Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಮೃದ್ಧ ಬೈಂದೂರು ಪರಿಕಲ್ಪನೆಯಡಿಯಲ್ಲಿ ಎಸ್.ಆರ್. ಸದಾನಂದಮ್ ಕಾಲುಸಂಕ ಉದ್ಘಾಟನೆ
    ಊರ್ಮನೆ ಸಮಾಚಾರ

    ಸಮೃದ್ಧ ಬೈಂದೂರು ಪರಿಕಲ್ಪನೆಯಡಿಯಲ್ಲಿ ಎಸ್.ಆರ್. ಸದಾನಂದಮ್ ಕಾಲುಸಂಕ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಸಮೃದ್ಧ ಬೈಂದೂರು ಪರಿಕಲ್ಪನೆಯಡಿ ಅರುಣಾಚಲಂ ಕಾಲುಸಂಕ ಯೋಜನೆಯ ಅಂಗವಾಗಿ, ಸಮ್ಯತ ಫೌಂಡೇಶನ್, ಬೆಂಗಳೂರು ಇವರ ಸಹಕಾರ ಹಾಗೂ ಚೆನ್ನೈನ ಇಂಡಸ್ 555 ಟಿಎಂಟಿ ಸಂಸ್ಥೆಯ ಸಿಎಸ್ಆರ್ ನಿಧಿಯಿಂದ ಆಜ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕ್ಯಾಕೋಡು ಗ್ರಾಮದಲ್ಲಿ ನಿರ್ಮಿಸಲಾದ ಎಸ್.ಆರ್. ಸದಾನಂದಮ್ ಕಾಲುಸಂಕವನ್ನು ಸೋಮವಾರ ಲೋಕಾರ್ಪಣೆ ಮಾಡಲಾಯಿತು.

    Click Here

    Call us

    Click Here

    ಗ್ರಾಮೀಣ ಭಾಗದ ಜನರ ಬಹುಕಾಲದ ಬೇಡಿಕೆಯಾಗಿದ್ದ ಈ ಕಾಲುಸಂಕ ನಿರ್ಮಾಣದಿಂದ ಮಳೆಗಾಲದಲ್ಲಿ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗಲಿದ್ದು, ಸ್ಥಳೀಯ ನಿವಾಸಿಗಳ ದೈನಂದಿನ ಜೀವನಕ್ಕೆ ಮಹತ್ತರ ನೆರವಾಗಲಿದೆ.

    ಈ ಸಂದರ್ಭದಲ್ಲಿ ಮಾತನಾಡಿದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು, “ಎಲ್ಲಿ ಚೆನ್ನೈ… ಎಲ್ಲಿಯ ಬೈಂದೂರು… ಆದರೆ ಅಭಿವೃದ್ಧಿಗೆ ದೂರ ಎಂಬುದಿಲ್ಲ. ಜನರ ಅಗತ್ಯಗಳನ್ನು ಮನಗಂಡು ಉತ್ತಮ ಕೆಲಸಗಳಿಗೆ ಕೈಜೋಡಿಸುವ ಸಂಸ್ಥೆಗಳ ಸಹಕಾರದಿಂದ ಗ್ರಾಮೀಣ ಅಭಿವೃದ್ಧಿಗೆ ಹೊಸ ವೇಗ ಸಿಗುತ್ತಿದೆ. ಜನಸೇವೆಯೇ ನಮ್ಮ ಪ್ರಮುಖ ಆದ್ಯತೆಯಾಗಿದ್ದು, ಇಂತಹ ಸಹಭಾಗಿತ್ವದ ಮೂಲಕ ಇನ್ನಷ್ಟು ಜನಪರ ಯೋಜನೆಗಳನ್ನು ಕ್ಷೇತ್ರದಲ್ಲಿ ಜಾರಿಗೊಳಿಸಲಾಗುವುದು” ಎಂದು ಹೇಳಿದರು.

    ಚೆನ್ನೈನ ಇಂಡಸ್ 555 ಟಿಎಂಟಿ ಸಂಸ್ಥೆಯು ಬೈಂದೂರು ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಸ್ಪಂದಿಸಿ ತನ್ನ ಸಿಎಸ್ಆರ್ ನಿಧಿಯ ಮೂಲಕ ಈ ಯೋಜನೆಗೆ ಕೈಜೋಡಿಸಿರುವುದು ಸಾಮಾಜಿಕ ಕಳಕಳಿ ಹಾಗೂ ಉತ್ತಮ ನಾಯಕತ್ವದ ಮೇಲಿನ ವಿಶ್ವಾಸಕ್ಕೆ ಸಾಕ್ಷಿಯಾಗಿದೆ.

    ಕಾರ್ಯಕ್ರಮದಲ್ಲಿ ಇಂಡಸ್ ಟಿಎಂಟಿ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾದ ಎಸ್.ಎಸ್. ಶ್ರೀಕಾಂತ್, ಸಮ್ಯತ ಫೌಂಡೇಶನ್ ಸಂಸ್ಥಾಪಕರಾದ ಮುರಳಿ ಎಂ., ಸ್ಥಳೀಯ ಜನಪ್ರತಿನಿಧಿಗಳು, ಗಣ್ಯರು, ಗ್ರಾಮಸ್ಥರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಸಮೃದ್ಧ ಬೈಂದೂರಿನತ್ತ ಮತ್ತೊಂದು ಮಹತ್ವದ ಹೆಜ್ಜೆಯಾಗಿರುವ ಈ ಯೋಜನೆಗೆ ಸಹಕರಿಸಿದ ಇಂಡಸ್ 555 ಟಿಎಂಟಿ ಸಂಸ್ಥೆ ಹಾಗೂ ಸಮ್ಯತ ಫೌಂಡೇಶನ್‌ಗೆ ಶಾಸಕ ಗುರುರಾಜ್ ಗಂಟಿಹೊಳೆ ಕೃತಜ್ಞತೆ ಸಲ್ಲಿಸಿದರು.

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕತಾರ್‌ನ ಮಹೇಶ್ ಗೌಡ ಅವರಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ

    30/06/2026

    ಕುಂದಾಪುರ ತಾಲೂಕು ಯುವ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಡಾ. ಚೇತನ್ ಶೆಟ್ಟಿ ಕೋವಾಡಿ ಆಯ್ಕೆ

    30/06/2026

    ಮುಂದಿನ ಒಂದು ವಾರ ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ

    30/06/2026
    Leave A Reply Cancel Reply

    seven + 19 =

    Call us

    Click Here

    Call us

    Call us

    Call us
    Highest Viewed Recently
    • ಕತಾರ್‌ನ ಮಹೇಶ್ ಗೌಡ ಅವರಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ
    • ಕುಂದಾಪುರ ತಾಲೂಕು ಯುವ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಡಾ. ಚೇತನ್ ಶೆಟ್ಟಿ ಕೋವಾಡಿ ಆಯ್ಕೆ
    • ಅರಿವು ಸಾಲ ಯೋಜನೆ: ಅರ್ಜಿ ಆಹ್ವಾನ
    • ಸಮೃದ್ಧ ಬೈಂದೂರು ಪರಿಕಲ್ಪನೆಯಡಿಯಲ್ಲಿ ಎಸ್.ಆರ್. ಸದಾನಂದಮ್ ಕಾಲುಸಂಕ ಉದ್ಘಾಟನೆ
    • ಮುಂದಿನ ಒಂದು ವಾರ ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.