Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಾಧ್ಯಮಗಳಿಂದ ಸತ್ಯ ಎತ್ತಿಹಿಡಿಯುವ ಕಾರ್ಯ ಆಗಬೇಕು: ಡಾ. ಶುಭಾ ಎಚ್‌.ಎಸ್‌.
    ಉಡುಪಿ ಜಿಲ್ಲೆ

    ಮಾಧ್ಯಮಗಳಿಂದ ಸತ್ಯ ಎತ್ತಿಹಿಡಿಯುವ ಕಾರ್ಯ ಆಗಬೇಕು: ಡಾ. ಶುಭಾ ಎಚ್‌.ಎಸ್‌.

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಸಮಾಜದ ಸಮಸ್ಯೆಗಳನ್ನು ಮುನ್ನೆಲೆಗೆ ತರುವುದು ಪತ್ರಕರ್ತರ ಕರ್ತವ್ಯ.  ವ್ಯವಸ್ಥೆಯ ಲೋಪದೋಷಗಳನ್ನು ಸಮಾಜದ ಮುಂದೆ ಇಡುವುದು ಪತ್ರಿಕೋದ್ಯಮದ ಪ್ರಮುಖ ಕೆಲಸವಾಗಿದೆ. ಸಾಮಾಜಿಕ ಜಾಲತಾಣಗಳ ಅಬ್ಬರದ ನಡುವೆಯೂ ಮಾಧ್ಯಮಗಳು ಸತ್ಯವನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕು ಎಂದು ಮಣಿಪಾಲ ಇನ್ಸಿಟ್ಯೂಟ್‌ ಆಫ್‌‌ ಕಮ್ಯುನಿಕೇಶನ್‌ನ ನಿರ್ದೇಶಕಿ ಡಾ. ಶುಭಾ ಎಚ್‌.ಎಸ್‌. ಹೇಳಿದರು.

    Click Here

    Call us

    Click Here

    ಅವರು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪ್ರತಿಕಾ ಭವನ ಸಮಿತಿ ಹಾಗೂ ಉಡುಪಿ ಲೋಂಬಾರ್ಡ್‌ ಮೆಮೋರಿಯಲ್‌ (ಮಿಷನ್‌) ಆಸ್ಪತ್ರೆಯ ಇವುಗಳ ಸಹಯೋಗದೊಂದಿಗೆ ಉಡುಪಿ ಐಎಂಎ ಭವನದಲ್ಲಿ ಆಯೋಜಿಸಲಾದ ಪತ್ರಿಕಾ ದಿನಾಚರಣೆ ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ಸುದ್ದಿಗಳಲ್ಲಿ ಮಹಿಳೆಯರನ್ನು ಹೆಚ್ಚಾಗಿ ಸಂತ್ರಸ್ತರಾಗಿ, ರಾಜಕಾರಣಿಗಳಾಗಿ ಅಥವಾ ಕ್ರೀಡಾಪಟುಗಳಾಗಿ ಮಾತ್ರ ಬಿಂಬಿಸಲಾಗುತ್ತದೆ. ಆದರೆ ನೀತಿ ನಿರೂಪಕಿ, ವಿಷಯ ತಜ್ಞೆ ಮಹಿಳೆಯರನ್ನು ಸಂದರ್ಶಿಸುವ ಅಥವಾ ಅವರ ಅಭಿಪ್ರಾಯ ಪಡೆಯುವ ಪ್ರಮಾಣ ಅತ್ಯಂತ ವಿರಳವಾಗಿದೆ ಎಂದು ತಿಳಿಸಿದರು.

    ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಉಡುಪಿ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕಿ ಬಿ. ಮಂಜುನಾಥ್‌ ಮಾತನಾಡಿದರು.

    ಈ ಸಂದರ್ಭದಲ್ಲಿ ಹಿರಿಯ ವ್ಯಂಗ್ಯಚಿತ್ರಕಾರ ಜೇಮ್ಸ್‌ ವಾಝ್‌ ಅವರಿಗೆ ಪತ್ರಿಕಾ ದಿನದ ಗೌರವ ಪ್ರದಾನ ಮಾಡಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಬೆಂಗಳೂರು ಡಾ.ಬಿ.ಆರ್‌.ಅಂಬೇಡ್ಕರ್‌ ತಂತ್ರಜ್ಞಾನ ಸಂಸ್ಥೆಯ ಆಡಳಿತಾ˜ ಕಾರಿ ಎಸ್‌.ಎಚ್‌.ಸಂತೋಷ್‌ ಕುಮಾರ್‌ ಪತ್ರಕರ್ತರ ಒತ್ತಡ ನಿರ್ವಹಣೆ ಮತ್ತು ವ್ಯಕ್ತಿತ್ವ ವಿಕಸನ ಕುರಿತು ಮಾತನಾಡಿದರು.

