Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ತಾಲೂಕು ಕಚೇರಿಯಲ್ಲಿ ಬಾಕಿ ಇರುವ ಕಡತಗಳ ತ್ವರಿತ ವಿಲೇವಾರಿಗೆ ಒತ್ತು: ಶಾಸಕ ಗಂಟಿಹೊಳೆ
    ಊರ್ಮನೆ ಸಮಾಚಾರ

    ಕುಂದಾಪುರ ತಾಲೂಕು ಕಚೇರಿಯಲ್ಲಿ ಬಾಕಿ ಇರುವ ಕಡತಗಳ ತ್ವರಿತ ವಿಲೇವಾರಿಗೆ ಒತ್ತು: ಶಾಸಕ ಗಂಟಿಹೊಳೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ತಾಲೂಕಿನ ವಂಡ್ಸೆ ಹೋಬಳಿಯ ಸಾರ್ವಜನಿಕರು ತಾಲೂಕು ಕಚೇರಿಗೆ ಸಲ್ಲಿಸಿರುವ ವಿವಿಧ ಅರ್ಜಿಗಳು ಬಾಕಿ ಇದ್ದ ಹಿನ್ನಲೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ  ಶಾಸಕರಾದ  ಗುರುರಾಜ್ ಗಂಟಿಹೊಳೆ ಅವರು, ತಹಸೀಲ್ದಾರರ ಸಮ್ಮುಖ ಕಂದಾಯ ಅಧಿಕಾರಿಗಳ ಸಭೆ ನಡೆಸಿದರು.

    Click Here

    Call us

    Click Here

    ಈ ವೇಳೆ ಅವರು ಮಾತನಾಡಿ, ಹೋಬಳಿಯ ಯಾವುದೇ ಅರ್ಜಿದಾರರು ಸರಿಯಾದ ಪೂರಕ ದಾಖಲೆ ನೀಡಿದ ಹೊರತಾಗಿಯೂ ಸಕಾಲದಲ್ಲಿ ಕಡತ ವಿಲೇವಾರಿ ಆಗದೇ ಇದ್ದಲ್ಲಿ ಇಡೀ ತಾಲೂಕು ಕಚೇರಿ ವ್ಯವಸ್ಥೆಗೆ ಕೆಟ್ಟ ಹೆಸರು ಬರುತ್ತದೆ. ಹಾಗಾಗಿ ಯಾವುದೇ ಕಾರಣಕ್ಕೂ ಸಾರ್ವಜನಿಕರ ಅರ್ಜಿಗಳನ್ನು ಬಾಕಿ ಇರಿಸಿಕೊಳ್ಳದೆ ಅಗತ್ಯ ಇದ್ದಲ್ಲಿ ಮಾತ್ರ ಹಿಂಬರಹ ನೀಡಿ, ಉಳಿದಂತೆ ಕಡತಗಳನ್ನು ಅರ್ಜಿದಾರರಿಗೆ ಅನುಕೂಲ ಆಗುವ ದೃಷ್ಟಿಯಲ್ಲಿ ವಿಲೇವಾರಿ ಮಾಡಲು ಮುಖ್ಯವಾಗಿ ಆರ್ ಟಿ ಸಿ ಸಮಸ್ಯೆಗಳು, ಭೂ ವ್ಯಾಜ್ಯ, ಅಕ್ರಮ ಸಕ್ರಮ, 94 ಸಿ, ಆರ್ ಆರ್ ಟಿ ಹಾಗೂ 11 ಈ ಕಡತಗಳನ್ನು ಆದ್ಯತೆಯಲ್ಲಿ ವಿಲೇ ಗೊಳಿಸಲು ಸೂಚನೆ ನೀಡಿದರು.

    ಶಾಸಕರ ಕಚೇರಿಗೆ ಸಮಸ್ಯೆಗಳ ನಿವಾರಣೆ ಬಗ್ಗೆ ಮನವಿ ಮಾಡಿದ ಅರ್ಜಿದಾರರನ್ನು ಅಧಿಕಾರಿಗಳ ಜೊತೆ ಮುಖಾಮುಖಿ ಮಾಡಿಸಲಾಗಿ ಸದ್ರಿ ಅರ್ಜಿಗಳನ್ನು ಕೂಡಲೇ ಇತ್ಯರ್ಥ ಪಡಿಸಲು ಸೂಚಿಸಿ,ಸಮರ್ಪಕ ದಾಖಲೆ ಇದ್ದರೂ ಕೆಲಸ ಮಾಡಿ ಕೊಡದೇ ಅಥವಾ ಸತಾಯಿಸದೆ ತ್ವರಿತವಾಗಿ ಸ್ಪಂದಿಸಲು ಅಧಿಕಾರಿಗಳಿಗೆ ತಾಕೀತು ಮಾಡಿದರು.

