Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲೆಯ ಗ್ರಾಮ ಪಂಚಾಯತ್, ವಾರ್ಡ್‌ಗಳನ್ನು ತಂಬಾಕು ಮುಕ್ತ ಪ್ರದೇಶವನ್ನಾಗಿ ಘೋಷಿಸಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಜಿಲ್ಲೆಯ ಗ್ರಾಮ ಪಂಚಾಯತ್, ವಾರ್ಡ್‌ಗಳನ್ನು ತಂಬಾಕು ಮುಕ್ತ ಪ್ರದೇಶವನ್ನಾಗಿ ಘೋಷಿಸಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯ ಗ್ರಾಮ ಪಂಚಾಯಿತಿ ಹಾಗೂ ವಾರ್ಡ್‌ಗಳನ್ನು ತಂಬಾಕು ಮುಕ್ತ ಪ್ರದೇಶವನ್ನಾಗಿಸಿ ಘೋಷಿಸಲು ಸಾರ್ವಜನಿಕರ ಸಹಭಾಗಿತ್ವದಲ್ಲಿ ಮುಂದಾಗಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಕರೆ ನೀಡಿದರು.

    Click Here

    Call us

    Click Here

    ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಕೋಟ್ಪಾ-2003 ಕಾಯಿದೆಯ ಕುರಿತ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯಾಘಾತಗಳಂತಹ ಮಾರಣಾಂತಿಕ ಕಾಯಿಲೆಗಳು ಉಂಟಾಗುತ್ತವೆ. ಸಾರ್ವಜನಿಕರು ತಂಬಾಕು ಉತ್ಪನ್ನಗಳಿಂದ ದೂರವಿದ್ದಾಗ ಮಾತ್ರ ಉತ್ತಮ ಆರೋಗ್ಯವನ್ನು ಹೊಂದಲು ಸಾಧ್ಯ. ಇದಕ್ಕೆ ಪ್ರತಿಯೊಬ್ಬರೂ ಒತ್ತು ನೀಡಬೇಕು ಎಂದರು.

    ಜಿಲ್ಲೆಯಲ್ಲಿ ಕೆಲವು ಗ್ರಾಮ ಪಂಚಾಯತಿ, ಗ್ರಾಮಗಳು, ಬಹುಮಹಡಿ ವಸತಿ ಸಮುಚ್ಛಯಗಳು ತಂಬಾಕು ಮುಕ್ತ ಪ್ರದೇಶಗಳನ್ನಾಗಿ ಅಧಿಕೃತ ಘೋಷಣೆಗಳನ್ನು ಮಾಡಲಾಗಿದೆ. ಸಾರ್ವಜನಿಕರಲ್ಲಿ ಇವುಗಳ ಸೇವನೆಯಿಂದ ಉಂಟಾಗುವ ವ್ಯತಿರಿಕ್ತ ಪರಿಣಾಮದ ಬಗ್ಗೆ ಸಮುದಾಯಗಳಲ್ಲಿ ಜಾಗೃತಿಗೊಳಿಸಿ ಹೆಚ್ಚು ಹೆಚ್ಚು ಗ್ರಾಮ ಪಂಚಾಯತಿಗಳನ್ನು ಹಾಗೂ ವಾರ್ಡ್ಗಳನ್ನು ತಂಬಾಕು ಮುಕ್ತ ಪ್ರದೇಶವನ್ನಾಗಿಸಬೇಕೆಂದರು.

    ಜಿಲ್ಲೆಯ ಶಾಲಾ ಕಾಲೇಜುಗಳ ನೂರು ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧವಿದೆ. ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಸ್ಥಳೀಯ ಸಂಸ್ಥೆಗಳಿಂದ ತಂಬಾಕು ಮುಕ್ತ ಮಾರಾಟ ಪರವಾನಿಗೆಯನ್ನು ಕಡ್ಡಾಯವಾಗಿ ಪಡೆಯಬೇಕು. ಪರವಾನಿಗೆ ನೀಡುವ ಸಂದರ್ಭದಲ್ಲಿ ಅಂಗಡಿಯು ಶಾಲಾ ಪರಿಮಿತಿ ಸೇರಿದಂತೆ ಮತ್ತಿತರ ನಿಯಮಗಳು ಉಲ್ಲಂಘನೆಗಳಾಗುತ್ತಿದೇಯೇ ಎಂಬ ಬಗ್ಗೆ ಪರಿಶೀಲಿಸಿ, ಪರವಾನಿಗೆ ನೀಡಬೇಕೆಂದರು.

