ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಕುಂದಾಪುರ ವಿಧಾನಸಭಾ ಕ್ಷೇತ್ರದ ಕೋಟ ಮಹಾಶಕ್ತಿ ಕೇಂದ್ರದ ವ್ಯಾಪ್ತಿಗೆ ಬರುವ ವಡ್ಡರ್ಸೆ ಶಕ್ತಿ ಕೇಂದ್ರದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಬುಧವಾರ ಬನ್ನಾಡಿಯ ಸುಬ್ಬಣ್ಣ ಹೆಗ್ಡೆ ಸಭಾಭವನದಲ್ಲಿ ಯಶಸ್ವಿಯಾಗಿ ನೆರವೇರಿತು.
ಕುಂದಾಪುರ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರ ಉಪಸ್ಥಿತರಿದ್ದ ಈ ಸಭೆಯಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಬೂತ್ ಅಧ್ಯಕ್ಷರನ್ನು ಆಯ್ಕೆ ಮಾಡಲಾಯಿತು.

ಶಕ್ತಿ ಕೇಂದ್ರದ ಮಹತ್ವ ಮತ್ತು ಮುಂದಿನ ಗುರಿ ಬಗ್ಗೆ ಸಭೆಯ ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರಾಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅವರು ಮಾತನಾಡಿ ಪಕ್ಷ ಸಂಘಟನೆಯ ಸೂಕ್ಷ್ಮ ರಚನೆಯ ಕುರಿತು ಸ್ಪಷ್ಟ ನಿರ್ದೇಶನ ನೀಡಿದರು. “ಶಕ್ತಿ ಕೇಂದ್ರ ಎಂದರೆ ಪಕ್ಷದ ನಿಜವಾದ ಶಕ್ತಿ. ಬೂತ್ ಮಟ್ಟದ ಕೊನೆಯ ಕಾರ್ಯಕರ್ತನವರೆಗೂ ಪಕ್ಷದ ಸಿದ್ಧಾಂತ ಮತ್ತು ಸರ್ಕಾರದ ಯೋಜನೆಗಳು ತಲುಪಬೇಕು. ಅದಕ್ಕಾಗಿ ನಮ್ಮ ಗುರಿ ಎಂದರು.
ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿಯವರು ಮಾತನಾಡಿ, ಚುನಾವಣೆ ಸಂದರ್ಭದಲ್ಲಿ ಮಾತ್ರ ಸಕ್ರಿಯವಾಗದೆ, ನಿರಂತರ ಜನಸಂಪರ್ಕ ಇಟ್ಟುಕೊಳ್ಳುವುದು ಶಕ್ತಿ ಕೇಂದ್ರದ ಜವಾಬ್ದಾರಿ. ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕೊಂಡಿ ನೀವೇ. ಬೂತ್ ಸಮಿತಿಗಳು ಪಕ್ಷದ ಬೆನ್ನೆಲುಬು. ಅವುಗಳನ್ನು ಬಲಪಡಿಸಿದಷ್ಟು ಪಕ್ಷ ಗಟ್ಟಿಯಾಗುತ್ತದೆ” ಎಂದು ನೂತನ ಪದಾಧಿಕಾರಿಗಳಿಗೆ ಸೂಚಿಸಿ ಶುಭ ಹಾರೈಸಿದರು.
ಕೋಟ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸುರೇಶ್ ಕುಂದರ್ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಅಜಿತ್ ಶೆಟ್ಟಿ ಕೊತ್ತಾಡಿ ವಂದಿಸಿದರು. ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಶಂಕರ ಅಂಕದಕಟ್ಟೆ, ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ.ಎಸ್., ಮಂಡಲ ಕಾರ್ಯದರ್ಶಿ ರಾಜೇಶ್ ಶೆಟ್ಟಿ, ವಡ್ಡರ್ಸೆ ಗ್ರಾ.ಪಂ. ಮಾಜಿ ಅಧ್ಯಕ್ಷ ಲೋಕೇಶ್ ಬಂಗೇರ ಉಪಸ್ಥಿತರಿದ್ದರು.
















