Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜುಲೈ 6ರಂದು ಯಡಾಡಿ – ಮತ್ಯಾಡಿಯಲ್ಲಿ ಕುಂದಾಪ್ರ ಕನ್ನಡ ʼವಾಲ್ಬೆಲ್ಲʼ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಜುಲೈ 6ರಂದು ಯಡಾಡಿ – ಮತ್ಯಾಡಿಯಲ್ಲಿ ಕುಂದಾಪ್ರ ಕನ್ನಡ ʼವಾಲ್ಬೆಲ್ಲʼ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಕುಂದಾಪ್ರ ಕನ್ನಡ ಭಾಷೆ, ಸಂಸ್ಕೃತಿ ಹಾಗೂ ನೆಲಮೂಲದ ಕಲಾ ಪರಂಪರೆಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಮಂಗಳೂರು ವಿಶ್ವವಿದ್ಯಾನಿಲಯದ ಕುಂದಾಪ್ರ ಕನ್ನಡ ಅಧ್ಯಯನ ಪೀಠ ಮತ್ತು ಯಡಾಡಿ–ಮತ್ಯಾಡಿಯ ಸುಜ್ಞಾನ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ‘ವಾಲ್ಬೆಲ್ಲ’ ಸಾಂಸ್ಕೃತಿಕ ಹಾಗೂ ಚಿತ್ರಕಲಾ ಸ್ಪರ್ಧೆಯನ್ನು ಜುಲೈ 6ರಂದು ಬೆಳಿಗ್ಗೆ 9.30ಕ್ಕೆ ವಿದ್ಯಾರಣ್ಯ ಕ್ಯಾಂಪಸ್‌ನಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಸಚಿವ ಹಾಗೂ ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಸದಸ್ಯ ಕೆ. ಜಯಪ್ರಕಾಶ್ ಹೆಗ್ಡೆ ತಿಳಿಸಿದರು.

    Click Here

    Call us

    Click Here

    ಅವರು ಯಡಾಡಿ–ಮತ್ಯಾಡಿಯ ಸುಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕರ್ನಾಟಕ ಸರ್ಕಾರವು ಮಂಗಳೂರು ವಿಶ್ವವಿದ್ಯಾಲಯದ ಅಧೀನದಲ್ಲಿ ಪೂರ್ಣ ಪ್ರಮಾಣದ ಕುಂದಾಪ್ರ ಕನ್ನಡ ಅಧ್ಯಯನ ಪೀಠವನ್ನು ಸ್ಥಾಪಿಸಿದೆ. ಈ ಪೀಠ ಸ್ಥಾಪನೆಯಾದ ಬಳಿಕ ಭಾಷೆಯ ಅಭಿವೃದ್ಧಿಗೆ ಪೂರಕವಾಗಿ ಹಲವು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಸಾಂಪ್ರದಾಯಿಕ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಿಗೆ ಈ ನೆಲದ ಕಲೆ, ಸಂಗೀತ, ಸಾಹಿತ್ಯ ಮತ್ತು ಸಾಂಸ್ಕೃತಿಕ ಸೊಗಡನ್ನು ಪರಿಚಯಿಸುವ ಮಹತ್ತರ ಆಶಯದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

    ಇತ್ತೀಚಿನ ದಿನಗಳಲ್ಲಿ ಮನೆಗಳಲ್ಲೇ ಕುಂದಾಪ್ರ ಕನ್ನಡ ಮಾತನಾಡುವುದು ಕಡಿಮೆಯಾಗುತ್ತಿರುವುದಕ್ಕೆ ಕಳಕಳಿ ವ್ಯಕ್ತಪಡಿಸಿದ ಅವರು, ಕೆಲವರು ತಮ್ಮ ಮಕ್ಕಳೊಂದಿಗೆ ಶುದ್ಧ ಕನ್ನಡದಲ್ಲಿ, ಇನ್ನು ಕೆಲವರು ಇಂಗ್ಲೀಷ್‌ನಲ್ಲಿ ಮಾತನಾಡುತ್ತಾರೆ. ಮುಂಬೈನಲ್ಲಿರುವವರು ಮನೆಗಳಲ್ಲಿ ಮರಾಠಿಯಲ್ಲೇ ಮಾತನಾಡುತ್ತಾರೆ. ಆದರೆ ನಾವು ನಮ್ಮ ಕುಂದಾಪ್ರ ಕನ್ನಡವನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕಾಗಿದೆ. ಮಕ್ಕಳಲ್ಲೂ ಈ ಭಾಷೆಯ ಅಭಿಮಾನ ಹೆಚ್ಚಿಸಬೇಕಾಗಿದೆ ಎಂದು ಕರೆ ನೀಡಿದರು.