    Click here

    Click here

    Click here

    Click Here

    Call us

    Call us

    ಈ ಬಾರಿಯ ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ರಾಜ್ಯ ಸರಕಾರದ ಗ್ರಾಮೀಣ ಪತ್ರಕರ್ತರ ಬಸ್‌ಪಾಸ್‌ ಯೋಜನೆಯ ಫಲಾನುಭವಿ ಯೋಗೀಶ್‌ ಕುಂಭಾಶಿಗೆ ಕಾರ್ಡ್‌ ವಿತರಿಸಲಾಯಿತು. 

    ವೇದಿಕೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಆಸ್ಟ್ರೋ ಮೋಹನ್‌, ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್‌ ಕುಮಾರ್‌ ಶಿರೂರು, ಉಡುಪಿ ಪತ್ರಿಕಾ ಭವನ ಸಮಿತಿಯ ಸಹಸಂಚಾಲಕ ಅಂಕಿತ್‌ ಶೆಟ್ಟಿ, ಜಿಲ್ಲಾ ಸಂಘದ ಕೋಶಾಕಾರಿ ಹರೀಶ್‌ ಕುಂದರ್‌ ಉಪಸ್ಥಿತರಿದ್ದರು.

    ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್‌ ಪೊಲ್ಯ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಾರ್ಯದರ್ಶಿ ಉಮೇಶ್‌ ಮಾರ್ಪಳ್ಳಿ ಸಂಪನ್ಮೂಲ ವ್ಯಕ್ತಿಯ ಪರಿಚಯ ಮಾಡಿದರು. ಜಿಲ್ಲಾ ಸಮಿತಿ ಸದಸ್ಯ ಅಜಿತ್‌ ಆರಾಡಿ ಪ್ರತಿಭಾ ಪುರಸ್ಕಾರದ ಪಟ್ಟಿ ವಾಟಿಸಿದರು.

    ಸನ್ಮಾನ ಪತ್ರವನ್ನು ಉಡುಪಿ ಪ್ರತಿಕಾ ಭವನ ಸಮಿತಿಯ ಸದಸ್ಯ ಮೈಕಲ್‌ ರೋಡ್ರಿಗಸ್‌ ವಾಚಿಸಿದರು. ಜಿಲ್ಲಾ ಸಂಘದ ಉಪಾಧ್ಯಕ್ಷ ಉದಯ ಕುಮಾರ್‌ ಮುಂಡ್ಕೂರು ವಂದಿಸಿದರು. ಪತ್ರಕರ್ತೆ ಅಕ್ಷತಾ ಗಿರೀಶ್‌ ಐತಾಳ್‌ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕರಾವಳಿಯಲ್ಲಿ ಮಳೆ ಚೇತರಿಕೆ: ಜು.3ರ ತನಕ ಭಾರಿ ಮಳೆಯ ಮುನ್ಸೂಚನೆ

    01/07/2026

    ಉಡುಪಿ: ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ

    01/07/2026

    ಜಿಲ್ಲೆಯ ಗ್ರಾಮ ಪಂಚಾಯತ್, ವಾರ್ಡ್‌ಗಳನ್ನು ತಂಬಾಕು ಮುಕ್ತ ಪ್ರದೇಶವನ್ನಾಗಿ ಘೋಷಿಸಿ: ಜಿಲ್ಲಾಧಿಕಾರಿ

    01/07/2026
    Leave A Reply Cancel Reply

    six + 17 =

    Call us

    Click Here

    Call us

    Call us

    Call us
    Highest Viewed Recently
    • ಕೃಷಿ ಕೂಲಿ ಕೆಲಸಕ್ಕೆ ತೆರಳಿದ್ದ ವ್ಯಕ್ತಿ ಬಾವಿಗೆ ಬಿದ್ದು ಸಾವು
    • ಪತ್ರಿಕೆಗಳು ಸಾಮಾಜಿಕ ಜಾಗೃತಿ ಮೂಡಿಸುವಲ್ಲಿ ಮಹತ್ವದ ಪಾತ್ರ: ಡಾ. ಶುಭಕರಾಚಾರಿ
    • ಗೃಹರಕ್ಷಕರ ಅಧಿಕಾರಿಗಳ ತರಬೇತಿಯಲ್ಲಿ ಸ್ನೇಹಾಗೆ ಚಿನ್ನದ ಪದಕ
    • ಪಠ್ಯಜ್ಞಾನಕ್ಕಿಂತ ನಾಯಕತ್ವ ಗುಣಗಳಿಗೇ ಎನ್‌ಡಿಎ ಆಯ್ಕೆಯಲ್ಲಿ ಆದ್ಯತೆ: ಕರ್ನಲ್‌ ಸೋಮು ಮಹಾರಾಜನ್
    • ಕೆದೂರು ಸರಕಾರಿ ಪ್ರೌಢಶಾಲೆಯ ವಿವಿಧ ಸಂಘಗಳ ಉದ್ಘಾಟನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.