮ್ ಕಾಲುಸಂಕ ಉದ್ಘಾಟನೆ

    30/06/2026

    ಮಣೂರು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಗೀತಾನಂದ ಫೌಂಡೇಶನ್‌ ವತಿಯಿಂದ ಸಂಭ್ರಮದ ಸಾಗುವಳಿ

    29/06/2026
    Leave A Reply Cancel Reply

    20 − 9 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ ತಾಲೂಕು ಯುವ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಡಾ. ಚೇತನ್ ಶೆಟ್ಟಿ ಕೋವಾಡಿ ಆಯ್ಕೆ
    • ಅರಿವು ಸಾಲ ಯೋಜನೆ: ಅರ್ಜಿ ಆಹ್ವಾನ
    • ಸಮೃದ್ಧ ಬೈಂದೂರು ಪರಿಕಲ್ಪನೆಯಡಿಯಲ್ಲಿ ಎಸ್.ಆರ್. ಸದಾನಂದಮ್ ಕಾಲುಸಂಕ ಉದ್ಘಾಟನೆ
    • ಮುಂದಿನ ಒಂದು ವಾರ ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ
    • ಸರಕು ಸಾಗಾಣಿಕೆ ವಾಹನಗಳಿಗೆ ಸ್ಪೀಡ್ ಗವರ್ನರ್ ಅಳವಡಿಕೆ ಕಡ್ಡಾಯ: ಜಿಲ್ಲಾಧಿಕಾರಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.