    ಸುಜ್ಞಾನ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ರಮೇಶ್ ಶೆಟ್ಟಿ ಮಾತನಾಡಿ, ಬೈಂದೂರು, ಕುಂದಾಪುರ, ಬ್ರಹ್ಮಾವರ ಹಾಗೂ ಹೆಬ್ರಿ ತಾಲೂಕಿನ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ಈ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

    ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪದವಿ ಪೂರ್ವ ವಿಭಾಗದ ವಿಜೇತರಿಗೆ ಪ್ರಥಮ ರೂ.10,000, ದ್ವಿತೀಯ ರೂ.7,000 ಹಾಗೂ ತೃತೀಯ ರೂ.5,000 ನಗದು ಬಹುಮಾನ ನೀಡಲಾಗುವುದು. ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರೌಢಶಾಲಾ ವಿಭಾಗದ ವಿಜೇತರಿಗೆ ಪ್ರಥಮ ರೂ.5,000, ದ್ವಿತೀಯ ರೂ.3,000 ಹಾಗೂ ತೃತೀಯ ರೂ.2,000 ಬಹುಮಾನ ನೀಡಲಾಗುವುದಲ್ಲದೆ, ಎಲ್ಲಾ ಸ್ಪರ್ಧಿಗಳಿಗೆ ಪ್ರಮಾಣಪತ್ರ ವಿತರಿಸಲಾಗುವುದು ಎಂದು ಹೇಳಿದರು.

    Click here

    Click here

    Click here

    Call us

    Call us

    ಸುಜ್ಞಾನ ಎಜುಕೇಶನ್ ಟ್ರಸ್ಟ್ ಕೋಶಾಧಿಕಾರಿ ಭರತ್ ಕುಮಾರ್ ಶೆಟ್ಟಿ ಮಾತನಾಡಿ, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಸಾಧಕರಿಗೆ ಟ್ರಸ್ಟ್ ವತಿಯಿಂದ ಪ್ರತಿಷ್ಠಿತ ವಿದ್ಯಾರಣ್ಯ ಪುರಸ್ಕಾರ ಪ್ರದಾನ ಮಾಡಲಾಗುವುದು. ಈ ಬಾರಿ ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ಕುಲಪತಿ ರಾಜು ಮೊಗವೀರ ಹಾಗೂ ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಸಂಯೋಜಕ ಪ್ರೊ. ನಾಗಪ್ಪಗೌಡ ಅವರನ್ನು ಉದ್ಘಾಟನಾ ಸಮಾರಂಭದಲ್ಲಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು.

    ಸಂಜೆ 4 ಗಂಟೆಗೆ ಬಹುಮಾನ ವಿತರಣೆ ಹಾಗೂ ಸಮಾರೋಪ ಸಮಾರಂಭ ನಡೆಯಲಿದ್ದು, ವಿವಿಧ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಕೋಟೇಶ್ವರ, ಶಿರಿಯಾರ ಹಾಗೂ ಬಿದ್ಕಲ್‌ಕಟ್ಟೆ ಭಾಗಗಳಿಂದ ಆಗಮಿಸುವವರಿಗೆ ಸಂಸ್ಥೆಯ ಬಸ್ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದು ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಸಲಹಾ ಸಮಿತಿ ಸದಸ್ಯರಾದ ಪಂಜು ಗಂಗೊಳ್ಳಿ, ಉದಯ ಶೆಟ್ಟಿ ಪಡುಕೆರೆ ಉಪಸ್ಥಿತರಿದ್ದರು. ಸಮಿತಿ ಸದಸ್ಯ ಹಾಗೂ ಪತ್ರಕರ್ತ ಕೆ.ಸಿ. ರಾಜೇಶ್ ಸ್ವಾಗತಿಸಿ ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿಎ ಫೌಂಡೇಶನ್ ಫಲಿತಾಂಶ ಪ್ರಕಟ: ಕಾರ್ಕಳದ ಕ್ರಿಯೇಟಿವ್  ಕಾಲೇಜಿನ 14 ವಿದ್ಯಾರ್ಥಿಗಳು ತೇರ್ಗಡೆ

    04/07/2026

    ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

    04/07/2026

    ಎಸ್.ಐ.ಆರ್: ವಂಡ್ಸೆ ಗ್ರಾಮ ಪಂಚಾಯತ್‌ನಲ್ಲಿ ಮತದಾರರ ಸಹಾಯ ಕೇಂದ್ರ ಆರಂಭ

    03/07/2026
    Leave A Reply Cancel Reply

    six − 2 =

    Call us

    Click Here

    Call us

    Call us

    Call us
    Highest Viewed Recently
    • ಜುಲೈ 6ರಂದು ಯಡಾಡಿ – ಮತ್ಯಾಡಿಯಲ್ಲಿ ಕುಂದಾಪ್ರ ಕನ್ನಡ ʼವಾಲ್ಬೆಲ್ಲʼ ಕಾರ್ಯಕ್ರಮ
    • ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ
    • ಸಿಎ ಫೌಂಡೇಶನ್ ಫಲಿತಾಂಶ ಪ್ರಕಟ: ಕಾರ್ಕಳದ ಕ್ರಿಯೇಟಿವ್  ಕಾಲೇಜಿನ 14 ವಿದ್ಯಾರ್ಥಿಗಳು ತೇರ್ಗಡೆ
    • ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
    • ಎಸ್.ಐ.ಆರ್: ವಂಡ್ಸೆ ಗ್ರಾಮ ಪಂಚಾಯತ್‌ನಲ್ಲಿ ಮತದಾರರ ಸಹಾಯ ಕೇಂದ್ರ ಆರಂಭ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.