ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕ್ಷೇತ್ರ ಸಮನ್ವಯ ಕೇಂದ್ರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ಇಲ್ಲಿ ಸುಮಾರು ಆರು ವರ್ಷಗಳ ಕಾಲ ಸಮೂಹ ಸಂಪನ್ಮೂಲ ವ್ಯಕ್ತಿಯಾಗಿ ವಂಡ್ಸೆ ಸಮೂಹ ಸಂಪನ್ಮೂಲ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸಿ ಈಗ ಮುಖ್ಯ ಶಿಕ್ಷಕರಾಗಿ ಭಡ್ತಿ ಹೊಂದಿ ಸ.ಹಿ.ಪ್ರಾಶಾಲೆ ಸೆಳ್ಕೋಡು, ಇಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಮ್. ನಾಗರಾಜ್ ಶೆಟ್ಟಿ ಅವರನ್ನು ಕ್ಷೇತ್ರ ಸಮನ್ವಯ ಕೇಂದ್ರ ಬೈಂದೂರು ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ನಿಯೋಜಿತ ಸಿ.ಆರ್.ಪಿಯಾಗಿ ಕಾರ್ಯ ನಿರ್ವಹಿಸಿದ ಚಂದ್ರ ನಾರಾಯಣ ಬಿಲ್ಲವ ಪಿ.ಎಂ.ಶ್ರೀ ಶಿರೂರು ಮತ್ತು ಲಕ್ಷ್ಮೀ ಸ.ಹಿ.ಪ್ರಾ ಶಾಲೆ ಅರೆಶಿರೂರು ಅವರನ್ನು ಸನ್ಮಾನಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಪ್ರದೀಪ ಕುಮಾರ್, ಪತ್ರಾಂಕಿತ ವ್ಯವಸ್ಥಾಪಕ ಅರುಣೇಶ್, ಅಧೀಕ್ಷಕ ಮನೋರಾಜ್ ಶೆಟ್ಟಿ, ಬೈಂದೂರು ವಲಯದ ಎಲ್ಲಾ ಸಮೂಹ ಸಂಪನ್ಮೂಲ ವ್ಯಕ್ತಿಗಳು, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳು ಹಾಗೂ ಕಚೇರಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಬಿ.ಐ.ಆರ್.ಟಿ ನಾಗರತ್ನ ಪ್ರಾರ್ಥಿಸಿದರು. ಶಿರೂರು ಸಿ.ಆರ್.ಪಿ ಗಣೇಶ್ ಪೂಜಾರಿ ಅನಿಸಿಕೆಯನ್ನು ಹಂಚಿಕೊಂಡರು. ಕ್ಷೇತ್ರ ಸಂಪನ್ಮೂಲ ವ್ಯಕ್ತಿ ರಾಜೇಶ್ ಸ್ವಾಗತಿಸಿ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮಂಜುನಾಥ ದೇವಾಡಿಗ ಕಾರ್ಯಕ್ರಮ ನಿರೂಪಿಸಿ, ಕಂಬದಕೋಣೆ ಸಿ.ಆರ್.ಪಿ ರಾಮನಾಥ ಮೇಸ್ತ ವಂದಿಸಿದರು.

