    ಜಿಲ್ಲೆಯಲ್ಲಿ 33 ಕ್ಕೂ ಹೆಚ್ಚು ಧಿಡೀರ್ ದಾಳಿಗಳನ್ನು ನಡೆಸಿ, ಸೆಕ್ಷನ್ 4, ಸೆಕ್ಷನ್ 6(ಎ) ಹಾಗೂ 6(ಬಿ) ಅಡಿಯಲ್ಲಿ ಒಟ್ಟು 245 ಕ್ಕೂ ಹೆಚ್ಚು ಪ್ರಕರಣವನ್ನು ದಾಖಲಿಸಿಕೊಂಡು 70,000 ರೂ ದಂಡ ವಸೂಲಿ ಮಾಡಲಾಗಿದೆ. ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿಯೂ ಸಹ ಕೋಟ್ಪಾ ಕಾಯಿದೆಯನ್ನು ಉಲ್ಲಂಘಿಸಿದ 31 ಪ್ರಕರಣಗಳಿಂದ 3,300 ರೂ. ದಂಡ ವಸೂಲಿ ಮಾಡಲಾಗಿದೆ ಎಂದ ಅವರು, ಜಿಲ್ಲೆಯಾದ್ಯಂತ ದಿಢೀರ್ ದಾಳಿಗಳನ್ನು ಹೆಚ್ಚು ನಡೆಸುವುದರೊಂದಿಗೆ ಕೋಟ್ಪಾ ಕಾಯಿದೆಯ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದರು.

    Click here

    Click here

    Click here

    Call us

    Call us

    ಸಭೆಯಲ್ಲಿ ಅಪರ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಸವರಾಜ್ ಹುಬ್ಬಳ್ಳಿ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ನಾಗರತ್ನ, ತಾಲೂಕು ಆರೋಗ್ಯಾಧಿಕಾರಿಗಳು, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕಾನೂನು ಪದವೀಧರರಿಗೆ ಶಿಷ್ಯವೇತನ: ಅರ್ಜಿ ಆಹ್ವಾನ

    14/08/2026

    ಇಎಸ್‌ಐ ವೇತನ ಮಿತಿಯನ್ನು 35,000ರೂ.ಗೆ ಹೆಚ್ಚಿಸಲು ಲೋಕಸಭೆಯಲ್ಲಿ ಸಂಸದ ಕೋಟ ಆಗ್ರಹ

    13/08/2026

    ಪುಸ್ತಕಗಳನ್ನು ಓದಿ ಜ್ಞಾನ ಸಂಪಾದನೆ ಹೆಚ್ಚಿಸಿ: ಡಾ. ಎಲ್ಲಮ್ಮ

    13/08/2026
    Leave A Reply Cancel Reply

    9 + six =

    Call us

    Click Here

    Call us

    Call us

    Call us
    Highest Viewed Recently
    • ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ 80ನೇ ಸ್ವಾತಂತ್ರ‍್ಯ ದಿನಾಚರಣೆ
    • 80ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ
    • ಕುಂದಾಪುರ ತಾಲೂಕು ಆಡಳಿತ ವತಿಯಿಂದ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ
    • ಬೈಂದೂರು ತಾಲೂಕು ಆಡಳಿತದಿಂದ 80ನೇ ಸ್ವಾತಂತ್ರ್ಯ ದಿನಾಚರಣೆ
    • ಪಂಚವರ್ಣ ಸಂಘಟನೆ ಕಛೇರಿಯಲ್ಲಿ 80ನೇ ಹಸಿರು ಸ್ವಾತಂತ್ರ್ಯೋತ್ಸವ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.