ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಸೈಂಟ್ ಥಾಮಸ್ ಶಾಲೆ ವತಿಯಿಂದ ಮಾದಕ ವ್ಯಸನ ವಿರೋಧಿ ಜಾಗೃತಿ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಯಿತು.
ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾದರ್ ಫಿಲಿಪ್ ನೆಲ್ಲಿವಿಳಾ ಅವರು ರ‍್ಯಾಲಿಗೆ ಚಾಲನೆ ನೀಡಿ, ವಿದ್ಯಾರ್ಥಿಗಳು ಯಾವುದೇ ರೀತಿಯ ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗದೆ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. “ಮಾದಕ ವ್ಯಸನಕ್ಕೆ ಇಲ್ಲ, ಆರೋಗ್ಯಕರ ಜೀವನಕ್ಕೆ ಹೌದು”ಎಂಬ ಘೋಷಣೆಗಳೊಂದಿಗೆ.
ರ‍್ಯಾಲಿಯಲ್ಲಿ ವಿದ್ಯಾರ್ಥಿಗಳು ಮಾದಕ ವ್ಯಸನದ ದುಷ್ಪರಿಣಾಮಗಳನ್ನು ತಿಳಿಸುವ ಫಲಕಗಳನ್ನು ಪ್ರದರ್ಶಿಸಿ , ರೋಲ್ ಪ್ಲೇ ಮಾಡುವುದರ ಮೂಲಕ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು. ಶಿಕ್ಷಕರು ಹಾಗೂ ಸಿಬ್ಬಂದಿಯೂ ಭಾಗವಹಿಸಿ ಕಾರ್ಯಕ್ರಮಕ್ಕೆ ಸಹಕಾರ ನೀಡಿದರು.
ಈ ಜಾಗೃತಿ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸುವ ಜೊತೆಗೆ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪವನ್ನು ಬಲಪಡಿಸಿತು.

















