ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ, ಕಾಪು ಮತ್ತು ಬ್ರಹ್ಮಾವರ ತಾಲೂಕಿನ ಎಲ್ಲಾ ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಅರ್ಹ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ಎಸ್.ಎಸ್.ಪಿ ವಿದ್ಯಾರ್ಥಿವೇತನ ಮಂಜೂರಾತಿಗಾಗಿ ಸಂಬಂಧಪಟ್ಟ ಕಾಲೇಜು ಪ್ರಾಂಶುಪಾಲರು ದಾಖಲೆಗಳೊಂದಿಗೆ ನೇರವಾಗಿ ಪರಿಶಿಷ್ಟ ಜಾತಿಯವರು ಇಲಾಖಾ ವೆಬ್‌ಸೈಟ್ SW.KAR.NIC.IN, ಪರಿಶಿಷ್ಟ ಪಂಗಡದವರು ವೆಬ್‌ಸೈಟ್ TW.KAR.NIC.INಅಥವಾ http://ssp.postmatric.karnataka.gov.in ಲಿಂಕ್‌ಗೆ ಲಾಗಿನ್ ಆಗಿ ಸಂಪೂರ್ಣ ಮಾಹಿತಿಯನ್ನು ನೀಡಿ ಕಡ್ಡಾಯವಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ ಪ್ರತಿ ವಿದ್ಯಾರ್ಥಿಗಳು ಬ್ಯಾಂಕ್ ಖಾತೆಗೆ ಆಧಾರ್ ಸೀಡ್ ಹಾಗೂ ಎನ್.ಪಿ.ಸಿ.ಐ ಮ್ಯಾಪಿಂಗ್ ಮಾಡಿಸುವುದು ಕಡ್ಡಾಯವಾಗಿರುತ್ತದೆ ಹಾಗೂ ಪರಿಶಿಷ್ಟ ಪಂಗಡದ ಎಲ್ಲಾ ವಿದ್ಯಾರ್ಥಿಗಳು ಎನ್.ಎಸ್.ಪಿ ಓ.ಟಿ.ಆರ್ ರಿಜಿಸ್ಟರ್ ಮಾಡಿಸುವುದು ಕಡ್ಡಾಯವಾಗಿರುತ್ತದೆ. ಇಲ್ಲವಾದಲ್ಲಿ ಎಸ್.ಎಸ್.ಪಿ ವಿದ್ಯಾರ್ಥಿವೇತನದ ಅರ್ಜಿ ಸಲ್ಲಿಕೆ ಸಂಪೂರ್ಣವಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಮೊ.ನಂ:9480843209 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.











