ಗಂಗೊಳ್ಳಿ: ನಮ್ಮ ಸಮಾಜದ ಹೀನ ಸ್ಥಿತಿಯನ್ನು ತೊಳೆಯಬೇಕು. ಸಮಾಜಕ್ಕಾಗಿ ನಮ್ಮ ಜೀವನವನ್ನು ಪಣ ಇಡಬೇಕು. ಸೇವೆಯ ಮೂಲಕ ತಮ್ಮ ಜೀವನವನ್ನು ಧನ್ಯವಾಗಿರಿಸಬೇಕು ಎಂದು ಉಡುಪಿ ಜಿಲ್ಲೆಯ ಜಿಲ್ಲಾ ಸೇವಾ ಪ್ರಮುಖ್ ಜಯಂತ್ ಮಲ್ಪೆ ಹೇಳಿದರು.
ಅವರು ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಹಾಗೂ ಶ್ರೀ ಮಹಾಕಾಳಿ ಸೇವಾ ಸಮಿತಿ ಶ್ರೀ ಮಹಾಂಕಾಳಿ ಮಠ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಜರಗಿದ ಸೇವಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಉಡುಪಿಯ ಇನ್ಯೂರೆನ್ಸ್ ಸರ್ವೇಯರ್ ಜ್ಞಾನದಾಸ ಕಾನೋಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭ ನಿವೃತ್ತ ಮುಖ್ಯೋಪಾಧ್ಯಾಯ ದೇವರಾಯ ಕಾನೋಜಿ ಗಂಗೊಳ್ಳಿ ಅವರನ್ನು ಸನ್ಮಾನಿಸಲಾಯಿತು. ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಸುಮತಿ, ಶಿಶು ಮಂದಿರದ ಸದಸ್ಯರಾದ ಜಿ.ಗಣಪತಿ ಶಿಪಾ, ಬಿ.ರಾಘವೇಂದ್ರ ಪೈ, ವಸಂತಿ ಎನ್.ಖಾರ್ವಿ, ಮಾತಾಜಿ ಸುಮನಾ, ಮಾತಾಜಿ ಶೈಲಾ ಉಪಸ್ಥಿತರಿದ್ದರು.
ಶಿಶು ಮಂದಿರದ ಅಧ್ಯಕ್ಷ ಶ್ರೀನಿವಾಸ ಎಂ. ಸ್ವಾಗತಿಸಿದರು. ಸಂಚಾಲಕ ಡಾ.ಕಾಶೀನಾಥ ಪೈ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಷಾ ಪಿ.ಮಡಿವಾಳ ಸನ್ಮಾನಿತರನ್ನು ಪರಿಚಯಿಸಿದರು. ವಿಜಯಶ್ರೀ ವಿ.ಆಚಾರ್ಯ ಮತ್ತು ಅಶ್ವಿತಾ ಜಿ.ಪೈ ಸಾಂಸ್ಕೃತಿಕ ಕಾರ್ಯಕ್ರಮ ನಿರೂಪಿಸಿದರು. ಶಿಶು ಮಂದಿರದ ಮಾಜಿ ಅಧ್ಯಕ್ಷ ಬಿ.ಲಕ್ಷ್ಮೀಕಾಂತ ಮಡಿವಾಳ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಸವಿತಾ ಯು.ದೇವಾಡಿಗ ವಂದಿಸಿದರು.