Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಭಾರತ್ ಸ್ಕೌಟ್ಸ್ ‍‍‍ಗೈಡ್ಸ್ ರಾಷ್ಟ್ರೀಯ ಸಾಂಸ್ಕೃತಿಕ ವಿನಿಮಯ ವಿಭಾಗದ ಉಪರಾಷ್ಟ್ರೀಯ ಆಯುಕ್ತರಾಗಿ ವಿವೇಕ್ ಆಳ್ವ ನೇಮಕ
    alvas nudisiri

    ಭಾರತ್ ಸ್ಕೌಟ್ಸ್ ‍‍‍ಗೈಡ್ಸ್ ರಾಷ್ಟ್ರೀಯ ಸಾಂಸ್ಕೃತಿಕ ವಿನಿಮಯ ವಿಭಾಗದ ಉಪರಾಷ್ಟ್ರೀಯ ಆಯುಕ್ತರಾಗಿ ವಿವೇಕ್ ಆಳ್ವ ನೇಮಕ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ: 
    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ವಿವೇಕ್ ಆಳ್ವ ಅವರನ್ನು ನವದೆಹಲಿ ಕೇಂದ್ರ ಕಚೇರಿಯ ಭಾರತ್ ಸ್ಕೌಟ್ಸ್ ಆ್ಯಂಡ್  ಗೈಡ್ಸ್ ಸಂಸ್ಥೆಯ ಸಾಂಸ್ಕೃತಿಕ ವಿನಿಮಯ ವಿಭಾಗದ ಉಪರಾಷ್ಟ್ರೀಯ ಆಯುಕ್ತರಾಗಿ ನೇಮಕ ಮಾಡಲಾಗಿದೆ.

    Click Here

    Call us

    Click Here

    ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತರಾದ ಡಾ ಪಿ.ಜಿ.ಆರ್. ಸಿಂಧಿಯಾ ರವರ ಶಿಫಾರಸಿನ ಮೇರೆಗೆ, ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ನ ಮುಖ್ಯ ರಾಷ್ಟ್ರೀಯ ಆಯುಕ್ತರು ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಡಾ. ಕೆ.ಕೆ. ಖಂಡೇಲ್ವಾಲ್  ಇವರನ್ನು ಸಾಂಸ್ಕೃತಿಕ ವಿನಿಮಯ ವಿಭಾಗದ ಉಪ ರಾಷ್ಟ್ರೀಯ ಆಯುಕ್ತರನ್ನಾಗಿ ನೇಮಕಗೊಳಿಸಿ ಅಧಿಕೃತ ಆದೇಶ ಹೊರಡಿಸಿದ್ದಾರೆ.

    ಈ ನೇಮಕಾತಿಯು ಕರ್ನಾಟಕಕ್ಕೆ ಹಾಗೂ ಕರಾವಳಿ ಭಾಗಕ್ಕೆ ಹೆಮ್ಮೆಯ ವಿಷಯವಾಗಿದ್ದು, ರಾಷ್ಟ್ರೀಯ ಮಟ್ಟದಲ್ಲಿ ಯುವಜನರಲ್ಲಿ ಸಾಂಸ್ಕೃತಿಕ ಸಾಮರಸ್ಯ, ರಾಷ್ಟ್ರೀಯ ಏಕತೆ ಹಾಗೂ ಅಂತರರಾಷ್ಟ್ರೀಯ ಸ್ನೇಹ ಸಂಬಂಧಗಳನ್ನು ಬಲಪಡಿಸುವ ಜವಾಬ್ದಾರಿಯನ್ನು ಅವರಿಗೆ ವಹಿಸಲಾಗಿದೆ.
    ಉಪ ರಾಷ್ಟ್ರೀಯ ಆಯುಕ್ತ (ಸಾಂಸ್ಕೃತಿಕ ವಿನಿಮಯ) ಹುದ್ದೆಯಲ್ಲಿ ವಿವೇಕ್ ಆಳ್ವರು ದೇಶದ ವಿವಿಧ ರಾಜ್ಯಗಳ ನಡುವೆ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮಗಳನ್ನು ರೂಪಿಸುವುದು, ರಾಷ್ಟ್ರೀಯ ಸಮಗ್ರತಾ ಶಿಬಿರಗಳು, ಯುವ ವಿನಿಮಯ ಯೋಜನೆಗಳು, ಸಾಂಸ್ಕೃತಿಕ ಜಂಬೂರಿಗಳು, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಯುವ ಸಂವಾದಗಳು ಹಾಗೂ ವಿಶ್ವ ಸ್ಕೌಟ್ಸ್–ಗೈಡ್ಸ್ ಸಂಸ್ಥೆಗಳೊಂದಿಗೆ ಸಹಭಾಗಿತ್ವ ಕಾರ್ಯಕ್ರಮಗಳನ್ನು ಸಮನ್ವಯಗೊಳಿಸುವ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ.

