ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ತೆಕ್ಕಟ್ಟೆಯ ವಿಶ್ವವಿನಾಯಕ ಸಿ.ಬಿ.ಎಸ್.ಸಿ. ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ರಚನೆಯನ್ನು ಮಾಡಿ ಪದಗ್ರಹಣ ಕಾರ್ಯಕ್ರಮವನ್ನು ಆಯೋಜಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಹಾಂತೇಶ್ ಜಾಬ ಗೌಡ ಕ್ರೈಂ ಬ್ರಾಂಚ್ ಕೋಟ ಪೊಲೀಸ್ ಸ್ಟೇಷನ್ ಅವರು ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಪದಗ್ರಹಣ ಮಾಡಿದರು. ವಿದ್ಯಾರ್ಥಿ ನಾಯಕರನ್ನು ಅಭಿನಂದಿಸಿ ಉತ್ತಮ ನಾಯಕತ್ವವನ್ನು ನಡೆಸಲು ಶಿಸ್ತು ಸಹಾನುಭೂತಿ ಸೃಜನಶೀಲತೆ ಬಹುಮುಖ್ಯ ಅಂಶವೆಂದು ತಿಳಿಸಿದರು. ಇತರರನ್ನು ಮುನ್ನಡೆಸಿ ಮುನ್ನಡೆಯುವುದೇ ನಿಜವಾದ ನಾಯಕತ್ವ ಎಂದು ತಿಳಿಸಿದರು. ಮಾನವೀಯ ಮೌಲ್ಯಗಳು ದೇಶದ ಸಂವಿಧಾನ ಹಾಗೂ ಕಾನೂನಿನ ಬಗ್ಗೆ ಜಾಗೃತಿ ಮೂಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಂ. ಪ್ರಭಾಕರ್ ಶೆಟ್ಟಿ ಅವರು ಮಾತನಾಡಿ, ನಾಯಕರಾದವರು ಇತರರಿಗೆ ಸ್ಪೂರ್ತಿದಾಯಕವಾಗಿರಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರು ಕಾಲೇಜ್ ಪ್ರಾಂಶುಪಾಲರು ಆಡಳಿತ ನಿರ್ದೇಶಕರು ಶಿಕ್ಷಕರು ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿ ನಾಯಕಿಯಾಗಿ ವಾಸವಿ ಕಾಂಚನ್ ಹಾಗೂ ಉಪನಾಯಕನಾಗಿ ಮನೀಶ್ ಶೆಟ್ಟಿ ಆಯ್ಕೆಯಾದರು ವಿದ್ಯಾರ್ಥಿಗಳಾದ ವನ್ಮಯಿ ಕಾರ್ಯಕ್ರಮ ನಿರೂಪಿಸಿ, ಆಯುಷ್ ಕೆ.ಎಸ್. ಸ್ವಾಗತಿಸಿ, ಚಿರಾಗ್ ಶೆಟ್ಟಿ ವಂದಿಸಿದರು.
















