ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಕೃಷಿ ಕೂಲಿ ಕೆಲಸಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾಗಿ ಎರಡು ದಿನಗಳ ಬಳಿಕ ಬಾವಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಕುಂದಬಾರಂದಾಡಿ ಗ್ರಾಮದಿಂದ ಬುಧವಾರ ವರದಿಯಾಗಿದೆ.
ಕುಂದಬಾರಂದಾಡಿ ಗ್ರಾಮದ ಮಕ್ಕಿಮನೆ ನಿವಾಸಿ ವಸಂತ ಬಂಗೇರ (56) ಮೃತಪಟ್ಟ ವ್ಯಕ್ತಿ.
ಜೂ. 29ರಂದು ಬೆಳಗ್ಗೆ ದೇವಲ್ಕುಂದಕ್ಕೆ ಕೃಷಿ ಕೆಲಸಕ್ಕೆಂದು ತೆರಳಿದ್ದ ಅವರು ಮನೆಗೆ ಮರಳಿರಲಿಲ್ಲ. ಕುಟುಂಬದವರು ವಿವಿಧೆಡೆ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಬುಧವಾರ ಬೆಳಗ್ಗೆ ದೇವಲ್ಕುಂದ ಬಾವಿಯಲ್ಲಿ ಅವರ ಶವ ಪತ್ತೆಯಾಗಿದೆ.
ಬಾವಿಯ ಸಮೀಪದ ಕಾಲುದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟಿರಬೇಕು ಎಂದು ಸಂಶಯಿಸಲಾಗಿದೆ.
ಮೃತರ ಸಂಬಂಧಿ ದಿವ್ಯಶ್ರೀ ನೀಡಿದ ದೂರಿನಂತೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

















