Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್‌ನಿಂದ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರ
    alvas nudisiri

    ಆಳ್ವಾಸ್‌ನಿಂದ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ
    : ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಹೆಚ್ಚುತ್ತಿರುವ ಮದ್ಯವ್ಯಸನದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಹಾಗೂ ಅವರಿಗೆ ಗೌರವಯುತ, ಆರೋಗ್ಯಕರ ಮತ್ತು ಸ್ವಾವಲಂಬಿ ಬದುಕನ್ನು ಮರಳಿ ಕಲ್ಪಿಸುವ ಉದ್ದೇಶದಿಂದ ಆಳ್ವಾಸ್ ಪುನರ್ಜನ್ಮ, ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ರಿ., ಧರ್ಮಸ್ಥಳ ಇವರ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರಕ್ಕೆ ಶನಿವಾರ ಚಾಲನೆ ನೀಡಲಾಯಿತು.

    Click Here

    Call us

    Click Here

    ಮುಖ್ಯ ಅತಿಥಿಯಾಗಿ ಮಾತನಾಡಿದ ಮಂಗಳೂರಿನ ಪ್ರಜ್ಞಾ ಕೌನ್ಸೆಲಿಂಗ್ ಸೆಂಟರ್‌ನ ಸಂಸ್ಥಾಪಕಿ ಡಾ. ಹಿಲ್ಡಾ ರಾಯಪ್ಪನ್ “ಮದ್ಯವ್ಯಸನಕ್ಕೆ ಒಳಗಾದವರನ್ನು ಅಪರಾಧಿಗಳಂತೆ ಅಥವಾ ಕಳಂಕದ ಪ್ರತೀಕವಾಗಿ ಕಾಣುವುದು ತಪ್ಪು. ಅದು ಚಿಕಿತ್ಸೆಯಿಂದ ಗುಣಪಡಿಸಬಹುದಾದ ಕಾಯಿಲೆ. ಅವರನ್ನು ದೂರ ತಳ್ಳುವುದಕ್ಕಿಂತ ಆತ್ಮವಿಶ್ವಾಸ ತುಂಬಿ ಹೊಸ ಬದುಕಿನತ್ತ ಕರೆದೊಯ್ಯುವುದು ಸಮಾಜದ ಜವಾಬ್ದಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು.

    ಮಹಿಳೆಯರಿಗಾಗಿ ಪ್ರತ್ಯೇಕ ಮಧ್ಯವರ್ಜನ ಶಿಬಿರವನ್ನು ಆಯೋಜಿಸಿರುವ ಆಳ್ವಾಸ್ ಪುನರ್ಜನ್ಮದ ಕಾರ್ಯವನ್ನು ಶ್ಲಾಘಿಸಿದ ಅವರು, “ಇದು ಹಣ ಸಂಪಾದನೆಗಾಗಿ ನಡೆಸುವ ಕಾರ್ಯಕ್ರಮವಲ್ಲ; ಸಮಾಜದ ಒಳಿತಿಗಾಗಿ ಮಾಡುವ ನಿಸ್ವಾರ್ಥ ಸೇವೆ. ಮಹಿಳೆಯರಿಗಾಗಿ ವಿಶೇಷ ಶಿಬಿರವನ್ನು ಆಯೋಜಿಸಿರುವುದು ಶ್ಲಾಘನೀಯ. ದೇವರು ಈ ಕಾರ್ಯಕ್ಕೆ ಇನ್ನಷ್ಟು ಶಕ್ತಿ ನೀಡಲಿ” ಎಂದರು.

    ಸಮಾಜದಲ್ಲಿ ಪುರುಷರ ಮದ್ಯಪಾನವನ್ನು ಸಹಜವೆಂಬಂತೆ ಒಪ್ಪಿಕೊಳ್ಳುವ ಮನೋಭಾವವಿದ್ದರೂ, ಮಹಿಳೆ ಮದ್ಯವ್ಯಸನಕ್ಕೆ ಒಳಗಾದರೆ ಆಕೆಯನ್ನು ಕೀಳಾಗಿ ನೋಡುವ ಮನೋಭಾವ ಇನ್ನೂ ಇದೆ. ಗಂಡಸು ಕುಡಿಯುವುದು ಗಿಡದ ಕೊಂಬೆಗೆ ಬೆಂಕಿ ಬಿದ್ದಂತೆ; ಹೆಣ್ಣು ಕುಡಿಯುವುದು ಮರದ ಬೇರಿಗೆ ಬೆಂಕಿ ಕೊಟ್ಟಂತೆ. ಏಕೆಂದರೆ ಮಹಿಳೆಯೇ ಕುಟುಂಬದ ಅಡಿಪಾಯ. ಆಕೆಯ ವ್ಯಸನವು ಕೇವಲ ಒಬ್ಬ ವ್ಯಕ್ತಿಯ ಸಮಸ್ಯೆಯಾಗಿರದೆ, ಇಡೀ ಕುಟುಂಬದ ನೆಮ್ಮದಿ, ಮಕ್ಕಳ ಭವಿಷ್ಯ ಹಾಗೂ ಸಮಾಜದ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ ಎಂದರು.

    ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಕುಟುಂಬದ ಸಮಸ್ಯೆಗಳು, ಮಾನಸಿಕ ಒತ್ತಡ, ಆರ್ಥಿಕ ಸಂಕಷ್ಟ ಹಾಗೂ ಸಾಮಾಜಿಕ ಪರಿಸ್ಥಿತಿಗಳಿಂದ ಅನೇಕ ಮಹಿಳೆಯರು ಮದ್ಯವ್ಯಸನಕ್ಕೆ ಒಳಗಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ಮರಳಿ ತರುವ ಇಂತಹ ಪುನರ್ವಸತಿ ಕಾರ್ಯಕ್ರಮಗಳು ಅತ್ಯಂತ ಅಗತ್ಯವಾಗಿದ್ದು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವರವರ ಸಮಾಜಮುಖಿ ಚಿಂತನೆಗೆ ಅಭಿನಂದನೆ ಸಲ್ಲಿಸಿದರು.

    Click here

    Click here

    Click here

    Call us

    Call us

    ಜನಜಾಗೃತಿ ಪ್ರಾದೇಶಿಕ ಕಛೇರಿ, ಬೆಳ್ತಂಗಡಿಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯ್ಸ್ ಮಾತನಾಡಿ, ಮಹಿಳೆಯರ ಘನತೆ ಮತ್ತು ಗೌರವಕ್ಕೆ ಯಾವುದೇ ಧಕ್ಕೆಯಾಗದ ರೀತಿಯಲ್ಲಿ ಶಿಬಿರದ ಸಂಪೂರ್ಣ ವ್ಯವಸ್ಥೆ ಮಾಡಲಾಗಿದೆ. ಈ ಮಧ್ಯವರ್ಜನ ಶಿಬಿರದ ಮೂಲಕ ವ್ಯಸನಿಗಳ ಬದುಕಿನಲ್ಲಿ ಪರಿವರ್ತನೆ ಬಂದು, ಅವರ ಕುಟುಂಬಗಳಲ್ಲಿ ಸುಖ, ಶಾಂತಿ, ಆರೋಗ್ಯ ಮತ್ತು ಆಶಾಭಾವನೆ ಮರುಸ್ಥಾಪನೆಯಾಗಲಿ ಎಂದರು.

    ಕರ‍್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಡಾ ವಿನಯ್ ಆಳ್ವ, ಉದ್ಯಮಿ ಕೆ. ಶ್ರೀಪತಿ ಭಟ್, ಚೌಟರ ಅರಮನೆಯ ಕುಲದೀಪ್ ಎಂ, ಮೂಡುಬಿದಿರೆ ಜನಜಾಗೃತಿ ವೇದಿಕೆಯ ಅಧ್ಯಕ್ಷ ವಾಸುದೇವ್ ನಾಯ್ಕ ಇದ್ದರು.

    ಆಳ್ವಾಸ್ ಪುನರ್ಜನ್ಮದ ಆಪ್ತಸಮಾಲೋಚಕಿ ಸುಮನಾ ಪಿಂಟೋ ಕಾರ್ಯಕ್ರಮ ನಿರೂಪಿಸಿ, ಎಸ್‌ಕೆಆರ್‌ಡಿಪಿಯ ಯೋಜನಾಧಿಕಾರಿ ಗಣೇಶ್ ಆಚಾರ್ಯ ಸ್ವಾಗತಿಸಿ, ಆಳ್ವಾಸ್ ಪುನರ್ಜನ್ಮದ ಆಪ್ತಸಮಾಲೋಚಕ ಲೋಹಿತ್ ಬಂಟ್ವಾಳ್ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜುಲೈ 6ರಂದು ಯಡಾಡಿ – ಮತ್ಯಾಡಿಯಲ್ಲಿ ಕುಂದಾಪ್ರ ಕನ್ನಡ ʼವಾಲ್ಬೆಲ್ಲʼ ಕಾರ್ಯಕ್ರಮ

    04/07/2026

    ಸಿಎ ಫೌಂಡೇಶನ್ ಫಲಿತಾಂಶ ಪ್ರಕಟ: ಕಾರ್ಕಳದ ಕ್ರಿಯೇಟಿವ್  ಕಾಲೇಜಿನ 14 ವಿದ್ಯಾರ್ಥಿಗಳು ತೇರ್ಗಡೆ

    04/07/2026

    ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಉತ್ತೀರ್ಣ

    03/07/2026
    Leave A Reply Cancel Reply

    5 × 4 =

    Call us

    Click Here

    Call us

    Call us

    Call us
    Highest Viewed Recently
    • ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    • ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ನಾಥಪಂಥದ ಪೀರ್‌ ಯೋಗಿ ಜಗದೀಶ್‌ನಾಥ್ ಜೀ ಭೇಟಿ
    • ಆಳ್ವಾಸ್‌ನಿಂದ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರ
    • ನಿವೃತ್ತ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಕೆ.ಎಸ್. ಅವರಿಗೆ ಅಭಿನಂದನೆ
    • ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಪ್ಲೇಸ್ಮೆಂಟ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.