ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ತೆಕ್ಕಟ್ಟೆಯ ವಿಶ್ವವಿನಾಯಕ ಪಿಯು ಕಾಲೇಜಿನಲ್ಲಿ ರಾಷ್ಟ್ರೀಯ ಚಾರ್ಟರ್ಡ್ ಅಕೌಂಟೆಂಟ್ ದಿನಾಚರಣೆಯನ್ನು ಬುಧವಾರ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲೆಯ ಮ್ಯಾನೇಜಿಂಗ್ ಡೈರೆಕ್ಟರ್ ಎಂ. ಪ್ರಭಾಕರ್ ಶೆಟ್ಟಿ ಅವರು ವಿದ್ಯಾರ್ಥಿಗಳು ಪದವಿ ಪೂರ್ವ ನಂತರ ಸಿಎ ಕೋರ್ಸ್ ಮಾಡುವುದರ ಬಗ್ಗೆ ಮತ್ತು ಆ ಕೋರ್ಸಿಗಿರುವ ಉದ್ದೇಶದ ಕುರಿತು ಮಾತನಾಡಿದರು.

ಮುಖ್ಯ ಅತಿಥಿಗಳಾದ ಸಿ.ಎ. ಸಂತೋಷ್ ಪ್ರಭು ಅವರು ಸಿ.ಎ, ಸಿ.ಎಸ್, ಸಿ.ಎಂ. ಎ ಕೋರ್ಸ್ ನ ಬಗ್ಗೆ, ಅದರಲ್ಲಿರುವ ವಿಷಯಗಳ ಕುರಿತು ತರಬೇತಿ ಹಾಗೂ ಪರೀಕ್ಷೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಮನೋಜ್ ಕುಮಾರ್, ಆಡಳಿತ ನಿರ್ದೇಶಕ ಹರೀಶ್ ಮರವಂತೆ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಪ್ರಾರ್ಥನಾ ಕಾಮತ್ ಕಾರ್ಯಕ್ರಮ ನಿರೂಪಿಸಿ, ರಿತಿಕ ಗಾಣಿಗ ಸ್ವಾಗತಿಸಿ, ಸಾಕೇತ್ ವಂದಿಸಿದರು.

