    ಜಂಟಿ ಸರ್ವೇ ಚುರುಕುಗೊಳಿಸಿ:
    ಅಕ್ರಮ ಸಕ್ರಮ ಹಾಗೂ 94 ಸಿ ಅರ್ಜಿಗಳ ತ್ವರಿತ ವಿಲೇವಾರಿ ನೆಲೆಯಲ್ಲಿ ನಿರಂತರವಾಗಿ ಜಂಟಿ ಸರ್ವೇ ನಡೆಸಲು ಈಗಾಗಲೇ ಹಲವು ಬಾರಿ ತಿಳಿಸಲಾಗಿದೆ. ಸದರಿ ಪ್ರಕ್ರಿಯೆ ಪ್ರಸ್ತುತ ನಡೆಯುತ್ತಿದ್ದರೂ, ಜಂಟಿ ಸರ್ವೇಯನ್ನು ಚುರುಕು ಗೊಳಿಸಿ ಅರ್ಹರಿಗೆ ಭೂಮಿ ಹಕ್ಕು ನೀಡಲು ಕ್ರಮ ವಹಿಸಲು ತಹಸೀಲ್ದಾರರಿಗೆ ಸೂಚನೆ ನೀಡಿದರು.

    94 ಸಿ ಹಕ್ಕು ಪತ್ರ ವಿತರಣೆ:
    ವಂಡ್ಸೆ ಹೋಬಳಿಯ ತಲ್ಲೂರು ಹಾಗೂ ದೇವಲ್ಕುoದ ಗ್ರಾಮಗಳ ಅರ್ಹ 03 ಜನ ಫಲಾನುಭವಿಗಳಿಗೆ ಇದೇ ಸಂದರ್ಭದಲ್ಲಿ ಶಾಸಕರು 94 ಸಿ ಹಕ್ಕು ಪತ್ರ ವಿತರಿಸಿದರು.

    Click here

    Click here

    Click here

    Click Here

    Call us

    Call us

    ಸಭೆಯಲ್ಲಿ ಕುಂದಾಪುರ ತಹಸೀಲ್ದಾರ್ ಪ್ರದೀಪ್ ಕುರುಡೇಕರ್, ಉಪ ತಹಸೀಲ್ದಾರ್ ಪ್ರಕಾಶ್, ಕಂದಾಯ ನಿರೀಕ್ಷಕ ರಾಘವೇಂದ್ರ ಹಾಗೂ ಇತರರು ಉಪಸ್ಥಿತರಿದ್ದರು.

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪತ್ರಿಕೆಗಳು ಸಾಮಾಜಿಕ ಜಾಗೃತಿ ಮೂಡಿಸುವಲ್ಲಿ ಮಹತ್ವದ ಪಾತ್ರ: ಡಾ. ಶುಭಕರಾಚಾರಿ

    02/07/2026

    ಗೃಹರಕ್ಷಕರ ಅಧಿಕಾರಿಗಳ ತರಬೇತಿಯಲ್ಲಿ ಸ್ನೇಹಾಗೆ ಚಿನ್ನದ ಪದಕ

    02/07/2026

    ಕೆದೂರು ಸರಕಾರಿ ಪ್ರೌಢಶಾಲೆಯ ವಿವಿಧ ಸಂಘಗಳ ಉದ್ಘಾಟನೆ

    02/07/2026
    Leave A Reply Cancel Reply

    9 + 19 =

    Call us

    Click Here

    Call us

    Call us

    Call us
    Highest Viewed Recently
    • ಪತ್ರಿಕೆಗಳು ಸಾಮಾಜಿಕ ಜಾಗೃತಿ ಮೂಡಿಸುವಲ್ಲಿ ಮಹತ್ವದ ಪಾತ್ರ: ಡಾ. ಶುಭಕರಾಚಾರಿ
    • ಗೃಹರಕ್ಷಕರ ಅಧಿಕಾರಿಗಳ ತರಬೇತಿಯಲ್ಲಿ ಸ್ನೇಹಾಗೆ ಚಿನ್ನದ ಪದಕ
    • ಪಠ್ಯಜ್ಞಾನಕ್ಕಿಂತ ನಾಯಕತ್ವ ಗುಣಗಳಿಗೇ ಎನ್‌ಡಿಎ ಆಯ್ಕೆಯಲ್ಲಿ ಆದ್ಯತೆ: ಕರ್ನಲ್‌ ಸೋಮು ಮಹಾರಾಜನ್
    • ಕೆದೂರು ಸರಕಾರಿ ಪ್ರೌಢಶಾಲೆಯ ವಿವಿಧ ಸಂಘಗಳ ಉದ್ಘಾಟನೆ
    • ಮಾಧ್ಯಮಗಳಿಂದ ಸತ್ಯ ಎತ್ತಿಹಿಡಿಯುವ ಕಾರ್ಯ ಆಗಬೇಕು: ಡಾ. ಶುಭಾ ಎಚ್‌.ಎಸ್‌.

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.