    ವಿವಿಧ ಭಾಷೆ, ಸಂಸ್ಕೃತಿ ಮತ್ತು ಪರಂಪರೆಗಳ ನಡುವೆ ಪರಸ್ಪರ ಗೌರವ, ರಾಷ್ಟ್ರೀಯ ಐಕ್ಯತೆ ಹಾಗೂ “ವೈವಿಧ್ಯದಲ್ಲಿ ಏಕತೆ” ಎಂಬ ಭಾರತದ ಮೌಲ್ಯಗಳನ್ನು ಯುವಜನರಲ್ಲಿ ಬೆಳೆಸುವ ಕಾರ್ಯಕ್ಕೂ ಅವರು ನಾಯಕತ್ವ  ವಹಿಸಲಿದ್ದಾರೆ.

    ಇದರ ಜೊತೆಗೆ ವಿವಿಧ ರಾಜ್ಯಗಳ ಪ್ರತಿಭಾವಂತ ಸ್ಕೌಟ್ಸ್ ಮತ್ತು ಗೈಡ್ಸ್ಗಳಿಗೆ ರಾಷ್ಟ್ರೀಯ ವೇದಿಕೆ ಕಲ್ಪಿಸುವುದು, ಭಾರತೀಯ ಸಾಂಸ್ಕೃತಿಕ ಪರಂಪರೆಯನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವ ಕಾರ್ಯಕ್ರಮಗಳನ್ನು ರೂಪಿಸುವುದು, ಯುವಜನರಲ್ಲಿ ನಾಯಕತ್ವ ಕೌಶಲ್ಯ, ಸಂವಹನ ಸಾಮರ್ಥ್ಯ ಮತ್ತು ಅಂತರರಾಷ್ಟ್ರೀಯ ದೃಷ್ಟಿಕೋನವನ್ನು ಬೆಳೆಸುವ ಯೋಜನೆಗಳನ್ನು ಜಾರಿಗೊಳಿಸುವಲ್ಲಿಯೂ ಪ್ರಮುಖ ಪಾತ್ರವಹಿಸಲಿದ್ದಾರೆ.

    Click here

    Click here

    Click here

    Call us

    Call us

    ವಿವೇಕ್ ಆಳ್ವರವರು ಹಲವು ವರ್ಷಗಳಿಂದ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳಿಗೆ ಸಕ್ರಿಯ ಬೆಂಬಲ ನೀಡುತ್ತಿದ್ದು, ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ, ರಾಷ್ಟ್ರೀಯ ಸಮಗ್ರತಾ ಶಿಬಿರ, ಯುವ ನಾಯಕತ್ವ ತರಬೇತಿಗಳು ಹಾಗೂ ವಿವಿಧ ರಾಷ್ಟ್ರೀಯ ಮಟ್ಟದ ಸ್ಕೌಟ್ಸ್–ಗೈಡ್ಸ್ ಕಾರ್ಯಕ್ರಮಗಳ ಯಶಸ್ವಿ ಆಯೋಜನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ವಿಶೇಷವಾಗಿ ಮೂಡುಬಿದಿರೆಯಲ್ಲಿ ನಡೆದ ಅಂತಾ ರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯ ಯಶಸ್ವಿ ಸಂಘಟನೆಯ ಮೂಲಕ ರಾಷ್ಟ್ರೀಯ ಮಟ್ಟದಲ್ಲಿ ಪ್ರಶಂಸೆ ಗಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪ.ಪೂ ಕಾಲೇಜು ವಿದ್ಯಾರ್ಥಿಗಳ ಸಾಧನೆ

    06/07/2026

    ಆಳ್ವಾಸ್‌ನಿಂದ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರ

    04/07/2026

    ಜುಲೈ 6ರಂದು ಯಡಾಡಿ – ಮತ್ಯಾಡಿಯಲ್ಲಿ ಕುಂದಾಪ್ರ ಕನ್ನಡ ʼವಾಲ್ಬೆಲ್ಲʼ ಕಾರ್ಯಕ್ರಮ

    04/07/2026
    Leave A Reply Cancel Reply

    twelve − 2 =

    Call us

    Click Here

    Call us

    Call us

    Call us
    Highest Viewed Recently
    • ಕೋಟ: ಉದ್ಯೋಗ ಸಂಕಲ್ಪ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ಲಿಖಿತ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಕ್ರಮ
    • ಗಂಗೊಳ್ಳಿ ಎಸ್‌.ವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
    • ಭಾರತೀಯ ಸಂಘಟನೆಗಳ ಒಗ್ಗಟ್ಟು, ಪರಸ್ಪರ ಸಹಕಾರ ಮತ್ತು ಸಮನ್ವಯತೆಯ ಮೂಲಕ ಸಾಂಸ್ಕೃತಿಕ ವೈವಿಧ್ಯತೆಯ ಪ್ರಚಾರ ಸಾಧ್ಯ: ಉಪ ರಾಯಭಾರಿ ಸಂದೀಪ್ ಕುಮಾರ್
    • ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪ.ಪೂ ಕಾಲೇಜು ವಿದ್ಯಾರ್ಥಿಗಳ ಸಾಧನೆ
    • ಭಾರತ್ ಸ್ಕೌಟ್ಸ್ ‍‍‍ಗೈಡ್ಸ್ ರಾಷ್ಟ್ರೀಯ ಸಾಂಸ್ಕೃತಿಕ ವಿನಿಮಯ ವಿಭಾಗದ ಉಪರಾಷ್ಟ್ರೀಯ ಆಯುಕ್ತರಾಗಿ ವಿವೇಕ್ ಆಳ್ವ ನೇಮಕ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.